ರಾಯಚೂರು.09.ಆಗಸ್ಟ್ .25:- ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್ 8ರಂದು ಅಗ್ನಿವೀರ್ ಸೇನಾ ನೇಮಕಾತಿ ಭರ್ತಿ ಕಾರ್ಯಕ್ರಮ ಮೊದಲ ದಿನ ಯಶಸ್ವಿಯಾಗಿ ನಡೆದಿದೆ.
ಈ ಸೇನಾ ನೇಮಕಾತಿಗೆ, ದೇಶಸೇವೆ ಬಯಸಿದ ಅನೇಕ ವಿವಿಧ ಜಿಲ್ಲೆಗಳ ಯುವಕರು ಉತ್ಸಾಹದಿಂದ ಭಾಗಿಯಾಗಲಿದ್ದು, ಮೊದಲ ದಿನ ಕೊಪ್ಪಳ ಜಿಲ್ಲೆಯಿಂದ ಒಟ್ಟು 587 ಅಭ್ಯರ್ಥಿಗಳು ವರದಿ ಮಾಡಿಕೊಂಡು ತಮ್ಮ ಸಾಮರ್ಥ್ಯ ಪ್ರದರ್ಶಿಸಿದರು.
ಶಾರೀರಿಕ ಪರೀಕ್ಷೆ, ಓಟ, ದೈಹಿಕ ಸಾಮರ್ಥ್ಯ ಪರೀಕ್ಷೆ ಸೇರಿದಂತೆ ಕಠಿಣ ಪರೀಕ್ಷಾ ಹಂತಗಳನ್ನು ಯಶಸ್ವಿಯಾಗಿ ಪೂರೈಸಿ 518 ಯುವಕರು ಮುಂದಿನ ಹಂತಕ್ಕೆ ಆಯ್ಕೆಯಾದರು.
ಈ ಸೇನಾ ಭರ್ತಿ ಪ್ರಕ್ರಿಯೆಯನ್ನು ಮೊದಲನೇ ದಿನ ಸೇನಾ ನೇಮಕಾತಿ ಮಂಡಳಿ ಅಧಿಕಾರಿಗಳು ಶಿಸ್ತುಬದ್ಧವಾಗಿ ಮುನ್ನಡೆಸಿದರು.
ಅಗ್ನಿವೀರ್ ಸೇನೆಗಾಗಿ ಮುಂದಿನ ಹಂತಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಲಾಗಿದ್ದು, ಅವರು ಶೀಘ್ರದಲ್ಲೇ ತರಬೇತಿಗೆ ಹಾಜರಾಗಲಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದರು.
ಭಾವುಕರಾದ ಕುಟುಂಬಸ್ಥರು: ತಮ್ಮ ತಮ್ಮ ಕುಟುಂಬದ ಯುವಕರ ಸೇನಾ ಭರ್ತಿ ನೋಡಲು ಮತ್ತು ಅವರಿಗೆ ಸಹಾಯ ಮಾಡಲು ಕುಟುಂಬದವರು ಆಗಮಿಸಿದ್ದರು. ಶಾರೀರಿಕ ಪರೀಕ್ಷೆಯ ಹಂತದಲ್ಲಿ ಯುವಕರು ಪಾಸಾಗಿದ್ದನ್ನು ಕಂಡು ಕೆಲವರು ಭಾವುಕರಾದರು.
ಯುವಕರಿಗೆ ಅಭಿನಂದನೆ ತಿಳಿಸಿದರು. ದೇಶಸೇವೆಯ ಕನಸು ಹೊತ್ತು ಅದನ್ನು ಸಾಕಾರಗೊಳಿಸಲು ಸೇನಾ ಭರ್ತಿಗೆ ಆಗಮಿಸಿ, ಶಾರಿರೀಕ ಪರೀಕ್ಷಾ ಹಂತದಲ್ಲಿ ಯಶಸ್ವಿಯಾಗಿ ಮುಂದಿನ ಹಂತಕ್ಕೆ ಕಾಲಿಟ್ಟ ಯುವಕರ ಮೊಗದಲ್ಲಿ ಸಂತಷ ಮತ್ತು ದೇಸೆ ಸೇವೆಗೆ ತಾನು ಆಯ್ಕೆಯಾಗುತ್ತೇನೆ ಎನ್ನುವ ಹೆಮ್ಮೆಯ, ವಿಶ್ವಾಸದ ಭಾವ ಕಾಣಿಸಿತು.
ಬೀದರ.09.ಆಗಸ್ಟ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ…
ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ…
ಬೀದರ.09.ಆಗಸ್ಟ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾವಿದ್ಯಾಲಯ ಬೀದರ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಇವರುಗಳ…
ಬೆಂಗಳೂರು.09.ಆಗಸ್ಟ್.25:-: ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ತನ್ನದೇ ಆದಂತ ಶಿಕ್ಷಣ ನೀತಿಯನ್ನು ರೂಪಿಸುವ ಬಗ್ಗೆ ನಿರ್ಧಾರವನ್ನು ಪ್ರಕಟಿಸಲಾಗಿತ್ತು. ಆ ಬಗ್ಗೆ ಅಧ್ಯಯನ…
ಬೀದರ.09.ಆಗಸ್ಟ್.25:- ಸಹೋದರ ಸಹೋದರಿಯರ ಸಂಬoಧವನ್ನು ಗಟ್ಟಿಗೊಳಿಸುವ ರಕ್ಷಾ ಬಂಧನ ಹಬ್ಬ ಮತ್ತೆ ಬಂದಿದೆ. ರಾಕಿ ಕಟ್ಟುವ ಸಹೋದರಿಯರಿಗೆ ಉಡುಗೊರೆಯಾಗಿ ಹೆಲ್ಮೇಟಗಳನ್ನು…
ರಾಯಚೂರು.09.ಆಗಸ್ಟ್.25: ರಾಜ್ಯ ಸರ್ಕಾರದ ಪ್ರಮುಖ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ 2025-26ನೇ ಸಾಲಿನ ಮೂರನೇ ಕಂತಿನ ಅನುದಾನವು ಜಿಲ್ಲೆಯ 2,61,618 ಫಲಾನುಭವಿಗಳಿಗೆ…