Home » ಲೈವ್ ನ್ಯೂಸ್ » ಅತಿಥಿ ಉಪನ್ಯಾಸಕರ ನೇಮಕಾತಿಗೆ 3ನೇ ಸುತ್ತಿನ ಕೌನ್ಸೆಲಿಂಗ್ ಅತಿ ಸಿಗ್ರದಲ್ಲಿ.

ಅತಿಥಿ ಉಪನ್ಯಾಸಕರ ನೇಮಕಾತಿಗೆ 3ನೇ ಸುತ್ತಿನ ಕೌನ್ಸೆಲಿಂಗ್ ಅತಿ ಸಿಗ್ರದಲ್ಲಿ.

Facebook
X
WhatsApp
Telegram

ಬೆಂಗಳೂರು.07.ಫೆಬ್ರವರಿ.26: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು 2025-26ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ 3ನೇ ಸುತ್ತಿನ ಆನ್‌ಲೈನ್ ಕೌನ್ಸೆಲಿಂಗ್ ನಡೆಸುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

2025-26ನೇ ಶೈಕ್ಷಣಿಕ ಸಾಲಿಗೆ ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ(ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ(ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಒಳಗೊಂಡಂತೆ) ಆನ್‌ಲೈನ್ ಕೌನ್ಸೆಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಕಾಲೇಜು ಆಯ್ಕೆ ಮಾಡಿಕೊಳ್ಳಲು ಈಗಾಗಲೇ 1 ಮತ್ತು 2ನೇ ಸುತ್ತಿನ ಆನ್‌ಲೈನ್ ಕೌನ್ಸೆಲಿಂಗ್ ಅನ್ನು ನಡೆಸಲಾಗಿರುತ್ತದೆ.

ಈ ರೀತಿ ಅಭ್ಯರ್ಥಿಗಳು 1 ಮತ್ತು 2ನೇ ಸುತ್ತಿನ ಆನ್‌ಲೈನ್ ಕೌನ್ಸಲಿಂಗ್ ನಲ್ಲಿ ಕಾಲೇಜು ಆಯ್ಕೆ ಮಾಡಿಕೊಂಡು ಸಂಬಂಧಪಟ್ಟ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕರ್ತವ್ಯಕ್ಕೆ ವರದಿ ಮಾಡಿಕೊಂಡ ನಂತರ ಉಳಿಕೆಯಾಗಿರುವ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಸಂಬಂದ 3ನೇ ಸುತ್ತಿನ ಆನ್‌ಲೈನ್ ಕೌನ್ಸಲಿಂಗ್ ಅನ್ನು ನಡೆಸಲು ಆಯ್ಕೆ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಸೂಚನೆಗಳು:

ಪ್ರಸ್ತುತ ನಡೆಸಲು ಉದ್ದೇಶಿಸಲಾಗಿರುವ 3ನೇ ಸುತ್ತಿನ ಕೌನ್ಸಲಿಂಗ್, ಯು.ಜಿ.ಸಿ. ನಿಗಧಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಲಭ್ಯವಿರುವ ವಿಷಯಗಳಿಗೆ ಮಾತ್ರ ಅನ್ವಯಿಸುತ್ತದೆ.

ಯು.ಜಿ.ಸಿ. ನಿಗದಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಕೊರತೆ ಇರುವ ವಿಷಯಗಳಿಗೆ ನ್ಯಾಯಾಲಯದ ನಿರ್ದೇಶನದ ಮೇರೆಗೆ ಮುಂದಿನ ದಿನಗಳಲ್ಲಿ ಕೌನ್ಸಲಿಂಗ್ ನಡೆಸಲು ಕ್ರಮವಹಿಸಲಾಗುವುದು.

ಅತಿಥಿ ಉಪನ್ಯಾಸಕರ ಆಯ್ಕೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಇಲಾಖೆಯ ಅಂತರ್ಜಾಲ ತಾಣ ರಲ್ಲಿ ಪ್ರಕಟಿಸಲಾಗುವುದು.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology