ಅತಿಥಿ ಉಪನ್ಯಾಸಕರ ಪ್ರತಿಭಟನೆ.!

ದಿ.19,ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ. ಜಿಲ್ಲಾ ಘಟಕ ಮಂಡ್ಯ ಇವರ ವತಿಯಿಂದ ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.. 2024 25ನೇ ಸಾಲಿಗೆ ಸಂಬಂಧಿಸಿದಂತೆ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿ ಸಂಬಂಧ ಸರ್ಕಾರವು ಯುಜಿಸಿ ಅರ್ಹತೆ ಹೊಂದಿಲ್ಲದ 5500 ಅಧಿಕ ಉಪನ್ಯಾಸಕರನ್ನು ಜನವರಿ 20 ರಿಂದ ನಡೆಯುವ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಅನರ್ಹಗೊಳಿಸಿರುವ ಸಂಬಂಧ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರಿಗೆ ಮಂಡ್ಯದ ಜಿಲ್ಲಾಧಿಕಾರಿಗಳ ಮುಖಾಂತರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತ,

ಕಳೆದ 20 ವರ್ಷಗಳಿಂದ ಅತ್ಯಂತ ಕಡಿಮೆ ಗೌರವ ಸಂಭಾವನೆ ಪಡೆದು ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಬೀದಿಗೆ ತಳ್ಳುತ್ತಿರುವ ಸಿದ್ದರಾಮಯ್ಯ ಸರ್ಕಾರದವರನ್ನು ಹಕ್ಕು ತಾಯಗಳೊಂದಿಗೆ ವಿವಿಧ ಸಂಘಟನೆಗಳ ಸಹಕಾರ ಪಡೆದು ಪ್ರತಿಭಟನೆ ನಡೆಸಲಾಯಿತು.

ಕೇವಲ 140 ಕೋಟಿ ರೂ ಹಣವನ್ನು ಉನ್ನತ ಶಿಕ್ಷಣ ಇಲಾಖೆಗೆ ಅನುದಾನ ಕೊಟ್ಟಲ್ಲಿ ಮುಂದಿನ 20 ವರ್ಷಗಳವರೆಗೆ ಅತಿಥಿ ಉಪನ್ಯಾಸಕರ ಸಮಸ್ಯೆ ಇಲ್ಲ ದಂತೆ ನೋಡಿಕೊಳ್ಳಬಹುದು.. ಹಾಗೂ ಪ್ರಸ್ತುತ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಯುಜಿಸಿ ಮಾನದಂಡಗಳ ಅನ್ವಯ ಅರ್ಹತೆ ಪಡೆಯದ ಅಭ್ಯರ್ಥಿಗಳನ್ನು ನೇಮಕಾತಿಯಿಂದ ಕೈ ಬಿಡಬಾರದು ಎಂದು ಒತ್ತಾಯಿಸಲಾಯಿತು.

ಅತಿಥಿ ಉಪನ್ಯಾಸಕರ ಸಮಸ್ಯೆಗೆ ಈ ಸರ್ಕಾರ ಸ್ಪಂದಿಸುವಂತೆ ಈ ನಾಡಿನ ಪ್ರಖ್ಯಾತ ಸಾಹಿತಿ ಆದಂತಹ ದೇವನೂರು ಮಹಾದೇವರು ಮಾನ್ಯ ಮುಖ್ಯಮಂತ್ರಿಗಳವರಿಗೆ ಒತ್ತಡ ಹಾಕಿ ಈ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಮಧ್ಯಪ್ರವೇಶಿಸಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ಅತಿಥಿ ಉಪನ್ಯಾಸಕರ ರಾಜ್ಯ ಸಮಾನ್ಯ ಸಮಿತಿಯ ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ಪಿ ಎಸ್ ನಾಗರಾಜ ರವರು, ಕರ್ನಾಟಕ ಸಮ ಸಮಾಜ ಸಂಘಟನೆಯ ಅಧ್ಯಕ್ಷರಾದ ನರಸಿಂಹಮೂರ್ತಿಯವರು, ಡಾ. ಬಿಆರ್ ಅಂಬೇಡ್ಕರ್ ವಾರಿಯರ್ ಸಂಘಟನೆಯ ಅಧ್ಯಕ್ಷರಾದ ಗಂಗರಾಜುರವರು, ಯುವ ಮುಖಂಡರಾದ ಅಭಿ ಗೌಡರ್ವರು, ವಕೀಲರುಗಳು, ರೈತ ಸಂಘದ ಕಾರ್ಯಕರ್ತರು ಹಾಗೂ ಹಲವು ಅತಿಥಿ ಉಪನ್ಯಾಸಕರು ಈ ಸಂದರ್ಭದಲ್ಲಿ ಉಪಸ್ಥಿತರು,, ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿಗಳಾದ ಡಾ. ಬಿ ಸಿ ಶಿವಾನಂದ ಮೂರ್ತಿರವರು ಸರ್ಕಾರಕ್ಕೆ ಈ ಮನವಿಯನ್ನು ತಲುಪಿಸುವುದಾಗಿ ಈ ಸಂದರ್ಭದಲ್ಲಿ ಭರವಸೆ ನೀಡಿದರು..

prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

2 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

2 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

3 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

3 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

4 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

14 hours ago