ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ Online ಮೂಲಕ ಅರ್ಜಿ ಆಹ್ವಾನ

2025-26 ನೇ ಶೈಕ್ಷಣಿಕ ಸಾಲಿಗಾಗಿ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ವಿವಿಧ ಸ್ನಾತಕ ವಿಷಯಗಳಿಗೆ ತಾತ್ಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ Online ಮೂಲಕ ಅರ್ಜಿ ಆಹ್ವಾನಿಸಿರುವ ಬಗ್ಗೆ.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿಯ ಸ್ನಾತಕ (UG) ಕೋರ್ಸ ವಿಷಯಗಳಿಗೆ 2025-26ನೇ ಶೈಕ್ಷಣಿಕ ಸಾಲಿಗೆ ಹೆಚ್ಚುವರಿ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಯುಜಿಸಿ ಮತ್ತು ಕರ್ನಾಟಕ  2000ರ ನಿಯಮಾನುಸಾರ ಪೂರ್ಣಕಾಲಿಕ/ಅರೆಕಾಲಿಕ ತಾತ್ಕಾಲಿಕ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಈ ಕೆಳಕಾಣಿಸಿದ ಬೋಧನಾ ಕಾರ್ಯಭಾರಕ್ಕನುಗುಣವಾಗಿ,

(Walk-in-Interview) P.G./Ph.D./NET/SET

ಕೋಷ್ಟಕವನ್ವಯ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ಲಭ್ಯವಿರುವ Google Sheet ಲಿಂಕನ್ನು ಬಳಸಿ ವಿವರಗಳನ್ನು ಕಡ್ಡಾಯವಾಗಿ ಅರ್ಜಿಯನ್ನು ದಿನಾಂಕ: 24-06-2025 ರ ಒಳಗಾಗಿ ಭರ್ತಿಮಾಡಿ ಸಲ್ಲಿಸಬೇಕು ಹಾಗೂ ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣದಲ್ಲಿ ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿದ ದ್ವಿ-ಪ್ರತಿ ಅರ್ಜಿಗಳೊಂದಿಗೆ ವಿವಿಧ ವಿಷಯಗಳಿಗೆ ಅನುಗುಣವಾಗಿ ಸೂಚಿಸಿದ ದಿನಗಳಂದು ನೇರ ಸಂದರ್ಶನಕ್ಕೆ ಹಾಜರಾಗುವುದು. ಸಂದರ್ಶನದ ದಿನಾಂಕ ಮತ್ತು ಸಮಯವನ್ನು ವಿಶ್ವವಿದ್ಯಾಲಯದ www.rcub.ac.in

ಅಭ್ಯರ್ಥಿಗಳಿಗೆ ಸಾಮಾನ್ಯ ಸೂಚನೆಗಳು:

1. ಈ ಹುದ್ದೆಗಳು ಸಂಪೂರ್ಣ ತಾತ್ಕಾಲಿಕವಾಗಿದ್ದು, ಯಾವುದೇ ಮಂಜೂರಾದ ಹುದ್ದೆಗಳಿಗೆ ಎದುರಾಗಿ ಇರುವುದಿಲ್ಲ ಹಾಗೂ ಸೂಚಿಸಲಾದ ಹುದ್ದೆಗಳ ಸಂಖ್ಯೆಯು ತಾತ್ಕಾಲಿಕವಾಗಿದ್ದು ಕಾರ್ಯಭಾರದ ಅನುಗುಣವಾಗಿ ನಿಯಮಾನುಸಾರ ತೆಗೆದುಕೊಳ್ಳಲಾಗುತ್ತದೆ.

2. ವಿಶ್ವವಿದ್ಯಾಲಯದ ವಿವಿಧ ವಿಷಯಗಳ ಕಾರ್ಯಭಾರದ ಆಗತ್ಯತೆಗನುಗುಣವಾಗಿ ಹಾಗೂ ಸದ್ಯದಲ್ಲಿ ಜಾರಿಯಲ್ಲಿರುವ ಸರ್ಕಾರದ ಮೀಸಲಾತಿ ಮತ್ತು ಯು.ಜಿ.ಸಿ ನಿಯಮಾವಳಿ ಅನುಸಾರ ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲಾಗುವುದು.

