ಅತಿಥಿ ಉಪನ್ಯಾಸಕರಿಗೆ 10 ವರ್ಷ ಸೇವೆ ಮಾಡ್ಡಿವಿಸಿಗಲಿದೆ ಮಾತ್ರ 5 ಲಕ್ಷ ರೂ. ಪ್ರಯೋಜನ.

ಬೆಂಗಳೂರು04.ಜೂನ್.25:- ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 60 ವರ್ಷ ಪೂರೈಸಿದ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರಿಗೆ 5 ಲಕ್ಷ ಇಡುಗಂಟು ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದವರಿಗೆ ಕೊನೆಗೂ ರಾಜ್ಯ ಸರ್ಕಾರ ಸಹಿ ಸುದ್ಧಿ ನೀಡಿದೆ.

ಹಲವು ಸೌಲಭ್ಯಗಳು 2024ರ ಜ.1ರಿಂದ ಜಾರಿಗೆ ಬರುವಂತೆ ಮಂಜೂರಾಗಲಿದ್ದು, ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಥವಾ ಮರಣ ಹೊಂದಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಇಡುಗಂಟು ಯೋಜನೆಯ ಪ್ರಯೋಜನ ಸಿಗಲಿದೆ. ಯೋಜನೆ ಅನುಷ್ಠಾನಕ್ಕೆ ಬಂದ ಹಿಂದಿನ ಐದು ವರ್ಷಗಳಲ್ಲಿ ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ 60 ವರ್ಷ ಪೂರ್ಣಗೊಳಿಸಿರುವ ಅತಿಥಿ ಉಪನ್ಯಾಸಕರಿಗೂ ಈ ಯೋಜನೆಗೆ ಒಳಪಡಲಿದ್ದಾರೆ.

ರಾಜ್ಯ ಸರ್ಕಾರದ ಯೋಜನೆಗೆ ಒಟ್ಟು 44.15 ಕೋಟಿ ರೂಪಾಯಿ ವ್ಯಯಿಸಲಾಗುತ್ತದೆ. ಸೇವಾ ಭದ್ರತೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ 2024ರಲ್ಲಿ ಅತಿಥಿ ಉಪನ್ಯಾಸಕರು ನಡೆಸಿದ್ದ ಧರಣಿ, ಪಾದಯಾತ್ರೆಯ ನಂತರ ಸರ್ಕಾರ ನಡೆಸಿದ ಮಾತುಕತೆಯಲ್ಲಿ ಇಡುಗಂಟು ನೀಡುವ ಭರವಸೆ ಸೇರಿತ್ತು. ಅಂದು ನೀಡಿದ್ದ ಭರವಸೆಯಂತೆ ಉನ್ನತ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. 2024ರ ಜನವರಿ 1ಕ್ಕಿಂತ ಹಿಂದಿನ ಐದು ವರ್ಷಗಳಲ್ಲಿ ಕನಿಷ್ಠ ಒಂದು ವರ್ಷ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ದಾಟಿದವರು ಇಡುಗಂಟು ಸೌಲಭ್ಯ ಪಡೆಯಬಹುದು.

ಅತಿಥಿ ಉಪನ್ಯಾಸಕರು ಸಲ್ಲಿಸಿದ ಸೇವಾ ವರ್ಷಗಳ ಆಧಾರದಲ್ಲಿ ಪ್ರತಿ ವರ್ಷಕ್ಕೆ 50 ಸಾವಿರದಂತೆ ಗರಿಷ್ಠ 10 ವರ್ಷಗಳ ಸೇವೆಯನ್ನು ಪರಿಗಣಿಸಲಾಗುವುದು. ಆಯಾ ಶೈಕ್ಷಣಿಕ ವರ್ಷದಲ್ಲಿ 240 ದಿನಗಳು ಕೆಲಸ ಮಾಡಿರಬೇಕು. 8 ತಿಂಗಳಿಗಿಂತ ಕಡಿಮೆ ಅವಧಿ ಕೆಲಸ ಮಾಡಿದ್ದರೆ ಅದನ್ನು ಭಾಗಶಃ ವರ್ಷ ಎಂದು ಲೆಕ್ಕಕ್ಕೆ ತೆಗೆದುಕೊಳ್ಳಲಾಗುವುದು. ಕೆಲಸದ ಅವಧಿಯಲ್ಲೇ ಮರಣ ಹೊಂದಿದರೆ ಅವರ ಕುಟುಂಬಕ್ಕೆ ಮೊತ್ತವನ್ನು ಹಸ್ತಾಂತರಿಸಲಾಗುವುದು. ಆಯಾ ಕಾಲೇಜುಗಳ ಪ್ರಾಂಶುಪಾಲರು ಸೇವಾ ದೃಢೀಕರಣ ಪತ್ರ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. .

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

1 hour ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

2 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

2 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

2 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

2 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

2 hours ago