ಬೆಂಗಳೂರು.03.ಏಪ್ರಿಲ್.25:- ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ‘ಶೀಘ್ರದಲ್ಲೇ ನಡೆಸುವ ಅಗತ್ಯವಿದೆ ಮೀಸಲಾತಿ ಅಂತಿಮಗೊಳಿಸಿ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಲಾಗಿದೆ.
ನ್ಯಾಯಾಲಯದ ತಕರಾರು ಬಗೆಹರಿದಿದೆ. ಸರ್ಕಾರ ಶೀಘ್ರದಲ್ಲೇ ಚುನಾವಣೆ ನಡೆಸಲಿದೆ” ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಅಧಿಕಾರ ವಿಕೇಂದ್ರೀಕರಣದ ಆಶಯದಂತೆ ಸ್ಥಳೀಯ ಆಡಳಿತವನ್ನು ಬಲಪಡಿಸುವುದು ಚುನಾಯಿತ ಸರ್ಕಾರದ ಜವಾಬ್ದಾರಿ. ಈಗಲೂ ಚುನಾವಣೆ ನಡೆಸದಿದ್ದರೆ ಅಸಂವಿಧಾನಿಕವಾಗಲಿದೆ ಎಂಬುದು ನನ್ನ ವೈಯಕ್ತಿಕ ಹಾಗೂ ಸರ್ಕಾರದ ನಿಲುವು ಎಂದು ಸಚಿವರು ತಿಳಿಸಿದ್ದಾರೆ.
ಚುನಾವಣೆ ನಡೆಸಲು ಬೇಸಿಗೆಯಲ್ಲಿ ತಾಪಮಾನ ಹೆಚ್ಚು ಎನ್ನುತ್ತಾರೆ. ಮಳೆಗಾಲದಲ್ಲಿ ವಿಶೇಷವಾಗಿ ಕರಾವಳಿ ಭಾಗದ ಜನರಿಗೆ ಮತದಾನ ಕಷ್ಟ ಎನ್ನುತ್ತಾರೆ. ಸಮಸ್ಯೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಚುನಾವಣೆಗಳು ಬೇಸಿಗೆಯಲ್ಲೇ ನಡೆಯುತ್ತವೆ. ಹಾಗಾಗಿ, ಇಂತಹ ಸಮಸ್ಯೆ ಮತ್ತು ಕಾರಣಗಳನ್ನು ಮುಂದಿಟ್ಟು ಚುನಾವಣೆಯನ್ನು ಮತ್ತಷ್ಟು ಮುಂದೂಡಲಾಗದು. ಎರಡು ತಿಂಗಳಲ್ಲೇ ಚುನಾವಣೆ ಪ್ರಕ್ರಿಯೆ ನಡೆಸುವ ಉದ್ದೇಶವಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.