ಹೊಸ ದೆಹಲಿ.01.ಮೇ.25:-ಅಂಗವಿಕಲರು ಮತ್ತು ದೃಷ್ಟಿ ನ್ಯೂನತೆ ಇರುವವರಿಗೆ ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಹಾಗೂ ಬ್ಯಾಂಕ್ ಖಾತೆ ತೆರೆಯಲು, ಸೌಲಭ್ಯಗಳ ಲಭ್ಯತೆಯೂ ಮೂಲಭೂತ ಹಕ್ಕು ಎಂದು ಘೋಷಿಸಿರುವ ಸುಪ್ರೀಂ ಕೋರ್ಟ್, ಅಂಗವಿಕಲರು, ಅಂಧರು, ಆಯಸಿಡ್ ದಾಳಿಯ ಸಂತ್ರಸ್ತರಿಗೆ ಡಿಜಿಟಲ್ ಕೆವೈಸಿ ಸರಾಗವಾಗು ವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದೆ.
ಇದಕ್ಕಾಗಿ ಡಿಜಿಟಲ್ ಕೆವೈಸಿ ಮಾರ್ಗಸೂಚಿಯಲ್ಲಿ ಬದಲಾವಣೆಗಳನ್ನು ತರುವಂತೆಯೂ ಕೇಂದ್ರಕ್ಕೆ ನಿರ್ದೇಶನ ನೀಡಿದೆ.
ಅಂಗವಿಕಲರು ಮತ್ತು ದೃಷ್ಟಿ ನ್ಯೂನತೆ ಇರುವವರಿಗೆ ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಹಾಗೂ ಬ್ಯಾಂಕ್ ಖಾತೆ ತೆರೆಯಲು, ಕ್ಷೇಮಾಭಿವೃದ್ಧಿ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಅಂಥವರಿಗೆ ಕೆವೈಸಿಯಂತಹ ಡಿಜಿಟಲ್ ಪ್ರಕ್ರಿಯೆ ಸರಳವಾಗಬೇಕು. ಡಿಜಿಟಲ್ ಸೌಲಭ್ಯ ಲಭ್ಯತೆಯ ಹಕ್ಕು ಎನ್ನುವುದು ಸಂವಿಧಾನದ 21ನೇ ವಿಧಿಯಡಿ ಬರುವ ಜೀವಿಸುವ ಹಕ್ಕು ಎಂದಿದೆ.
ಯಾವುದೇ ಬ್ಯಾಂಕ್ ಖಾತೆ ತೆರೆಯಲು ಮತ್ತು ಸರ್ಕಾರಿ ಯೋಜನೆಗಳ ಲಾಭಪಡೆಯಲು ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯ. ಆದರೆ, ಆನ್‌ಲೈನ್ ಕೈವಿಸಿಯಿಂದ ಅಂಧರು ಮತ್ತು ಆಯಸಿಡ್ ದಾಳಿಗೊಳಗಾದವರು ತೀವ್ರ ಸಮಸ್ಯೆ ಎದುರಿಸಬೇಕಾಗುತ್ತದೆ. ಹಾಲಿ ಇರುವ ಕೆವೈಸಿ ನಿಯಮವಾಳಿಯಿಂದ ಇಂಥವರು ಡಿಜಿಟಲ್ ವ್ಯವಸ್ಥೆಯಿಂದಲೇ ದೂರವುಳಿಯುವ ಸಾಧ್ಯತೆ ಇದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹೀಗಾಗಿ ಕೈವಿಸಿ ವಿನ್ಯಾಸವನ್ನು ಎಲ್ಲರಿಗೂ ಸರಿಹೊಂದುವಂತೆ ಬದಲಾಯಿಸುವ ಅಗತ್ಯವನ್ನು ನ್ಯಾಯಾಲಯ ಮನಗಂಡಿದೆ
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…