ಅಂಬೇಡ್ಕರ್ ಅವರ ಕನಸು ನನಸು ಮಾಡಲು ಪ್ರಾಮಾಣಿಕ ಪ್ರಯತ್ನ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು.15.ಏಪ್ರಿಲ.25:- ರಾಜ್ಯ ಸರ್ಕಾರ ಬಾಬಾ ಸಾಹೇಬ್ ಡಾ. ಭೀಮರಾವ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸಂವಿಧಾನ ಶಿಲ್ಪಿ ಡಾ: ಬಿ. ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ನಮ್ಮ ಸರ್ಕಾರವತ್ಯಂತ ಗೌರವ, ನಮ್ರತೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸುತ್ತಿದೆ. ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅನ್ಯಾಯದಿಂದ ಮುಕ್ತಿ ಪಡೆಯಬೇಕೆಂದು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು.

*ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರು*
ಮಹಾನ್ ಮೇಧಾವಿಯಾಗಿದ್ದ ಅಂಬೇಡ್ಕರ್, ಅವರ ಸ್ವಾರ್ಥಕ್ಕಾಗಿ ಓದಿಕೊಳ್ಳದೆ ಶೋಷಿತರ, ಅಸ್ಪೃಶ್ಯತೆಯಿಂದ ನರಳುತ್ತಿರುವವ ಜನರಿಗೆ ವಿಮೋಚನೆ ನೀಡಲೆಂದೇ ಜ್ಞಾನಾರ್ಜನೆ ಮಾಡಿಕೊಂಡಿದ್ದರು.

ದೇಶದ ಕೆಲವೇ ಮೇಧಾವಿಗಳಲ್ಲಿ ಅವರೂ ಒಬ್ಬರು. ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ. ಎಲ್ಲರೂ ಮನುಷ್ಯರಾಗಿ ಬದುಕಬೇಕು. ಸಮಾಜದಲ್ಲಿ ಎಲ್ಲರಿಗೂ ಸಮಾನತೆ ದೊರಕಬೇಕು. ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಬೇಕು. ಹಾಗಾದಾಗ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುತ್ತದೆ. ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು. ಅಸ್ಪೃಶ್ಯತೆ ನಾಶವಾಗಬೇಕು ಎಂದು ಅಂಬೇಡ್ಕರ್ ಶ್ರಮಿಸಿದ್ದರು ಎಂದರು.

ಮನುವಾದಿಗಳು ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ.

ಇತ್ತೀಚೆಗೆ ಕೆಲವರು ಮಹಾತ್ಮಾ ಗಾಂಧಿ ಹಾಗೂ ಅಂಬೇಡ್ಕರ್ ಅವರನ್ನು ತಮಗೆ ಸೇರಿದವರೆಂದು ಬಿಂಬಿಸಲು ಪ್ರಾರಂಭಿಸಿದ್ದಾರೆ. ಮಹಾತ್ಮಾ ಗಾಂಧಿಯವರನ್ನು ಕೊಂದವರು, ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ ಮನುವಾದಿಗಳೇ ಇಂದು ಅವರನ್ನು ತಮ್ಮ ಸ್ವಂತ ಎನ್ನಲು ಪ್ರಾರಂಭಿಸಿದ್ದಾರೆ. ಸಂವಿಧಾನ ಜಾರಿಗೆ ಬಂದ ನಾಲ್ಕೈದು ದಿನಗಳಲ್ಲೇ ‘ದಿ ಆರ್ಗನೈಜರ್’ ಪತ್ರಿಕೆಯಲ್ಲಿ ವಿರೋಧ ಮಾಡಿ ಬರೆದಿದ್ದರು.

ಈಗ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿತ್ತು ಎಂದು ಮಾತನಾಡುತ್ತಾರೆ. ಅಂಬೇಡ್ಕರ್ ಅವರೇ ನನ್ನನ್ನು ಸೋಲಿಸಿದವರು ಸಾವರ್ಕರ್ ಮತ್ತು ಕಮ್ಯುನಿಸ್ಟ್ ನಾಯಕ ಎಸ್.ಎ ಡಾಂಗೆ ಎಂದು ಪತ್ರ ಬರೆದಿದ್ದರು. ಬಿಜೆಪಿ ಸ್ವಾರ್ಥಕ್ಕಾಗಿ ಮಹಾತ್ಮಾ ಗಾಂಧಿ, ಸರ್ದಾರ್ ವಲ್ಲಭಭಾಯ್ ಪಟೇಲ್, ಅಂಬೇಡ್ಕರ್ ಅವರನ್ನು ತಮ್ಮದೇ ಸ್ವಂತ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ.

