|

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಆಕಾಂಕ್ಷಿಗಳಿಗೆ ಎಚ್ಚರಿಕೆ

ಕೊಪ್ಪಳ.12.ಜೂನ.25:-ಕೊಪ್ಪಳ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ 09 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 88 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳ ಭರ್ತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಧ್ಯವರ್ತಿಗಳ ಮೋಸಕ್ಕೆ ಬಲಿಯಾಗದಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.


09 ಅಂಗನವಾಡಿ ಕಾರ್ಯಕರ್ತೆ ಹಾಗೂ 88 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳ ಭರ್ತಿಗಾಗಿ ದಿನಾಂಕ: 23-09-2024 ರಿಂದ 23-10-2024 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಅದರಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲು ಕ್ರಮ ವಹಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗುವುದು. ಅಂತಿಮ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿಯಿಂದ ಅಭ್ಯರ್ಥಿಗಳ ವಿಳಾಸಕ್ಕೆ ನೋಂದಾಯಿತ ಅಂಚೆ ಮೂಲಕ ಕಳುಹಿಸಲಾಗುವುದು.


ಆದ್ದರಿಂದ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳು ಅಥವಾ ಇದಕ್ಕೆ ಸಂಬoಧಿಸಿದoತೆ ಯಾರೊಂದಿಗೂ ಹಣಕಾಸಿನ ವ್ಯವಹಾರ ಮಾಡಬಾರದು ಎಂದು ಕೊಪ್ಪಳ ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

Similar Posts

Leave a Reply

Your email address will not be published. Required fields are marked *