ಅಂಬಳೆ ಗ್ರಾಮಪಂಚಾಯತಿ ಅಧ್ಯಕ್ಷರಾಗಿ ಅಂಬಳೆ  ನವೀನ್  ಅವಿರೋಧವಾಗಿ ಆಯ್ಕೆ.



ಚಾಮರಾಜನಗರ.16.ಏಪ್ರಿಲ್.25:- ಯಳಂದೂರು: ತಾಲ್ಲೂಕಿನ ಅಂಬಳೆ ಗ್ರಾಮಪಂಚಾಯತಿಯಲ್ಲಿ ತೆರವುಗೊಂಡಿದ್ದ ಅಧ್ಯಕ್ಷ ಸ್ಥಾನಕ್ಕೆ  ಅಂಬಳೆ ನವೀನ್ ಎಂಬುವವರು ಬುಧವಾರ  ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಇವರು ಯಳಂದೂರು ತಾಲ್ಲೂಕಿನಲ್ಲಿ ಯುವ ಮುಖಂಡರಾಗಿ ಪರಿಚಯವಾಗಿ ಅಪಾರ ಯುವಕರ ಬಳಗವನ್ನು ಹೊಂದಿದ್ದಾರೆ.


ಇವರು ಬಿ ಇ ಪದವಿ ಮುಗಿಸಿದ್ದಾರೆ. ಜನ ಸೇವೆ ಗೋಸ್ಕರ ಗ್ರಾಮ ಪಂಚಾಯತಿಯಲ್ಲಿ ಸದಸ್ಯರಾಗಿ ಸೇವೆಸಲ್ಲಿಸಿ ಅಧ್ಯಕ್ಷ ಸ್ಥಾನ ಪಡೆದಿದ್ದಾರೆ.

ಅಂಬಳೆ  ಗ್ರಾಮಪಂಚಾಯತಿ ಅಧ್ಯಕ್ಷರಾಗಿ ನಂಜುಂಡಸ್ವಾಮಿ ರವರು  ವೈಯಕ್ತಿಕ ಕಾರಣಗಳಿಂದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ತೆರವುಗೊಂಡಿದ್ದ ಸ್ಥಾನಕ್ಕೆ  ಚುನಾವಣೆ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ನವೀನ್  ಮಾತ್ರ ನಾಮ ಪತ್ರ ಸಲ್ಲಿಸಿದರು ಉಳಿದವರು ಯಾರು?  ನಾಮಪತ್ರ ಸಲ್ಲಿಸದ ಕಾರಣ ಚುನಾವಣಾ ಅಧಿಕಾರಿ ಚಂದ್ರಶೇಖರ ಮೂರ್ತಿ‌ರವರು ಎಲ್ ನವೀನ್ ರವರನ್ನು ಅಂಬಳೆ ಗ್ರಾಮಪಂಚಾಯತಿ ಅಧ್ಯಕ್ಷರೆಂದು  ಅವಿರೋಧವಾಗಿ ಆಯ್ಕೆಮಾಡಿದರು.
ನೂತನ ಅಧ್ಯಕ್ಷರಿಗೆ  ಸೇಬಿನಹಾರ,  ಹೂವಿನಹಾರ ಮೈಸೂರು ಪೇಟತೊಡಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿ ನಂತರ ಸಾರ್ವಜನಿಕರಿಗೆ ಸಿಹಿ ವಿತರಿಸಿದರು.

ನೂತನ ಅಧ್ಯಕ್ಷ ಎಲ್ ನವೀನ್  ಮಾತನಾಡಿ ಅಂಬಳೆ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು ಇನ್ನಷ್ಟು ಜವಾಬ್ದಾರಿ ಹೆಚ್ಚಾಗಿದೆ.  ಸರಕಾರದಿಂದ ಬರುವ ಸವಲತ್ತುಗಳನ್ನು ಗ್ರಾಮಪಂಚಾಯತಿ ಅಭಿವೃದ್ಧಿಗೆ ಬಳಸುತ್ತೇವೆ ಹಾಗೂ ಸಾರ್ವಜನಿಕರ ಸೇವೆಗೆ ಸದಾ ಸಿದ್ದರಾಗಿರುತ್ತೇವೆ  ಇದಕ್ಕೆ ಎಲ್ಲಾ ಸದಸ್ಯರ ಸಹಕಾರ ಅಗತ್ಯವಾಗಿದೆ. ನಮ್ಮ‌ ಗ್ರಾಮಪಂಚಾಯತಿಯನ್ನು  ಮಾದರಿಯನ್ನಾಗಿಸುವುದಕ್ಕೆ ದುಡಿಯುವುತ್ತೇನೆ ಸಹಕರಿಸಿದ ಎಲ್ಲಾರಿಗೂ ಅಭಿನಂದನೆಗಳು  ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಮಹದೇವಮ್ಮ, ಸದಸ್ಯರಾದ  ಸಿದ್ದನಾಯಕ, ರಾಜಣ್ಣ, ಸ್ವಾಮಿ, ಸುಜಾತ, ನಾಗಮ್ಮ, ನಂಜರಾಜು,ಮಹೇಶ್ವರಿ ಚಾಮರಾಜು,ರೇವಣ್ಣ,ರಾಣಿ, ಮಾಲಾಸಿದ್ದರಾಜು,ಮಹದೇವಸ್ವಾಮಿ, ಗೀತಾ ಮಹೇಶ್, ಅರುಣಕುಮಾರಿ ಮಹೇಶ್ ಸ್ನೇಹಿತರಾದ ಆನಂದ್, ಸಂದೀಪ್ , ಪಿಡಿಒ ಕಾವ್ಯ, ಕಾರ್ಯದರ್ಶಿ ಪುಟ್ಟರಾಜು, ಗ್ರಾಪಂ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು

ವರದಿಗಾರ: ಜಿ ಪ್ರಸ್ಸನ್ ಕುಮಾರ್ ಕಿತ್ತೂರ

prajaprabhat

Recent Posts

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.07.ಆಗಸ್ಟ್.25:- ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ…

20 minutes ago

ಎರಡು ಪ್ರತಿಷ್ಠಿತ ಮಹಾವಿದ್ಯಾಲಯಗಳ ಮಧ್ಯ ತಿಳುವಳಿಕೆ ಒಪ್ಪಂದ

ಕಲಬುರಗಿ.07.ಆಗಸ್ಟ್.25:- ಶೈಕ್ಷಣಿಕ ಸಹಕಾರವನ್ನು ಬೆಳೆಸುವ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಕಲಬುರಗಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೈದರಾಬಾದ ಕರ್ನಾಟಕ…

2 hours ago

ಬ್ಯಾಕ್ ಲಾಗ್’ ಹುದ್ದೆಗಳ ಭರ್ತಿ : ಸರ್ಕಾರದಿಂದ ಆದೇಶ

ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…

6 hours ago

ಜಾರ ಲಂಬಾಣಿ  ಸಮಾಜಕ್ಕೆ  ಶೇ೬ರಷ್ಟು ಮೀಸಲಾತಿ ಕಲ್ಪಿಸಬೇಕೆಂದು ಬಸವರಾಜ ಪವಾರ ಆಗ್ರಹ

ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ  ಸಮಾಜಕ್ಕೆ  ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…

6 hours ago

ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ- ಸಚಿವ ಈಶ್ವರ ಖಂಡ್ರೆ

ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…

6 hours ago

ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು

ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…

7 hours ago