ಅತಿಥಿ ಉಪನ್ಯಾಸಕರಿಗೆ ಸುಮಾರು 3 ತಿಂಗಳಿಂದ ಸಂಬಳ ಇಲ್ಲ.!

ಕಲಬುರಗಿ.01.ಏಪ್ರಿಲ್.25:- ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಯಂ ಉಪನ್ಯಾಸಕರು ಇಲ್ಲದ ಕಾರಣ ಅತಿಥಿ ಉಪನ್ಯಾಸಕರ ಮೇಲೆ ಕಾರ್ಯ ವಹಿಸಿಕೊಳ್ಳುತ್ತಿದಾರೆ.

ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಹೆಚ್ಚುವರಿ ಅನುದಾನದ ಮೂಲ ಇಲ್ಲದೆ ಕಳೆದ ಮೂರು ತಿಂಗಳಿಂದ ವೇತನವಿಲ್ಲ ಸುಮಾರು ಅತಿಥಿ ಉಪನ್ಯಾಸಕರು ತೊಂದರೆಗೆ ಸಿಲುಕಿದ್ದಾರೆ. ₹ 3 ಕೋಟಿ ಬಾಕಿ ವೇತನ ಹೊಂದಿಸಲು ವಿಶ್ವವಿದ್ಯಾಲಯ ಏದುಸಿರು ಬಿಡುತ್ತಿದೆ.

ವಿಶ್ವವಿದ್ಯಾಲಯ ಜ್ಞಾನ ಗಂಗಾ ಕ್ಯಾಂಪಸ್, ಆಳಂದದಲ್ಲಿನ ಸ್ನಾತಕೋತ್ತರ ಕೇಂದ್ರದ ವಿವಿಧ ವಿಭಾಗಗಳಲ್ಲಿ 200ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಇದ್ದಾರೆ. ಪ್ರತಿ ವಾರದಲ್ಲಿ 10ರಿಂದ 16 ಕ್ಲಾಸ್ ಪಾಠ ಮಾಡಿ, ತಿಂಗಳ ಸಂಬಳಕ್ಕಾಗಿ ಎದುರು ನೋಡುವಂತೆ ಆಗಿದೆ. ಇವರೆಲ್ಲರ ನಿತ್ಯದ ಬದುಕು ಮತ್ತು ಕುಟುಂಬ ನಿರ್ವಹಣೆಯೂ ಇದೇ ವೇತನದ ಮೇಲೆ ಅವಲಂಬಿತವಾಗಿದೆ.

ಕಳೆದ ಆಗಸ್ಟ್‌ ತಿಂಗಳಲ್ಲಿ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಹಾಗೂ ಗುತ್ತಿಗೆ ನೌಕರರು ಅಹೋರಾತ್ರಿ ಧರಣಿ ಕುಳಿತಿದ್ದರು. ಒತ್ತಡಕ್ಕೆ ಮಣಿದ ಅಂದಿನ ಕುಲಪತಿ ಪ್ರೊ.ದಯಾನಂದ ಅಗಸರ ಅವರು ₹ 36 ಸಾವಿರ ಇದ್ದ ಅತಿಥಿ ಉಪನ್ಯಾಸಕರ ಗೌರವ ಧನವನ್ನು ₹ 50 ಸಾವಿರಕ್ಕೆ ಏರಿಕೆ ಮಾಡಿದ್ದರು.

ವೇತನ ಪರಿಷ್ಕರಣೆಯ ಬಳಿಕ ₹ 5 ಸಾವಿರ ಟಿಡಿಎಸ್ ಕಡಿತವಾಗಿ ಡಿಸೆಂಬರ್ ಅಂತ್ಯದವರೆಗೆ ₹45 ಸಾವಿರ ವೇತನ ಸರಿಯಾಗಿ ಬರುತ್ತಿತ್ತು. ಒಂದಿಷ್ಟು ಹಣ ಉಳಿತಾಯವಾಗಿ, ಕುಟುಂಬದ ಆರ್ಥಿಕ ಸ್ಥಿತಿಯೂ ಸುಧಾರಣೆ ಕಾಣುತಿತ್ತು. ಆದರೆ, ಜನವರಿಯಿಂದ ಮಾರ್ಚ್‌ವರೆಗೂ ಒಂದೇ ಒಂದು ರೂಪಾಯಿ ವೇತನ ಬಂದಿಲ್ಲ. ಇದರಿಂದ ಕುಟುಂಬ ನಿರ್ವಹಣೆ ಮಾಡವುದು ಕಷ್ಟವಾಗುತ್ತಿದೆ ಎಂದು ಅತಿಥಿ ಉಪನ್ಯಾಸಕರೊಬ್ಬರು ಅವಲತ್ತುಕೊಂಡರು.

