ಬೆಂಗಳೂರು.27.ಮಾರ್ಚ್.25:- ರಾಜ್ಯದ ಶಿಕ್ಷಣ ಇಲಾಖೆಯಲ್ಲಿ ಬಹು ವರ್ಷಗಳಿಂದ ಅಡುಗೆ ಸಿಬ್ಬಂದಿ ಸೇವೆ ಮಾಡ್ತಿದಾರೆ ಆದರೆ ಈಗ ರಜೆ ಇರುವ ಕಾರಣಕ್ಕಾಗಿ ಅಡುಗೆ ಸಿಂಬಂದಿಗೆ ಸೇವೆಯಿಂದ ಬಿಡುಗಡೆ ಮಾಡುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ
ಮಧ್ಯಾಹ್ನ ಉಪಾಹಾರ ಯೋಜನೆಯ ಅಡುಗೆ ಸಿಬ್ಬಂದಿಯನ್ನು ವಾರ್ಷಿಕ ಹತ್ತು ತಿಂಗಳ ತಾತ್ಕಾಲಿಕ ಸೇವೆಯನ್ನು ಪೊರೈಸಿದ ನಂತರ 31ನೇ-ಮಾರ್ಚ ಅಂತ್ಯಕ್ಕೆ ಸೇವೆಯಿಂದ ಕೈಬಿಡುವ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2024-25 ನೇ ಸಾಲಿನ ಪಿಎಂಪೋಷಣ್-ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮದಡಿಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಜೂನ್-2024 ಮಾಹೆಯಿಂದ ಮಾರ್ಚ್-2025 ರ ಮಾಹೆಯವರೆಗೆ ಒಟ್ಟು 10 ತಿಂಗಳ ಅವಧಿಗೆ ಯೋಜನೆಯನ್ನು ನಡೆಸಲು ಅನುಮೋದನೆ ನೀಡಿರುತ್ತದೆ. ಸದರಿ ಅವಧಿಗೆ ಸರ್ಕಾರಿ/ಅನುದಾನಿತ ಪ್ರಾಥಮಿಕ/ಪ್ರೌಢ ಶಾಲೆಗಳಲ್ಲಿ ಅಡುಗೆ ತಯಾರಿಸಿ ವಿತರಿಸುವ ಕೆಲಸಕ್ಕೆ ತಾತ್ಕಾಲಿಕವಾಗಿ ಅಡುಗೆ ಸಿಬ್ಬಂದಿಯ ಸೇವೆಯನ್ನು ಪಡೆದುಕೊಂಡಿದ್ದು, ಈ ಅವಧಿಗೆ ಮಾಸಿಕ ಗೌರವ ಸಂಭಾವನೆಯನ್ನು ವಿತರಿಸಲಾಗಿರುತ್ತದೆ.
2024-25ನೇ ಸಾಲಿನಲ್ಲಿ ಯೋಜನೆಯ ಅವಧಿ 31ನೇ ಮಾರ್ಚ್ ಅಂತ್ಯಕ್ಕೆ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ, ಯೋಜನೆಯಡಿ ತಾತ್ಕಾಲಿಕವಾಗಿ ಸೇವೆ ನಿರ್ವಹಿಸಿದ ಅಡುಗೆ ಸಿಬ್ಬಂದಿಯನ್ನು ದಿನಾಂಕ: 31.3.2025ರಂದು ಬಿಡುಗಡೆಗೊಳಿಸುವಂತೆ ಶಾಲೆಯ ಮುಖ್ಯ ಶಿಕ್ಷಕರಿಗೆ ಸೂಚಿಸಲು ತಿಳಿಸಿದೆ.
ಈ ರೀತಿ ಬಿಡುಗಡೆಗೊಳಿಸಿದ ಅಡುಗೆ ಸಿಬ್ಬಂದಿಯನ್ನು 2025-26 ನೇ ಶೈಕ್ಷಣಿಕ ಸಾಲಿಗೂ ಮುಂದುವರೆಸಲು ಅಗತ್ಯ ಕ್ರಮ ವಹಿಸುವುದು. ಈ ಸಂಬಂಧ ಶಾಲಾ ಪ್ರಾರಂಭದ ದಿನದಿಂದ ಇವರನ್ನು ತಾತ್ಕಾಲಿಕ ಸೇವೆಗೆ ಪಡೆಯುವುದು. ಈ ಸಂದರ್ಭದಲ್ಲಿ ಅಡುಗೆ ಸಿಬ್ಬಂದಿಯು 60 ವರ್ಷ ವಯೋಮಿತಿ ಮೀರಿದ ಪ್ರಕರಣಗಳಿದ್ದಲ್ಲಿ, ಅವರ ಬದಲಿಗೆ ಹೊಸ ಅಡುಗೆ ಸಿಬ್ಬಂದಿಯನ್ನು ಪಡೆಯಲು ಇಲಾಖೆಯಲ್ಲಿ ಜಾರಿಯಲ್ಲಿರುವ ಮಾರ್ಗಸೂಚಿಯಂತ ಅಗತ್ಯ ಕ್ರಮ ಕೈಗೊಳ್ಳುವುದು.
ಶಾಲೆಯಲ್ಲಿ ಯೋಜನೆಯಡಿ ಮಧ್ಯಾಹ್ನ ಬಿಸಿಯೂಟ, ಕ್ಷೀರಭಾಗ್ಯ, ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮವನ್ನು ಯಾವುದೇ ಅಡೆ-ತಡೆ ಇಲ್ಲದೇ ಸುಸೂತ್ರವಾಗಿ ನಡೆಸಲು ಪೂರಕ ಕ್ರಮಗಳನ್ನು ಕೈಗೊಂಡು ಯೋಜನೆಯ ಯಶಸ್ಸಿಗೆ ಶ್ರಮವಹಿಸಲು ಸೂಚಿಸಿದೆ.
ತತ್ಸಂಬಂಧ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಶಿಕ್ಷಣಾಧಿಕಾರಿಗಳು (ಪಿಎಂಪೋಷಣ್) ಮತ್ತು ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಹಣಾಧಿಕಾರಿಗಳು, ಸಹಾಯಕ ನಿರ್ದೇಶಕರು (ಪಿಎಂಪೋಷಣ್) ರವರು ಸೂಕ್ತ ಮೇಲ್ವಿಚಾರಣೆಯನ್ನು ನಡೆಸುವುದು. ತತ್ಸಂಬಂಧಿತ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದೆ .
ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…