Home » ಲೈವ್ ನ್ಯೂಸ್ » ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಗೌರವಧನ ಬಿಡುಗಡೆ ಮಾಡುವಂತೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಪತ್ರ !

ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಗೌರವಧನ ಬಿಡುಗಡೆ ಮಾಡುವಂತೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಪತ್ರ !

ಬೆಂಗಳೂರು.10.ಸೆಪ್ಟೆಂಬರ್.26: ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಹಾಗೂ  ಶಿಕ್ಷಕರು ಗೌರವಧನ ಬಿಡುಗಡೆ ಸಲುವಾಗಿ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಅವರು ಇಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಅತಿಥಿ ಉಪನ್ಯಾಸಕರ ಹಾಗೂ ಶಿಕ್ಷಕರ ಬಾಕಿ ವೇತನ ಬಿಡುಗಡೆ ಮಾಡುವಂತೆ ಪತ್ರ ಬರೆದ ಬೆನ್ನಲ್ಲೇ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ನಗರ ಪಾಲಿಕೆಗಳ   ಗೌರವಧನ  ಬಿಡುಗಡೆ ಮಾಡಲಾಗಿದೆ.

ಒಟ್ಟು 175 ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರಿಗೆ ಜೂನ್‌, ಜುಲೈ ಮತ್ತು ಆಗಸ್ಟ್‌ ತಿಂಗಳ ವೇತನ ಪಾವತಿಯಾಗಿಲ್ಲ ಎಂದು ಪತ್ರಿಕೆಗಳು ವರದಿ ಮಾಡಿವೆ.

857 ಅತಿಥಿ ಶಿಕ್ಷಕರು/ಉಪನ್ಯಾಸಕರುಗಳ ಗೌರವಧನವನ್ನು ಪಾವತಿಸುವಂತೆ ದೇವೇಗೌಡರು ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಜೂನ್‌, ಜುಲೈ, ಆಗಸ್ಟ್‌ ತಿಂಗಳ ಗೌರವಧನ ಪಾವತಿ ಮಾಡಲು ಜಿಬಿಎ ವಿಶೇಷ ಆಯುಕ್ತರಿಗೆ ಸೂಚಿಸಲಾಗಿತ್ತು.

ಬೆಂಗಳೂರು ಉತ್ತರ ನಗರ ಪಾಲಿಕೆಯ 184 ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗೆ 85,84,519 ರೂ. ಗೌರವಧನ ಪಾವತಿ ಮಾಡಿರುವುದಾಗಿ ಉತ್ತರ ನಗರ ಪಾಲಿಕೆ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಕೇಂದ್ರ ನಗರ ಪಾಲಿಕೆ, ದಕ್ಷಿಣ ನಗರ ಪಾಲಿಕೆಯ ಗೌರವಧನವನ್ನು ಪಾವತಿಸಲಾಗಿದೆ. ಪಶ್ಚಿಮ ನಗರ ಪಾಲಿಕೆಯ 258 ಅತಿಥಿ ಶಿಕ್ಷಕರು/ಉಪನ್ಯಾಸಕರುಗಳ ಜೂನ್‌, ಜುಲೈ ತಿಂಗಳ ಗೌರವಧನ ಪಾವತಿಸಲಾಗಿದ್ದು, ಆಗಸ್ಟ್‌ ತಿಂಗಳ ಗೌರವಧನವನ್ನು ಸದ್ಯದಲ್ಲೇ ಪಾವತಿಸುವುದಾಗಿ ಹೇಳಿದ್ದಾರೆ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಅತಿಥಿ ಶಿಕ್ಷಕರ ಬಾಕಿ ವೇತನ ಬಿಡುಗಡೆ ಮಾಡುವಂತೆ ಪತ್ರ ಬರೆದ ಬೆನ್ನಲ್ಲೇ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ನಗರ ಪಾಲಿಕೆಗಳ ಶಾಲಾ ಅತಿಥಿ ಶಿಕ್ಷಕರು ಹಾಗೂ ಕಾಲೇಜುಗಳ ಉಪನ್ಯಾಸಕರಿಗೆ ಗೌರವಧನ ಬಿಡುಗಡೆ ಮಾಡಲಾಗಿದೆ.

Author

ಪ್ರಮುಖ ಸುದ್ದಿ

Stock market

Astrology