ಬೀದರ.21.ಮೇ.25:- ಅಂಚೆ ಅಧೀಕ್ಷಕರು, ಬೀದರ ವಿಭಾಗ ಇವರು ಬೀದರ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಮೇ.29 ರಂದು ಬೆಳಿಗ್ಗೆ 11 ಗಂಟೆಗೆ ಬೀದರ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ ಎಂದು ಬೀದರ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹತಾ ನಿಯಮಗಳು: ಅಭ್ಯರ್ಥಿಗಳು 10 ನೇ ತರಗತಿಉತ್ತೀರ್ಣರಾಗಿದ್ದುಕಡ್ಡಾಯವಾಗಿವಯಸ್ಸು 18 ವರ್ಷಗಳಾಗಿರಬೇಕು.ನಿರುದ್ಯೋಗಿ ಹಾಗೂ ಸ್ವಯಂಉದ್ಯೋಗನಿರತಯುವಕರು, ವಿಮಾ ಕಂಪನಿಗಳ ಮಾಜಿಏಜೆಂಟರು ಹಾಗೂ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತುಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆoದುಕoಡುಬoದಯಾವುದೇ ಅಭ್ಯರ್ಥಿಗಳಿಗೆ ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವದು.
ಆಯ್ಕೆಯಾದ ಅಭ್ಯರ್ಥಿಗಳು ರೂ.5000/- ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರಅಥವಾ ಕಿಸಾನ ವಿಕಾಸ ಪತ್ರದರೂಪದಲ್ಲಿ ಭದ್ರತಾಠೇವಣಿಯನ್ನುಇಡಬೇಕಾಗುತ್ತದೆ.
ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆತಕ್ಕಂತೆ ಸೂಕ್ತ ಕಮೀಷನ್ ನೀಡಲಾಗುವದು.
ನಿಗದಿತ ವೇತನವುಇರುವದಿಲ್ಲ.ಅಭ್ಯಥಿಗಳು ವೇರೆಯಾವುದೇ ವಿಮಾ ಕಂಪನಿ/ಸoಸ್ಥೆ/ಸoಘಗಳ ಏಜೆಂಟ ಆಗಿರಬಾರದು.
ನುರಿತ ಸಂವಹನ ಕಲೆ, ಹಾಗೂ ವಿಮಾ ಮಾರಾಟಕ್ಷೇತ್ರದಲ್ಲಿ ಪೂರ್ವಾನುಭವ ಹೊಂದಿರುವವರಿಗೆಅದ್ಯತೆ ನೀಡಲಾಗುವದು.
ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವ-ವಿವರ, ಶೈಕ್ಷಣಿಕ ಪ್ರಮಾಣಪತ್ರದ ನಕಲುಗಳೊಂದಿಗೆ ಸದರಿ ದಿನಾಂಕದAದು ನಡೆಯಲಿರಿವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…