ಅಂಬೇಡ್ಕರ್ ಅವರು ‘ನಾನು ಹಿಂದೂ ಆಗಿ ಹುಟ್ಟಿದೆ ಆದರೆ ಹಿಂದೂವಾಗಿ ಸಾಯಲಾರೆ’ ಎಂದು ಹೇಳಿದ್ದರು. ಹಿಂದೂ ಧರ್ಮ ತ್ಯಜಿಸಿ ಭೌದ್ಧ ಧರ್ಮವನ್ನು ಸ್ವೀಕಾರ ಮಾಡಿದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಿಸಿ, ಅದು ಸಾಧ್ಯವಾಗುವುದಿಲ್ಲ ಎಂದು ಅರಿವಾದ ನಂತರ ಹಿಂದೂ ಧರ್ಮವನ್ನು ತ್ಯಜಿಸಿ, ಮಾನವೀಯತೆ ಮತ್ತು ಸಮಾನತೆ ಇದ್ದ ಭೌದ್ಧ ಧರ್ಮವನ್ನು ಸ್ವೀಕರಿಸಿದರು ಎಂದರು.

ನೆಹರೂ ಅಂಬೇಡ್ಕರ್ ಅವರನ್ನು ವಿರೋಧಿಸಲಿಲ್ಲ :
ಬಿಜೆಪಿಯವರು ಜವಾಹಾರ್ ನೆಹರೂ ಅವರನ್ನು ವಿರೋಧಿಸುತ್ತಾರೆ. ಅಂಬೇಡ್ಕರ್ ಅವರನ್ನು ನೆಹರೂ ವಿರೋಧಿಸಲಿಲ್ಲ. ಹಾಗಿದ್ದರೆ, ಅಂಬೇಡ್ಕರ್ ಅವರನ್ನು ಸಂವಿಧಾನ ಬರೆಯಲು ಆಯ್ಕೆ ಮಾಡುತ್ತಿರಲಿಲ್ಲ.

ಹಿಂದೂ ಕೋಡ್ ಬಿಲ್ ತಂದಾಗ ನೆಹರೂ ಅದರ ಪರವಾಗಿಯೇ ಇದ್ದರು. ನಮ್ಮಲ್ಲಿರುವ ಕೆಲವು ಶಕ್ತಿಗಳು ನೆಹರೂ ಅವರು ಅದನ್ನು ಜಾರಿ ಮಾಡಲು ಬಿಡಲಿಲ್ಲ. ಆದರೆ ಹಿಂದೂ ಕೋಡ್ ಬಿಲ್ ನಲ್ಲಿರುವ ಅಂಶಗಳನ್ನು ನೆಹರೂ ಅವರು ಅವರ ಅಧಿಕಾರದ ಅವಧಿಯಲ್ಲಿ ಜಾರಿ ಮಾಡುವ ಪ್ರಯತ್ನ ಮಾಡಿದ್ದರು ಎಂದರು.

ಜಾತಿ ಜನಗಣತಿ:

ಏಪ್ರಿಲ್ 17 ರಂದು ಸಚಿವ ಸಂಪುಟದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಜನಗಣತಿಯ ಬಗ್ಗೆ ಚರ್ಚಿಸಲೆಂದೇ ಕರೆಯಲಾಗಿದೆ. ಚರ್ಚೆ ಮಾಡಿದ ನಂತರ ಈ ಬಗ್ಗೆ ಮಾತನಾಡುವುದಾಗಿ ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

prajaprabhat

Recent Posts

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

1 hour ago

ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ

ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…

1 hour ago

ಗ್ರೇಟಾ ಥನ್‌ಬರ್ಗ್ ಅವರ ಸಹಾಯ ದೋಣಿ ಗಾಜಾ ಪ್ರವೇಶಿಸುವುದನ್ನು ತಡೆಯುವುದಾಗಿ ಇಸ್ರೇಲ್ ಭರವಸೆ ನೀಡಿದೆ 08 ಜೂನ್, 2025 ರಾಷ್ಟ್ರೀಯ<br>

ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…

2 hours ago

2025-26ನೇ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಹುದ್ದೆಗಳು ಖಾಲಿ ಇಂದೇ ಅರ್ಜಿ ಹಾಕಿ.

ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…

3 hours ago

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

9 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

10 hours ago