ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು ಬೋಧನೆ ಮಾಡಲು ಅತಿಥಿ ಉಪನ್ಯಾಸಕರನ್ನು ನೇಮಕ ಮಾಡುವ ಸಂಬಂಧ ಯು.ಜಿ.ಸಿ. ನಿಯಮಾನುಸಾರ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಶೇ. 55 ಅಂಕಗಳು (ಸಾಮಾನ್ಯ ಮತ್ತು ಇತರೆ ವರ್ಗದ ಅಭ್ಯರ್ಥಿಗಳು) ಹಾಗೂ ಶೇ. 50 ಅಂಕಗಳೊಂದಿಗೆ (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು) NET/SLET/SET/PhD ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖೇನ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸ್ನಾತಕ ಪದವಿಯ ವಿಷಯಗಳು: ಕನ್ನಡ, ಇಂಗ್ಲೀಷ್, ಹಿಂದಿ, ಉರ್ದು, ಸಂಸ್ಕೃತ, ಇತಿಹಾಸ, ಅರ್ಥಶಾಸ್ತ್ರ,
ಸಮಾಜಶಾಸ್ತ್ರ, ಪತ್ರಿಕೋದ್ಯಮ, ರಾಜ್ಯಶಾಸ್ತ್ರ, ವಾಣಿಜ್ಯಶಾಸ್ತ್ರ & ನಿರ್ವಹಣೆ, ಸಮಾಜಕಾರ್ಯ, ಮನೋವಿಜ್ಞಾನ, ಗ್ರಂಥಾಲಯ & ಮಾಹಿತಿ ವಿಜ್ಞಾನ, ದೈಹಿಕ ಶಿಕ್ಷಣ, ವಿದ್ಯುನ್ಮಾನ, ಗಣಕ ವಿಜ್ಞಾನ, BCA, BCA Data Science, ಸೂಕ್ಷ್ಮಜೀವಶಾಸ್ತ್ರ, ಜೈವಿಕ ತಂತ್ರಜ್ಞಾನ, ಜೀವರಸಾಯನಶಾಸ್ತ್ರ, ಗಣಿತಶಾಸ್ತ್ರ, ಪ್ರಾಣಿಶಾಸ್ತ್ರ, ಭೌತಶಾಸ್ತ್ರ, ಸಸ್ಯಶಾಸ್ತ್ರ ಮತ್ತು ರಸಾಯನಶಾಸ್ತ್ರ.
ಹೆಚ್ಚಿನ ಮಾಹಿತಿಯನ್ನು ವಿಶ್ವವಿದ್ಯಾನಿಲಯದ ವೆಬ್ ಸೈಟ್ ರಿಂದ ಡೌನ್‌ಲೋಡ್ ಮಾಡಿಕೊಳ್ಳತ http://www.tumkuruniversity.ac.in ಕ್ಕದ್ದು. ಅಭ್ಯರ್ಥಿಗಳು ಆನ್‌ಲೈನ್ ಮುಖೇನ ದಿನಾಂಕ:13.08.2025 ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿಗಳನ್ನು ಸಲ್ಲಿಸುವುದು.
