10/06/2025 1:00 AM

Translate Language

Home » ಲೈವ್ ನ್ಯೂಸ್ » ಅಂಚೆ ಜೀವ ವಿಮೆ ಉತ್ಪನ್ನಗಳ ಮಾರಾಟ ಮಾಡಲು
ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಸಂದರ್ಶನ ಜ.22ಕ್ಕೆ

ಅಂಚೆ ಜೀವ ವಿಮೆ ಉತ್ಪನ್ನಗಳ ಮಾರಾಟ ಮಾಡಲು
ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಸಂದರ್ಶನ ಜ.22ಕ್ಕೆ

Facebook
X
WhatsApp
Telegram


ಬೀದರ.17ಜನವರಿ.25:- ಬೀದರ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಜನವರಿ.22 ರಂದು ಬೆಳಿಗ್ಗೆ 11 ಗಂಟೆಗೆ ಬೀದರ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ ಎಂದು ಬೀದರ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿದ್ದು, ಕಡ್ಡಯವಾಗಿ 18 ವರ್ಷ ವಯಸ್ಸಾಗಿರಬೇಕು, ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟರು ಹಾಗೂ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆಂದು ಕಂಡುಬಂದ ಯಾವುದೇ ಅಭ್ಯರ್ಥಿಗಳಿಗೆ ಆಯ್ಕೆಯಾದ ಪಕ್ಷದಲ್ಲಿ ಅವಕಾಸ ನೀಡಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳು ರೂ. 5000 ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ. ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮೀಷನ್ ನೀಡಲಾಗುವುದು. ನಿಗದಿತ ವೇತನವು ಇರುವುದಿಲ್ಲ.

ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ/ಸಂಸ್ಥೆ/ಸಂಘಗಳ ಏಜೆಂಟ ಆಗಿರಬಾರದು. ನುರಿತ ಸಂವಹನ ಕಲೆ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಪುರ್ವಾನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.


ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಸದರಿ ದಿನಾಂಕದಂದು ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!