ಬೆಂಗಳೂರು: 2024-25ನೇ ಸಾಲಿನ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖೀತ ಪರೀಕ್ಷೆ ನಡೆಸಿ ಭರ್ತಿ ಮಾಡುವ ಸಂಬಂಧ ಶಾಲಾ ಶಿಕ್ಷಣ ಇಲಾಖೆಯು ಅಧಿಸೂಚನೆ ಹೊರಡಿಸಿದೆ.ಸಹ ಶಿಕ್ಷಕರ ಹುದ್ದೆಗಳ ಭರ್ತಿಗೆ ಲಿಖಿತ ಪರೀಕ್ಷೆ.
ಲಿಖಿತ ಪರೀಕ್ಷೆ 1 ಮತ್ತು 2ನ್ನು ತಲಾ 85 ಅಂಕಗಳಿಗೆ, ಅಭ್ಯರ್ಥಿಗಳ ಹೆಚ್ಚಿನ ವಿದ್ಯಾರ್ಹತೆಗೆ 20 ಅಂಕಗಳು ಮತ್ತು ಸೇವಾ ಅನುಭವಕ್ಕೆ 10 ಅಂಕಗಳು ಸೇರಿ ಒಟ್ಟು 200 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 26ರ ವರೆಗೆ ಅರ್ಜಿ ಸಲ್ಲಿಸಬಹುದು. ಜೂನ್ 8ರಿಂದ 10ರ ವರೆಗೆ ಪರೀಕ್ಷೆ ನಡೆಸಲಾಗುತ್ತದೆ.