03 ಡಿಸೆಂಬರ್ 24.ಬೆಳಗಾವಿ:-ರಾಜ್ಯದಲ್ಲಿ ಕನಿಷ್ಠ ವೇತನ 26 ಸಾವಿರ ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ. ವತಿಯಿಂದ ಇಲ್ಲಿನ ಸುವರ್ಣ ವಿಧಾನಸೌಧ ಬಳಿ ಬೆಳಗಾವಿ ಡಿ.17ರಂದು ಪ್ರತಿಭಟನೆ ನಡೆಸಲಾಗುವುದು.
ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚಿನ ವೇತನ ನೀಡುವುದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಬಜೆಟ್‌ನಲ್ಲಿ ಹೆಚ್ಚಿನ ಹಣ ಮೀಸಲಿಡಬೇಕು. 2023ರ ಆದೇಶದಂತೆ ಗ್ರಾಚ್ಯುಟಿ ಹಣ ಬಿಡುಗಡೆಗೊಳಿಸಬೇಕು. ಗುಜರಾತ್ ಹೈಕೋರ್ಟಿನ ತೀರ್ಪಿನಂತೆ ಅಂಗನವಾಡಿ ನೌಕರರನ್ನು ‘ಸಿ’ ಅಥವಾ ‘ಡಿ’ ದರ್ಜೆ ನೌಕರರಾಗಿ ಪರಿಗಣಿಸಿ, ಸೇವೆ ಕಾಯಂಗೊಳಿಸಬೇಕು’ ಎಂದು ಒತ್ತಾಯಿಸಿದರು.
‘ಅಂಗನವಾಡಿ ಕೇಂದ್ರಗಳಿಗೆ ಮೂಲಸೌಕರ್ಯ ಒದಗಿಸಬೇಕು. ಖಾಲಿ ಇರುವ ಹುದ್ದೆಗಳನ್ನು 3 ತಿಂಗಳೊಳಗೆ ಭರ್ತಿ ಮಾಡಬೇಕು. ಇಲ್ಲದಿದ್ದರೆ ಈಗ ಕಾರ್ಯ ನಿರ್ವಹಿಸುತ್ತಿರುವವರಿಗೇ ಹೆಚ್ಚುವರಿ ವೇತನ ಕೊಡಬೇಕು’ ಎಂದು ಆಗ್ರಹಿಸಿದರು.
‘ಪ್ರತಿಬಾರಿ ಅಧಿವೇಶನದಲ್ಲಿ ನಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಡುತ್ತ ಬಂದಿದ್ದೇವೆ. ಈ ಪೈಕಿ ಒಂದಿಷ್ಟು ಬೇಡಿಕೆ ಈಡೇರಿವೆ. ಈ ಸಲದ ಹೋರಾಟದಲ್ಲೂ ಸರ್ಕಾರದಿಂದ ನಮಗೆ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸವಿದೆ’ ಎಂದರು.
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…