ಬೆಂಗಳೂರು.06.ಮಾರ್ಚ್.25:- ರಾಜ್ಯದಲ್ಲಿ ಸರಕಾರ ದಿಂದ ಉಚಿತವಾಗಿ ಮಕ್ಕಳ ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರಗಳ ಕಿಟ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡು ಕಾಳಸಂತೆಯಲ್ಲಿ ಮಾರಾಟ ಮಾಡಿದ ಆರೋಪ ಕೇಳಿ ಬರುತಿದೆ.
ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರ ಬಡವರ್ ಮಕಳ ಮತ್ತು ಅಂಗನವಾಡಿ ಕೇಂದ್ರದ ಮಕ್ಕಳು ಮತ್ತು ಬಾಣಂತಿಯರಿಗೆ ವಿತರಿಸಬೇಕಾದ ಪೌಷ್ಟಿಕ ಆಹಾರಗಳ ಕಿಟ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡು ಕಾಳಸಂತೆಯಲ್ಲಿ ಮಾರಾಟ ಮಾಡಿದ ಘಟನೆಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಇದರಲ್ಲಿ ಭಾಗಿಯಾದ ಪ್ರತಿಯೊಬ್ಬ ಆರೋಪಿಯನ್ನು ಬಂಧಿಸಿ, ಕಾನೂನಿನ ಅಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಆರೋಪಿಗಳ ರಕ್ಷಣೆಗೆ ಪ್ರಯತ್ನಿಸಲಾಗಿದೆ ಎಂಬ ವಿರೋಧ ಪಕ್ಷದ ನಾಯಕರು ಆರೋಪಕ್ಕೆ ಸಂಬಂಧಿಸಿದಂತೆ ಅವರು ವಿಡಿಯೋ- ಆಡಿಯೋ ರೆಕಾರ್ಡ್‌ಗಳನ್ನು ಸಾಕ್ಷಿಯಾಗಿ ನೀಡಿದರೆ ಸಂಪೂರ್ಣ ತನಿಖೆ ನಡೆಸಲಾಗುತ್ತದೆ.
ಇಂತಹ ಘಟನೆ ಕುರಿತು ನಾವು ಶೂನ್ಯ ಸಹಿಷ್ಣುತೆ ಹೊಂದಿದ್ದೇವೆ. ಬಡವರಿಗೆ, ಮಕ್ಕಳಿಗೆ ಅಥವಾ ಬಾಣಂತಿಯರಿಗೆ ತಲುಪಬೇಕಾದ ಸವಲತ್ತುಗಳು ವಂಚಕರ ಪಾಲಾಗುವುದಕ್ಕೆ ಅವಕಾಶ ನೀಡುವುದಿಲ್ಲ.
ನಮಸ್ಕಾರ ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com