3. ಮೀಸಲಾತಿಯ ಸೌಲಭ್ಯವನ್ನು ಪಡೆದುಕೊಳ್ಳುವ ಅಭ್ಯರ್ಥಿಗಳು ಜಾತಿ/ವರ್ಗ ಪ್ರಮಾಣ ಪತ್ರಗಳಿಗೆ ಸಂಬಂಧಪಟ್ಟ ಸಕ್ರಮ ಪ್ರಾಧಿಕಾರದಿಂದ ಅಧಿಕೃತ ದಾಖಲಾತಿಗಳ ಧೃಢೀಕರಣ ಪ್ರತಿಗಳನ್ನು ಅರ್ಜಿಯೊಂದಿಗೆ ಕಡ್ಡಾಯವಾಗಿ ಲಗತ್ತಿಸತಕ್ಕದ್ದು ಸದರಿ ನೇಮಕಾತಿ ಅಧಿಸೂಚನೆ ಪ್ರಕಟವಾದ ದಿನಾಂಕದಿಂದ ಒಂದು ವರ್ಷದೊಳಗಿನ ಪ್ರಮಾಣ ಪತ್ರಗಳನ್ನು ಪಡೆದುಕೊಂಡಿರತಕ್ಕದು.

4. ನಿಗದಿತ ಅರ್ಜಿ ನಮೂನೆಗಳನ್ನು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣ www.rcub.ac.in ನಿಂದ ಡೌನ್‌ ಲೋಡ್ ಮಾಡಿಕೊಂಡು ಭರ್ತಿ ಮಾಡಿ ದ್ವಿ-ಪ್ರತಿ ಅರ್ಜಿ ಹಾಗೂ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

5. ಅಭ್ಯರ್ಥಿಗಳು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಜಾಲತಾಣದಲ್ಲಿ ಲಭ್ಯವಿರುವ Google Sheet ಲಿಂಕ್ ಮೂಲಕ ಅರ್ಜಿಯನ್ನು ಕಡ್ಡಾಯವಾಗಿ ಸಲ್ಲಿಸತಕ್ಕದ್ದು,

6. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಜಾಲತಾಣದಲ್ಲಿ ಲಭ್ಯವಿರುವ Google Sheet ಲಿಂಕ್‌ನ್ನು ಬಳಸಿ ಅರ್ಜಿಯನ್ನು ಸಲ್ಲಿಸಲು : 24-06-2015

7. ಪ್ರತಿ ಹುದ್ದೆಗೆ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸತಕ್ಕದ್ದು. ೫. ಅಭ್ಯರ್ಥಿಗಳು ಕಡ್ಡಾಯವಾಗಿ ಹೊಸದಾಗಿ ನಿಗದಿಪಡಿಸಿರುವ ಸೇವಾ ಪ್ರಮಾಣ ಪತ್ರದ ನಮೂನೆಯಲ್ಲಿ ಸೇವಾ ಅವಧಿಯ ವಿವರಗಳನ್ನು ಪಡೆದು ಆನ್‌ಲೈನ್ ಅರ್ಜಿಯಲ್ಲಿ ನಮೂದಿಸುವುದು. (ಮಾದರಿ ಸೇವಾ ಪ್ರಮಾಣ ಪತ್ರದ ನಮೂನೆಯನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಪಡೆಯಬಹುದು).

8. ಅಭ್ಯರ್ಥಿಗಳು ಕಡ್ಡಾಯವಾಗಿ ಹೊಸದಾಗಿ ನಿಗದಿಪಡಿಸಿರುವ ಸೇವಾ ಪ್ರಮಾಣ ಪತ್ರದ ನಮೂನೆಯಲ್ಲಿ ಸೇವಾ ಅವಧಿಯ ವಿವರಗಳನ್ನು ಪಡೆದು ಆನ್‌ಲೈನ್ ಅರ್ಜಿಯಲ್ಲಿ ನಮೂದಿಸುವುದು. (ಮಾದರಿ ಸೇವಾ ಪ್ರಮಾಣ ಪತ್ರದ ನಮೂನೆಯನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಪಡೆಯಬಹುದು).

9. ಆಯ್ಕೆಯಾದ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಟ್ಟ ಯಾವುದೇ ಸ್ಥಳದಲ್ಲಿ ಸೇವೆ ಸಲ್ಲಿಸಲು ಸಿದ್ಧರಿರಬೇಕು. 10. ಅರ್ಜಿಯಲ್ಲಿ ನೀಡಿರುವ ವಿಳಾಸವು ಅಂತಿಮವಾಗಿದ್ದು, ನಂತರ ವಿಳಾಸ ಬದಲಾವಣೆ ಆದರೆ ಯಾವುದೇ ಪತ್ರ ವ್ಯವಹಾರಗಳಿಗೆ ಆಸ್ಪದವಿರುವದಿಲ್ಲ.

11. ನಿಗದಿಪಡಿಸಿದ ದಿನಾಂಕದ ನಂತರ ತಲುಪಿದ, ಅಪೂರ್ಣವಾಗಿರುವ ಮತ್ತು ನಿಗದಿತ ನಮೂನೆಯಲ್ಲಿರದ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಮತ್ತು ಈ ವಿಷಯದಲ್ಲಿ ಮುಂದಿನ ಪತ್ರ ವ್ಯವಹಾರಗಳಿಗೆ ಆಸ್ಪದವಿರುವುದಿಲ್ಲ. 12. ಪ್ರತ್ಯಕ್ಷವಾಗಿ ಇಲ್ಲವೇ ಪರೋಕ್ಷವಾಗಿ ಪ್ರಭಾವ ಬೀರುವ ಅಭ್ಯರ್ಥಿಯ ಆಭ್ಯರ್ಥಿತನವನ್ನು ಅನರ್ಹಗೊಳಿಸಲಾಗುವುದು.

13. ಆಯ್ಕೆಯಾದ ಅತಿಥಿ ಉಪನ್ಯಾಸಕರ ಸಂಭಾವನೆಯನ್ನು ವಿಶ್ವವಿದ್ಯಾಲಯದ ನಿಯಮಾನುಸಾರ ನೀಡಲಾಗುವುದು.

14. (Walk-in Interview)  ವಿಶ್ವವಿದ್ಯಾಲಯದ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಅಭ್ಯರ್ಥಿಗಳು ವಿಶ್ವವಿದ್ಯಾಲಯದ ವೆಬ್‌ ಸೈಟ್ ಪ್ರತಿನಿತ್ಯ ಗಮನಿಸಲು ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಸಂದರ್ಶನ ಪತ್ರ ಕಳಿಸುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕುಲಸಚಿವರ ಕಾರ್ಯಾಲಯದ ಸಹಾಯವಾಣಿ ಸಂಖ್ಯೆ: 0831 – 2565241/257 ಗೆ ಕರೆ ಮಾಡಿ ತಿಳಿಯಬಹುದು.

15. ಸಂದರ್ಶನಕ್ಕಾಗಿ ಬರುವ ಅಭ್ಯರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಯಾವುದೇ ತೆರನಾದ ಭತ್ಯೆಗಳನ್ನು ನೀಡಲಾಗುವದಿಲ್ಲ.

16. ಸಂದರ್ಶನಕ್ಕಾಗಿ ಬರುವ ಅಭ್ಯರ್ಥಿಗಳು ವಿದ್ಯಾರ್ಹತೆ ಹಾಗೂ ಜಾತಿ/ವರ್ಗ ಪ್ರಮಾಣ ಪತ್ರಗಳಿಗೆ ಸಂಬಂಧಪಟ್ಟ ಅಧಿಕೃತ ಮೂಲ ಶೈಕ್ಷಣಿಕ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು ತಪ್ಪಿದ್ದಲ್ಲಿ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವದು.

17. ತಾತ್ಕಾಲಿಕ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂದರ್ಶನ ನಡೆಸುವುದು ವಿಶ್ವವಿದ್ಯಾಲಯದ ವಿವೇಚನೆಗೆ ಒಳಪಟ್ಟಿರುತ್ತದೆ.

18. ಈ ಅಧಿಸೂಚನೆಯಲ್ಲಿ ಪ್ರಕಟಿಸಿದ ಯಾವುದೇ ಹುದ್ದೆಗಳನ್ನು ವಿಶ್ವವಿದ್ಯಾಲಯದ ಕಾರ್ಯಭಾರಕ್ಕೆ ಅನುಗುಣವಾಗಿ ತುಂಬುವ ಇಲ್ಲವೇ.

19. ಒಂದು ವೇಳೆ ಅಭ್ಯರ್ಥಿಗಳು ತಪ್ಪು ಮಾಹಿತಿ ನೀಡಿದ್ದಲ್ಲಿ ಅಂತಹ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಿಂದ ಅನರ್ಹಗೊಳಿಸಿ, ಅವರುಗಳ ವಿರುದ್ಧ ವಿಶ್ವವಿದ್ಯಾಲಯದಿಂದ ಕ್ರಮ ಜರುಗಿಸಲಾಗುವುದು.

20. ಕೊನೆಯ ದಿನಾಂಕದ ನಂತರ ಬಂದಿರುವ ಅಭ್ಯರ್ಥಿಗಳ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

21. ಸದರಿ ಅತಿಥಿ ಉಪನ್ಯಾಸಕರ ಆಯ್ಕೆಗೆ ಸಂಬಂಧಿಸಿದ ಸಂದರ್ಶನ ಹಾಗೂ ಇನ್ನಿತರ ಮಾಹಿತಿಗಳನ್ನು ರಾಣಿ ಚನ್ನಮ್ಮ ສະບm www.roub.ac.in ಜಾಲತಾಣವನ್ನು ಪ್ರತಿನಿತ್ಯ ಗಮನಿಸತಕ್ಕದ್ದು.

22. ಅತಿಥಿ ಉಪನ್ಯಾಸಕರ ತಾತ್ಕಾಲಿಕ ಭರ್ತಿ ಮಾಡುವ ಮತ್ತು ಭರ್ತಿ ಮಾಡದೇ ಇರುವ/ನೇಮಕಾತಿಯಾಗಿ ಪದೇ ಪದೇ ಗೈರು ವಿಶ್ವವಿದ್ಯಾಲಯದ ನಿರ್ಣಯವು ಅಂತಿಮವಾಗಿರುತ್ತದೆ.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಬೆಳಗಾವಿಯಲ್ಲಿ ವಿವಿಧ ವಿಷಯಗಳಿಗೆ ಅನುಗುಣವಾಗಿ ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣದಲ್ಲಿ ಸೂಚಿಸಿದ ದಿನ ಹಾಗೂ ಸಮಯಕ್ಕೆ ಅನುಗುಣವಾಗಿ ಮೌಖಿಕ ಸಂದರ್ಶನಕ್ಕೆ (Walk in Interview) ಭರ್ತಿ ಮಾಡಿದ ದ್ವಿ-ಪ್ರತಿ ಅರ್ಜಿ ಹಾಗೂ ಮೂಲ ಶೈಕ್ಷಣಿಕ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಒಂದು ಘಂಟೆ ಮೊದಲು ಹಾಜರಾಗಬೇಕು ತಪ್ಪಿದ್ದಲ್ಲಿ ವಿಶ್ವವಿದ್ಯಾಲಯದ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು

ವಿಶೇಷ ಸೂಚನೆ: ಸಂದರ್ಶನದ ಸಮಯಕ್ಕಿಂತ ಒಂದು ಘಂಟೆ ಮುಂಚಿತವಾಗಿ ಅಭ್ಯರ್ಥಿಗಳ ಮೂಲ ಶೈಕ್ಷಣಿಕ ದಾಖಲೆಗಳನ್ನು ಪರಿಶೀಲಿಸಲಾಗುವುದು.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

2 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

8 hours ago

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ; ಶಾರುಖ್, ಮ್ಯಾಸ್ಸಿ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ

ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…

8 hours ago

ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಕೇಂದ್ರ ಕ್ರೀಡಾ ಸಚಿವ ಮನ್ಸುಖ್ಸ   ಸನ್ಮಾನಿಸಿದರು

ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…

8 hours ago

ಕೇಂದ್ರ ಸಚಿವ ಗಡ್ಕರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…

9 hours ago

ಮಹಾರಾಷ್ಟ್ರ: ದಹಿ ಹಂಡಿಯ ಗೋವಿಂದರಿಗೆ ವಿಮಾ ರಕ್ಷಣೆಯನ್ನು ಸರ್ಕಾರ ಘೋಷಿಸಿದೆ.

ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…

14 hours ago