05/08/2025 10:27 AM

Translate Language

Home » ಲೈವ್ ನ್ಯೂಸ್ » ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ
ಅಪೂರ್ಣ ಅರ್ಜಿಗಳನ್ನು ಪೂರ್ಣಗೊಳಿಸಲು ಜನವರಿ.5 ರವರೆಗೆ ಅವಕಾಶ

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ
ಅಪೂರ್ಣ ಅರ್ಜಿಗಳನ್ನು ಪೂರ್ಣಗೊಳಿಸಲು ಜನವರಿ.5 ರವರೆಗೆ ಅವಕಾಶ

Facebook
X
WhatsApp
Telegram

26ಡಿ24:- ಜಿಲ್ಲೆಯ ಬೀದರ, ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ ಹಾಗೂ ಸಂತಪೂರ(ಔ)- ಔರಾದ್ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 148 ಅಂಗನವಾಡಿ ಕಾರ್ಯಕರ್ತೆ ಹಾಗೂ 270 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಆಯ್ಕೆ ಸಮಿತಿ ಬೀದರ ಇವರ ಅನುಮತಿ ಪಡೆದುಕೊಂಡು ಸರಕಾರದ ಆದೇಶದಂತೆ ಆನಲೈನ್ ಅರ್ಜಿ ಕರೆಯಲಾಗಿದೆ ಅನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿತ್ತು.


ಅದರಂತೆ ಅನ್‍ಲೈನ್‍ನಲ್ಲಿ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ವೆಬ್‍ಸೈಟ್‍ನಲ್ಲಿ ಒಟ್ಟು 04 ಹಂತಗಳಿದ್ದು, ಇದರಲ್ಲಿ ಕೆಲವು ಅರ್ಜಿದಾರರಿಗೆ 01ನೇ ಹಂತದಲ್ಲಿಯೇ  “Application Successfully Uploaded”    ಎಂಬ ಸಂದೇಶಗಳು ಅರ್ಜಿದಾರರ ಮೊಬೈಲ್‍ಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಜಿಲ್ಲೆಯಲ್ಲಿ ಅಂಗನವಾಡಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 2,615 ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 1,621 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ.

ಅರ್ಜಿ ಸಲ್ಲಿಸುವ 04 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ದಿನಾಂಕ: 26-12-2024 ರಿಂದ 05-01-2025 ರವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್‍ಸೈಟ್‍ನಲ್ಲಿ ಇಲಾಖಾ ವತಿಯಿಂದಲೇ ಅವಕಾಶ ನೀಡಿ ಆದೇಶಿಸಲಾಗಿರುತ್ತದೆ. ಆದ್ದರಿಂದ ಅಪೂರ್ಣ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಪೂರ್ಣಗೊಳಿಸಲು ದಿನಾಂಕ: 26-12-2024 ರಿಂದ 05-01-2025 ರವರೆಗೆ ಕಾಲಾವಕಾಶ ನಿಗದಿಪಡಿಸಿದೆ.


ಅಭ್ಯರ್ಥಿಗಳು 04 ಹಂತಗಳಲ್ಲಿ ಪೂರ್ಣಗೊಳಿಸಿದಬೇಕಾಗಿರುವ ವಿವರ: ಒಂದನೇ ಹಂತದಲ್ಲಿ ಅನ್‍ಲೈನ್ ತಂತ್ರಾಂಶದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡುವುದು, ಎರಡನೇ ಹಂತದಲ್ಲಿ ತಮ್ಮ ಭಾವಚಿತ್ರ ಹಾಗೂ ಸಹಿಯನ್ನು ಅಪ್‍ಲೋಡ್ ಮಾಡುವುದು. ಮೂರನೇ ಹಂತದಲ್ಲಿ ತಮ್ಮ ದಾಖಲಾತಿಗಳನ್ನು ಅಪ್‍ಲೋಡ್ ಮಾಡುವುದು. ನಾಲ್ಕನೇ ಹಂತದಲ್ಲಿ ತಮ್ಮ ಆಧಾರ್ ಸಂಖ್ಯೆ ನಮೂದಿಸಿ, ಇ-ಹಸ್ತಾಕ್ಷರದೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸುವುದು.


ಅಪೂರ್ಣವಾದ ಅರ್ಜಿಗಳ ಅರ್ಜಿ ಸಂಖ್ಯೆ ಹಾಗೂ ಇತರೆ ವಿವರಗಳನ್ನೊಳಗೊಂಡ ಮಾಹಿತಿಯು ಸಂಬಂಧಪಟ್ಟ ಶಿಶು ಅಬಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಸೂಚನಾ ಫಲಕದಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Source: www.prajaprabhat.com

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD