23/08/2025 1:35 AM

Translate Language

Home » ಲೈವ್ ನ್ಯೂಸ್ » ಅತಿಥಿ ಉಪನ್ಯಾಸಕರ ಅರ್ಹತೆ ಮತ್ತು ಮೀಸಲಾತಿ ನಿಯಮಗಳ ಪಾಲನೆಗೆ ನ್ಯಾಯಾಲಯ ನಿಯಮ.

ಅತಿಥಿ ಉಪನ್ಯಾಸಕರ ಅರ್ಹತೆ ಮತ್ತು ಮೀಸಲಾತಿ ನಿಯಮಗಳ ಪಾಲನೆಗೆ ನ್ಯಾಯಾಲಯ ನಿಯಮ.

Facebook
X
WhatsApp
Telegram

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬವಾಗುತ್ತಿದೆ, ಇದರಿಂದ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಪ್ರಜಾವಾಣಿ ಪ್ರಕಾರ, ಯುಜಿಸಿ ಮಾನದಂಡಗಳನ್ನು ಕಡ್ಡಾಯಗೊಳಿಸಿರುವುದರಿಂದ ಈ ವಿಳಂಬ ಉಂಟಾಗಿದೆ ಎಂದು ಹೇಳಲಾಗಿದೆ. ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಬೇಕೆಂದು ಆಗ್ರಹಿಸಲಾಗಿದೆ.

ಅತಿಥಿ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪುಗಳು ಏನು ಅಂದ್ರೆ ಸಾಮಾನ್ಯವಾಗಿ ಯುಜಿಸಿ ನಿಯಮ ಆಧಾರ್ಮೇಲೆ ಅತಿಥಿ ಉಪನ್ಯಾಸಕರು ನೇಮಕ ಮಾಡಬೇಕು ಅಂಥ ಹೇಳುತಿದೆ.

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಪಾರದರ್ಶಕತೆ, ಅರ್ಹತೆ ಮತ್ತು ಮೀಸಲಾತಿ ನಿಯಮಗಳ ಪಾಲನೆಗೆ ಸಂಬಂಧಿಸಿವೆ. ಉದಾಹರಣೆಗೆ, ಕೆಲವು ಪ್ರಕರಣಗಳಲ್ಲಿ, ಅರ್ಹತೆ ಇಲ್ಲದ ಅಭ್ಯರ್ಥಿಗಳನ್ನು ನೇಮಕ ಮಾಡಿರುವ ಬಗ್ಗೆ ನ್ಯಾಯಾಲಯಗಳು ಆಕ್ಷೇಪ ವ್ಯಕ್ತಪಡಿಸಿವೆ. ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಅರ್ಹತೆ ಆಧಾರದ ಮೇಲೆ ನೇಮಕಾತಿ ನಡೆಯಬೇಕೆಂದು ನ್ಯಾಯಾಲಯಗಳು ಒತ್ತಿ ಹೇಳಿವೆ.

ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡಲು, ನೀವು ಕೆಲವು ಅರ್ಹತೆಗಳನ್ನು ಹೊಂದಿರಬೇಕು. ಮುಖ್ಯವಾಗಿ, ಸ್ನಾತಕೋತ್ತರ ಪದವಿ (Post Graduation) ಮತ್ತು ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (UGC) ನಿಗದಿಪಡಿಸಿದ ಅರ್ಹತಾ ಪರೀಕ್ಷೆಗಳಾದ NET/SET/SLET ಅಥವಾ ಪಿಎಚ್‌ಡಿ (PhD) ಪದವಿ ಹೊಂದಿರುವುದು ಅಗತ್ಯ. ಕೆಲವು ಸಂದರ್ಭಗಳಲ್ಲಿ, ಕಾರ್ಯಾನುಭವವನ್ನು ಸಹ ಪರಿಗಣಿಸಲಾಗುತ್ತದೆ.

ತಾತ್ಕಾಲಿಕ ವ್ಯವಸ್ಥೆ ಅಡಿಯಲ್ಲಿ 10 ವರ್ಷ ಸೇವೆ ಸಲ್ಲಿಸಿದವರಿಗೆ ನಿಯಮ ನ್ಯಾಯಾಲಯ ಏನು ಹೇಳುತೆ?

ತಾತ್ಕಾಲಿಕ ಅಥವಾ ದಿನಗೂಲಿ ಆಧಾರದ ಮೇಲೆ 10 ವರ್ಷಗಳ ಕಾಲ ಸೇವೆ ಸಲ್ಲಿಸಿದರೆ, ಆ ಉದ್ಯೋಗಿಯನ್ನು ಕಾಯಂಗೊಳಿಸುವ ಸಾಧ್ಯತೆ ಇದೆ. ಹೈಕೋರ್ಟ್ ಈ ಬಗ್ಗೆ ಮಹತ್ವದ ಆದೇಶ ಹೊರಡಿಸಿದೆ. ನಿರಂತರವಾಗಿ 10 ವರ್ಷಗಳ ಕಾಲ ಮಂಜೂರಾದ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನೌಕರರಿಗೆ ಕಾಯಂ ಸೇವೆಯ ಹಕ್ಕು ಇದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಕರ್ನಾಟಕ ಹೈಕೋರ್ಟ್ ನೀಡಿರುವ ಮಹತ್ವದ ತೀರ್ಪೊಂದರಲ್ಲಿ ಮಂಜೂರಾದ ಹುದ್ದೆಯಲ್ಲಿ 10 ವರ್ಷಗಳ ಕಾಲ ನಿರಂತರ ಕೆಲಸ ಮಾಡಿದ ನೌಕರರು ತಮ್ಮ ಸೇವೆ ಕಾಯಂಗೊಳಿಸಲು ಅರ್ಹರೆಂದು ಘೋಷಿಸಿದೆ. ಈ ತೀರ್ಪಿನ ಜೊತೆಗೆ, 30 ವರ್ಷಗಳಿಂದ ದಿನಗೂಲಿ ಆಧಾರದ ಮೇಲೆ ಅರಣ್ಯ ವೀಕ್ಷಕ/ಚಾಲಕರಾಗಿ ಸೇವೆ ಸಲ್ಲಿಸುತ್ತಿರುವ ನೌಕರರೊಬ್ಬರ ಸೇವೆಯನ್ನು ಕಾಯಂಗೊಳಿಸಲು ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆಗೆ ಕೋರ್ಟ್‌ ಆದೇಶಿಸಿದೆ.

ಕರ್ನಾಟಕ ಹೈಕೋರ್ಟ್‌ನ ಈ ಆದೇಶವು ದೀರ್ಘಕಾಲದಿಂದ ತಾತ್ಕಾಲಿಕ ಅಥವಾ ದಿನಗೂಲಿ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನೌಕರರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ನಿರಂತರವಾಗಿ 10 ವರ್ಷಗಳ ಕಾಲ ಮಂಜೂರಾದ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನೌಕರರಿಗೆ ಕಾಯಂ ಸೇವೆಯ ಹಕ್ಕು ಇದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಈ ತೀರ್ಪು, ರಾಜ್ಯದ ವಿವಿಧ ಇಲಾಖೆಗಳಲ್ಲಿ ದೀರ್ಘಕಾಲ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಾವಿರಾರು ನೌಕರರಿಗೆ ಭರವಸೆ ಎನಿಸಿದೆ.

ಉದಾಹರಣೆ:

ಏನಿದು ಪ್ರಕರಣ

ಜುಂಜಪ್ಪ ಅವರು 30 ವರ್ಷಗಳ ಕಾಲ ದಿನಗೂಲಿ ಆಧಾರದ ಮೇಲೆ ಅರಣ್ಯ ವೀಕ್ಷಕ ಮತ್ತು ಚಾಲಕನಾಗಿ ಸೇವೆ ಸಲ್ಲಿಸಿದ್ದರು. ಅವರು ಯಾವುದೇ ಅಡಚಣೆ ಇಲ್ಲದೆ ತಮ್ಮ ಕರ್ತವ್ಯ ನಿರ್ವಹಿಸಿದ್ದರೂ, ಅರಣ್ಯ ಇಲಾಖೆ 2016ರ ಆಗಸ್ಟ್ 29ರಂದು ಅವರ ಸೇವೆಯನ್ನು ಕಾಯಂಗೊಳಿಸುವುದಕ್ಕೆ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಅವರು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ (ಕೆಎಟಿ) ಅರ್ಜಿ ಸಲ್ಲಿಸಿದರೂ 2019ರ ಜುಲೈ 31ರಂದು ಆ ಅರ್ಜಿಯನ್ನು ವಜಾಗೊಳಿಸಿತ್ತು. ನಂತರ ಜುಂಜಪ್ಪ ಅವರು ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ


ಅರಣ್ಯ ಇಲಾಖೆ ತಮ್ಮ ಸೇವೆಯನ್ನು ಕಾಯಂಗೊಳಿಸಲು ನಿರಾಕರಿಸಿ ನೀಡಿದ್ದ ಹಿಂಬರಹವನ್ನು ಮತ್ತು ಆ ಹಿಂಬರಹವನ್ನು ಪುರಸ್ಕರಿಸಿದ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣದ (ಕೆಎಟಿ) ಆದೇಶವನ್ನು ರದ್ದುಪಡಿಸುವಂತೆ ಆನೇಕಲ್ ವಲಯದ ಅರಣ್ಯ ವೀಕ್ಷಕ (ಫಾರೆಸ್ಟ್ ವಾಚರ್) ಪಿ. ಜುಂಜಪ್ಪ (53) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾಯಮೂರ್ತಿ ರಾಮಚಂದ್ರ ಡಿ. ಹುದ್ದಾರ್ ಅವರಿದ್ದ ಪೀಠ ಈ ಆದೇಶ ನೀಡಿದೆ.

ಅತಿಥಿ ಉಪನ್ಯಾಸಕರ ನೇಮಕಾತಿಗೆ ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ ಮತ್ತು ಯುಜಿಸಿ ನಿಗದಿತ ಅರ್ಹತೆಗಳಾದ ನೆಟ್/ಸ್ಲೆಟ್/ಪಿಎಚ್‌ಡಿ ಹೊಂದಿರಬೇಕು.

ಮೀಸಲಾತಿ:

ಮೀಸಲಾತಿ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ, ಮತ್ತು ನ್ಯಾಯಾಲಯಗಳು ಮೀಸಲಾತಿ ನಿಯಮಗಳ ಉಲ್ಲಂಘನೆಯನ್ನು ಪ್ರಶ್ನಿಸಿವೆ.

ನೇಮಕಾತಿ ಪ್ರಕ್ರಿಯೆ:

ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಅರ್ಹತೆ ಆಧಾರಿತ ಆಯ್ಕೆ ಪ್ರಕ್ರಿಯೆ ಇರಬೇಕು ಎಂದು ನ್ಯಾಯಾಲಯಗಳು ಹೇಳಿವೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD