Home » ಲೈವ್ ನ್ಯೂಸ್ » ಅತಿಥಿ ಉಪನ್ಯಾಸಕರ ನೇಮಕಾತಿಗೆ ಹೊಸ ನಿಯಮದ ಜಾರಿಗೆ ತರಲಾಗಿದೆ.

ಅತಿಥಿ ಉಪನ್ಯಾಸಕರ ನೇಮಕಾತಿಗೆ ಹೊಸ ನಿಯಮದ ಜಾರಿಗೆ ತರಲಾಗಿದೆ.

Facebook
X
WhatsApp
Telegram

ಬೆಂಗಳೂರು.26.ಜುಲೈ.26:ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಇದೇ ಪ್ರಥಮ ಬಾರಿಗೆ ರೋಸ್ಟರ್ ( Roster)(ನೇರ ಮೀಸಲಾತಿ) ಪದ್ಧತಿಯನ್ನು ಜಾರಿಗೆ ತರಲಾಗಿದೆ. ಉನ್ನತ ಶಿಕ್ಷಣ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿನಿಂದಲೇ ಅನ್ವಯವಾಗುವಂತೆ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಶೇಕಡಾ 50ರಷ್ಟು ಮೀಸಲಾತಿಯನ್ನು ಜಾರಿ ತರಲಾಗಿದೆ.

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ರೋಸ್ಟರ್ ಹಾಗೂ ಮೀಸಲಾತಿ ಕುರಿತ ಪ್ರಮುಖ ಮಾಹಿತಿ:

ಮೀಸಲಾತಿ ವಿವರ: ಪರಿಸಿಸ್ಟ್ ಜಾತಿ ಅಭ್ಯರ್ಥಿಗಳಿಗೆ ಒಳಮೀಸಲಾತಿ ಸೇರಿದಂತೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ನಿಯಮಾನುಸಾರ ಮೀಸಲಾತಿಯನ್ನು ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ:  online councelling ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ರೋಸ್ಟರ್ ಬಿಂದುಗಳನ್ನು ಪರಿಗಣಿಸಿ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.

ವಿದ್ಯಾರ್ಹತೆ: ಯುಜಿಸಿ (UGC) ಮಾರ್ಗಸೂಚಿಯಂತೆ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ. 55 ಅಂಕಗಳೊಂದಿಗೆ NET/SLET/K-SET ಅಥವಾ ಪಿಎಚ್‌ಡಿ (Ph.D) ಪೂರೈಸಿರಬೇಕು.

ಕಾರ್ಯಭಾರ ಆಧಾರಿತ: ಯಾವುದೇ ಖಾಲಿ ಹುದ್ದೆಗೆ ನೇರವಾಗಿ ನೇಮಕ ಮಾಡಿಕೊಳ್ಳುವುದಿಲ್ಲ. ಕಾಲೇಜಿನಲ್ಲಿ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆಯಾದ ಬಳಿಕ ಉಳಿಯುವ ಹೆಚ್ಚುವರಿ ಕಾರ್ಯಭಾರಕ್ಕೆ ಮಾತ್ರ ಅತಿಥಿ ಉಪನ್ಯಾಸಕರನ್ನು ನೇಮಿಸಲಾಗುತ್ತದೆ.

ಅಭ್ಯರ್ಥಿಗಳು ಕಾಲೇಜು ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಇದೇ ಮೊದಲ ಬಾರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮೀಸಲಾತಿ ಜಾರಿಗೊಳಿಸಲಾಗಿದ್ದು, ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಒಳಮೀಸಲಾತಿ ಅನ್ವಯಿಸಲಾಗಿದೆ.

ಇದುವರೆಗೂ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಜಾತಿ ಆಧಾರಿತ ಮೀಸಲಾತಿ ಇರಲಿಲ್ಲ. ಅಂಗವಿಕಲರು, ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತಿತ್ತು.

2026-27ನೇ ಶೈಕ್ಷಣಿಕ ಸಾಲಿನಿಂದಲೇ ಜಾತಿ ಆಧಾರಿತ ಮೀಸಲಾತಿ (ಶೇ 50) ಅಳವಡಿಸಿಕೊಂಡು ನೇಮಕಾತಿ ಮಾಡಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ.

ಸರ್ಕಾರಿ ಸಂಸ್ಕೃತ ಮತ್ತು ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ ರಾಜ್ಯದ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಕಾಯಂ ಅತಿಥಿ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆಯ ನಂತರ ಉಳಿಯುವ ಕಾರ್ಯಭಾರದ ಆಧಾರದಲ್ಲಿ ವಿವಿಧ ವಿಷಯಗಳ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಹೊಸ ನಿಯಮದ ಅನ್ವಯ ಈ ಬಾರಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಇದೇ ಜುಲೈ ಅಂತ್ಯದ ಒಳಗೆ ಕೌನ್ಸೆಲಿಂಗ್‌ ಪ್ರಕ್ರಿಯೆ ಪೂರ್ಣಗೊಳಿಸಲು ಉನ್ನತ ಶಿಕ್ಷಣ ಇಲಾಖೆ ಸೂಚಿಸಿದೆ.

ಜಾತಿ ಆಧಾರಿತ ಮೀಸಲಾತಿ ನಿಯಮವು ತಾಂತ್ರಿಕ ಶಿಕ್ಷಣ ಇಲಾಖೆಯ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್‌ ಕಾಲೇಜುಗಳಿಗೂ ಅನ್ವಯವಾಗಲಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology