ಮೈಸೂರು.21.ಜೂನ್.25:- ತಾಲೂಕಿನ ವಾಜಮಂಗಲದಲ್ಲಿ ಎ.18ರಂದು ಅಂಬೇಡ್ಕರ್ ಭಾವಚಿತ್ರವಿರುವ ಬ್ಯಾನರ್ ಹಾಗೂ ನಾಮಫಲಕವನ್ನು ವಿರೂಪಗೊಳಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಬಂಧಿತ ಆರೋಪಿಗಳನ್ನು ಕೊಕ್ರೆಹುಂಡಿ ನಿವಾಸಿ ರಂಗೇಗೌಡ ಹಾಗೂ ಸೋಲನಹಳ್ಳಿ ನಿವಾಸಿ ವಸಂತ ಕುಮಾರ್ ಎಂದು ಗುರುತಿಸಲಾಗಿದೆ.
ಆರೋಪಿಗಳು ವಾಜಮಂಗಲ ಗ್ರಾಮದ ಕೀರ್ತಿಕುಮಾರ್ ಎಂಬವರಿಗೆ ಕೈ ಸಾಲ ನೀಡಿದ್ದರು. ಅದನ್ನು ವಾಪಸ್ ನೀಡದಿದ್ದಾಗ, ಗ್ರಾಮಕ್ಕೆ ತೆರಳಿ ಕೀರ್ತಿ ಕುಮಾರ್ ಮನೆ ಬಳಿಯ ಬ್ಯಾನರ್ ಹರಿದು, ಅವರಿಗೆ ಕೆಟ್ಟ ಹೆಸರು ಬರುವಂತೆ ಮಾಡಲು ಕೃತ್ಯ ನಡೆಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಜಮಂಗಲದಲ್ಲಿ ನಡೆದ ಅಂಬೇಡ್ಕರ್ ಜಯಂತಿಗೆ ಶುಭಾಶಯ ಕೋರಿ ದಲಿತ ಸಂಘಟನೆ ಮುಖಂಡರು ಬ್ಯಾನರ್ ಅಳವಡಿಸಿದ್ದರು. ಎ.18 ರಂದು ಬ್ಯಾನರ್ ಹಾಗೂ ಅಂಬೇಡ್ಕರ್ ಭಾವಚಿತ್ರವಿದ್ದ ನಾಮಫಲಕವನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದರು. ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ದಲಿತ ಸಂಘಟನೆಗಳು ಧರಣಿ ನಡೆಸಿದ್ದವು.
ಈ ಬೆಳವಣಿಗೆಯ ನಡುವೆ ಪ್ರಕರಣ ದಾಖಲಿಸಿಕೊಂಡ ವರುಣಾ ಪೊಲೀಸರು ಆರೋಪಿಗಳ ಹುಡುಕಾಟದಲ್ಲಿ ತೊಡಗಿದ್ದರು. ಡಿವೈಎಸ್‌ಪಿ ಶಿವನಂಜ ಶೆಟ್ಟಿ ಮಾರ್ಗದರ್ಶನದಲ್ಲಿ ಠಾಣೆಯ ಪಿಎಸ್‌ಐ ಸದಾಶಿವ ತಿಪ್ಪಾರೆಡ್ಡಿ, ಸಿಬ್ಬಂದಿ ಲಿಂಗರಾಜು, ಮಹೇಶ್, ದಸ್ತಗಿರ್, ಶ್ರೀನಿವಾಸ್, ಮಲ್ಲಿಕಾರ್ಜುನ, ವೆಂಕಟೇಶ್ ಅವರ ತಂಡ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…