ಅಂಗನವಾಡಿ ನೇಮಕಾತಿ: ಅಪೂರ್ಣ ಅರ್ಜಿಗನ್ನು ಪೂರ್ಣಗೊಳಿಸಲು ಜ.5 ರವರೆಗೆ ಅವಕಾಶ.!


04.ಜಿ.25.ಬೀದರ :- ಬೀದರ ಜಿಲ್ಲೆಯ ಬೀದರ, ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ ಹಾಗೂ ಸಂತಪೂರ(ಔ) ಶಿಶು ಅಭಿವೃದ್ಧಿಯೋಜನಾ ವ್ಯಾಪ್ತಿಯಲ್ಲಿನ ವಿವಿಧಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರ ಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 148 ಅಂಗನವಾಡಿ ಕಾರ್ಯಕರ್ತೆ ಹಾಗೂ 270 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳನ್ನು ಭರ್ತಿಮಾಡಲು ಆನ್‌ಲೈನ್ ಮುಖಾಂತರ ಅರ್ಜಿ ಅಹ್ವಾನಿಸಲಾಗಿತ್ತು.

ಅದರಂತೆ ಆನ್‌ಲೈನ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಒಟ್ಟು 04 ಹಂತಗಳಿದ್ದು, ಇದರಲ್ಲಿ ಕೇಲವು ಅರ್ಜಿದಾರರಿಗೆ 01 ನೇ ಹಂತದಲ್ಲಿಯೇ  “Application successfully uploaded” ಎಂಬ ಸಂದೇಶಗಳು ಅರ್ಜಿದಾರರ ಮೊಬೈಲ್‌ಗೆ ಸ್ವಿಕೃತವಾಗಿರುವುದರಿಂದ, ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಜಿಲ್ಲೆಯಲ್ಲಿ ಅಂಗನವಾಡಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 2,615 ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 1,621 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ.


ದಿನಾಂಕ:20-12-2024ರ ಸರಕಾರದ ಆದೇಶದಲ್ಲಿ ಅರ್ಜಿ ಸಲ್ಲಿಸುವ 04 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ದಿನಾಂಕ:26-12-2024 ರಿಂದ 05-01-2025ರ ವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್‌ಸೈಟ್‌ನಲ್ಲಿ ಇಲಾಖಾ ವತಿಯಿಂದಲೇ ಅವಕಾಶ ನೀಡಿ ಆದೇಶಿಸಲಾಗಿರುತ್ತದೆ. ಆದ್ದರಿಂದ ಅಪೂರ್ಣ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಪೂರ್ಣಗೊಳಿಸಲು ದಿನಾಂಕ:26-12-2024 ರಿಂದ 05-01-2025ರ ವರೆಗೆ ಕಾಲಾವಕಾಶ ನಿಗದಿಪಡಿಸಿದೆ.

ಈ ಹಿಂದೆ ಪ್ರಕಟಿಸಿರುವ ತಾತ್ಕಾಲಿಕ ಪಟ್ಟಿಯು ತಾತ್ಕಾಲಿಕವಾಗಿದ್ದು, ಈ ಮೇಲ್ಕಂಡ ಸೂಚಿಸಿರುವ ಅಪೂರ್ಣ ಅರ್ಜಿಗಳನ್ನು ಅರ್ಜಿದಾರರು ಪೂರ್ಣಗೊಳಿಸಿದ ನಂತರ ಸದರಿ ಅರ್ಜಿಗಳನ್ನು ಮತ್ತೊಮ್ಮೆ ತಾಲ್ಲೂಕು ಅರ್ಜಿ ಪರಿಶೀಲನಾ ಸಮಿತಿ ಅರ್ಜಿಗಳನ್ನು ಪರಿಶೀಲಿಸಿ, ಜಿಲ್ಲಾ ಮಟ್ಟದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆ ಸಮಿತಿಗೆ ಶಿಫಾರಸ್ಸು ಸಲ್ಲಿಸಿದ ನಂತರ ಜಿಲ್ಲಾ ಸಮಿತಿ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗುವುದು. ಸದರಿ ತಾತ್ಕಾಲಿಕ ಪಟ್ಟಿಯಲ್ಲಿ ಅಪೂರ್ಣ ಅರ್ಜಿಗಳನ್ನು ಪರಿಗಣಿಸಿ, ಸ್ಥಳಿಯತೆ ಹಾಗೂ ಮೇರಿಟ್ (ಅಂಕಗಳ) ಆಧಾರದ ಮೇಲೆ ಪ್ರಕಟಿಸಲಾಗುವುದು.

ಅರ್ಜಿದಾರರು, ಯಾವುದೇ ಆಸೆ ಆಕಾಂಕ್ಷೆಗಳಿಗೆ ಒಳಗಾಗಬಾರದು ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please Join Prja Prabhat WhatsApp group https://chat.whatsapp.com/CUtlsWntUkU31M8FTGAYy1

https://chat.whatsapp.com/CUtlsWntUkU31M8FTGAYy1

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

2 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

3 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

3 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

4 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

4 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

5 hours ago