ಅಗತ್ಯವಿದ್ದವರಿಗೆ ಉಚಿತ ಕನ್ನಡಕ ವಿತರಿಸುವ ವಿದ್ಯಾದೃಷ್ಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================

ಬೆಂಗಳೂರು.06.ಮಾರ್ಚ.25:- ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕಣ್ಣಿನ ಆರೈಕೆ ಸೇವೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಜೈಸ್ ಇಂಡಿಯಾ (ZEISS India) ಸಂಸ್ಥೆಯೊಂದಿಗೆ ಕರ್ನಾಟಕ ಸರ್ಕಾರ ಒಡಂಬಡಿಕೆಗೆ ಸಹಿ ಹಾಕಿದೆ. ಇದರಲ್ಲಿ ಕಲಬುರಗಿ ಜಿಲ್ಲೆಯ 11 ಲಕ್ಷ ಮಂದಿಗೆ ನೇತ್ರ ಪರೀಕ್ಷೆ ನಡೆಸಲಾಗುವುದಲ್ಲದೆ, ಅಗತ್ಯವಿದ್ದವರಿಗೆ ಉಚಿತ ಕನ್ನಡಕ ವಿತರಿಸುವ ವಿದ್ಯಾದೃಷ್ಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಒಡಂಬಡಿಕೆಯ ಅನುಸಾರ ಕಲಬುರಗಿ ಜಿಲ್ಲೆಯಲ್ಲಿ 5,32,000 ಶಾಲಾ ಮಕ್ಕಳಿಗೆ ಕಣ್ಣಿನ ಪರೀಕ್ಷೆ ಅಭಿಯಾನವನ್ನು ನಡೆಸಲಾಗುವುದು. ಕಲಬುರಗಿ ಜಿಲ್ಲೆಯಾದ್ಯಂತ ಮಕ್ಕಳ ದೃಷ್ಟಿ-ಸಂಬಂಧಿತ ಸಮಸ್ಯೆಗಳನ್ನು ಪತ್ತೆಹಚ್ಚಿ ಅಗತ್ಯವಿರುವವರಿಗೆ ಕನ್ನಡಕಗಳನ್ನು ವಿತರಿಸಲಾಗುವುದು.ಈ ಯೋಜನೆಯು ಮಕ್ಕಳ ಕಣ್ಣಿನ ಆರೋಗ್ಯ ಸುಧಾರಿಸುವ ಗುರಿಯನ್ನು ಹೊಂದಿದ್ದು, ಜೈಸ್ ಇಂಡಿಯಾ ಸಂಸ್ಥೆಯು ವಿದ್ಯಾದೃಷ್ಟಿ ಕಾರ್ಯಕ್ರಮದಡಿ ಈ ಯೋಜನೆಯನ್ನು ಕಾರ್ಯಗತಗೊಳಿಸಲಿದೆ. ಅಲೋಕ ಸಂಚಾರಿ ವಾಹನದ ಮೂಲಕ ನೇತ್ರ ಪರೀಕ್ಷೆಯನ್ನು ಕೈಗೊಳ್ಳಲಾಗುವುದು. ಇದಲ್ಲದೆ, ನೇತ್ರತಜ್ಞರು (ಆಪ್ಟೋಮೆಟ್ರಿಸ್ಟ್‌ಗಳು) ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ನಡೆಸುವ ಮೂಲಕ ಅವರ ವೃತ್ತಿಪರತೆಯನ್ನು ಹೆಚ್ಚಿಸಲಾಗುತ್ತದೆ.

ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಕಣ್ಣಿನ ಆರೋಗ್ಯವನ್ನು ಸುಧಾರಿಸುವ ತುರ್ತು ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜೈಸ್ ಇಂಡಿಯಾದೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಇದರಿಂದ ಮಕ್ಕಳ ಕಣ್ಣಿನ ಆರೋಗ್ಯ ಸುಧಾರಿಸಿ ಕಲಿಕೆಯನ್ನು ಸುಗಮಗೊಳಿಸುವ ಗುರಿ ಹೊಂದಿದ್ದೇವೆ. ಇದರಡಿ ಕಲಬುರಗಿಯಲ್ಲಿ 5.32 ಲಕ್ಷ ಶಾಲಾ ಮಕ್ಕಳಿಗೆ ಕಣ್ಣಿನ ತಪಾಸಣೆ ನಡೆಸಿ ಅಗತ್ಯವಿರುವ  ಕನ್ನಡಕ ವಿತರಿಸಲಾಗುತ್ತದೆ. ಹೆಚ್ಚುವರಿಯಾಗಿ 6,00,000 ಬಡ ವಯಸ್ಕರಿಗೂ ಉಚಿತ ಕಣ್ಣಿನ ತಪಾಸಣೆ ನಡೆಸಲಾಗುತ್ತದೆ. ಇಂಥ ವಿಶಿಷ್ಟ ಯೋಜನೆಗೆ ಕೈಜೋಡಿಸಿರುವ ಜೈಸ್ ಇಂಡಿಯಾ‌ ಸಂಸ್ಥೆಯನ್ನು ಶ್ಲಾಘಿಸುತ್ತೇನೆ.

ಈ ಸಂದರ್ಭದಲ್ಲಿ ಸಚಿವರಾದ  ದಿನೇಶ್ ಗುಂಡೂರಾವ್,  ಡಾ. ಶರಣಪ್ರಕಾಶ್ ಪಾಟೀಲ್,  ಕಲಬುರಗಿ ಲೋಕಸಭಾ ಸದಸ್ಯರಾದ ರಾಧಾ ಕೃಷ್ಣ ದೊಡ್ಡಮನಿ ಸೇರಿದಂತೆ ಶಾಸಕರು ಅಧಿಕಾರಿಗಳು ಉಪಸ್ಥಿತರಿದ್ದರು.

====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================

prajaprabhat

Recent Posts

ಅತಿಥಿ ಉಪನ್ಯಾಸಕರ ಸೇವಾ ಭದ್ರತೆ  ಸಲುವಾಗಿ ನಿರಂತರ ಪ್ರಯತ್ನ. ಡಾ. ಹನಮಂತ್ ಗೌಡಾ ಕಲ್ಮನಿ

ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …

1 hour ago

ಭಕ್ತಿ ಮತ್ತು ದೃಢಸಂಕಲ್ಪದೊಂದಿಗೆ 30 ನಿಮಿಷದಲ್ಲಿ ಅಂಜನಾದ್ರಿ ಬೆಟ್ಟವೇರಿದ ಕರ್ನಾಟಕದ ರಾಜ್ಯಪಾಲರು

ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…

2 hours ago

ಚಾಮರಾಜನಗರ  ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾಲೇಜ್ ನ ಬಿ ಎಸ್ ಸಿ ಪದವಿಯಲ್ಲಿ ಮಧು ಸಿ. ಕಾಲೇಜ್ ಗೆ ಟಾಪರ್

ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ  ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…

2 hours ago

ದೈಹಿಕ ಶಿಕ್ಷಣ ವಿಭಾಗದಲ್ಲಿ ನಕಲಿ ಪಿ.ಎಚ್ ಡಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…

6 hours ago

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

17 hours ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

1 day ago