ಗುಲಬರ್ಗಾ ವಿಶ್ವವಿದ್ಯಾಲಯ ಸ್ನಾತಕೋತ್ತರ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಅರುಣಕುಮಾರ ಕುರನೆ, ‘ಬಾಕಿ ವೇತನ ಕೊಡುವಂತೆ ವಿಶ್ವವಿದ್ಯಾಲಯ ಆಡಳಿತ ಮಂಡಳಿಗೆ ಮನವಿ ಮಾಡಿಕೊಳ್ಳುತ್ತಿದ್ದೇವೆ. ಸರ್ಕಾರದಿಂದ ಅನುದಾನ ಬರುತ್ತಿಲ್ಲ. ಸಹಕರಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲವನ್ನೂ ಸಹಿಸಿಕೊಂಡಿದ್ದೇವೆ’ ಎಂದರು.

‘ಕುಲಪತಿಗಳು, ಕುಲಸಚಿವರು ಪ್ರಭಾರ ಹುದ್ದೆಗಳಲ್ಲಿ ಇರುವುದರಿಂದ ನಿರ್ಧಾರ ತೆಗೆದುಕೊಳ್ಳುವ ಹಂತದಲ್ಲಿ ಇಲ್ಲ. ಹೀಗಾಗಿ, ವಿವಿಯ ಇತರೆ ಮೂಲಗಳಿಂದ ಆದಾಯವನ್ನು ಹೊಂದಿಸಲು ಯತ್ನಿಸುತ್ತಿದ್ದಾರೆ. ಮುಂದಿನ ತಿಂಗಳಲ್ಲಿ ಕೊಡುವುದಾಗಿ ಭರವಸೆ ಕೊಟ್ಟಿದ್ದಾರೆ. ಪ್ರತಿ ತಿಂಗಳು ಸರಿಯಾಗಿ ವೇತನ ಬಿಡುಗಡೆ ಮಾಡಿದರೆ ಕುಟುಂಬ ನಿರ್ವಹಣೆ, ಮಕ್ಕಳ ಶಾಲಾ ಶುಲ್ಕ, ಮನೆ ಬಾಡಿಗೆ ಕಟ್ಟಲು ಅನುಕೂಲ ಆಗುತ್ತದೆ’ ಎಂದು ಹೇಳಿದರು.

‘ಹೊಂದಾಣಿಕೆ ಮಾಡಿ ಕೊಡುತ್ತೇವೆ’

‘ವಿಶ್ವವಿದ್ಯಾಲಯಕ್ಕೆ ಸರ್ಕಾರದಿಂದ ಅನುದಾನ ಬರುತ್ತಿಲ್ಲ. ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆಯಾಗಿದೆ. ಪ್ರವೇಶಾತಿ ಪರೀಕ್ಷಾ ಶುಲ್ಕವನ್ನು ಜಮಾಯಿಸಿ ಹೊಂದಾಣಿಕೆ ಮಾಡಿ ಬಾಕಿ ವೇತನವನ್ನು ಏಪ್ರಿಲ್‌ ತಿಂಗಳಲ್ಲಿ ಕೊಡುತ್ತೇವೆ’ ಎಂದು ವಿಶ್ವವಿದ್ಯಾಲಯ ಪ್ರಭಾರ ಕುಲಸಚಿವ ಪ್ರೊ.ರಮೇಶ ಲಂಡನಕರ್  ತಿಳಿಸಿದರು.

‘ಹಣಕಾಸಿನ ಮುಗ್ಗಟ್ಟಿನಿಂದ ವಿಶ್ವವಿದ್ಯಾಲಯವು ಅತಂತ್ರ ಸ್ಥಿತಿಯಲ್ಲಿದೆ. ಅತಿಥಿ ಉಪನ್ಯಾಸಕರಿಗೆ ಮಾತ್ರವೇ ತಿಂಗಳಿಗೆ ₹ 1 ಕೋಟಿ ವೇತನ ಕೊಡಬೇಕಿದೆ. ಬೋಧಕೇತರ ಸಿಬ್ಬಂದಿ ಮೂಲಸೌಕರ್ಯಗಳ ವೆಚ್ಚ ಪರೀಕ್ಷಾ ಮೌಲ್ಯಮಾಪನ ವೆಚ್ಚ ಸೇರಿದರೆ ಅದು ಇನ್ನೂ ಬೆಳೆಯುತ್ತಿದೆ. ಯಾವುದಾದರು ಅನುದಾನವನ್ನು ಹೊಂದಿಸಿ ಬಾಕಿ ಇರುವ ₹ 3 ಕೋಟಿ ವೇತನ ಬಿಡುಗಡೆ ಮಾಡುತ್ತೇವೆ’ ಎಂದರು.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

8 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

8 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

8 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

8 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

9 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

9 hours ago