ಅತಿಥಿ ಉಪನ್ಯಾಸಕರ ಪ್ರತಿಭಟನೆ

ಹಾಸನ: 29.ಜನವರಿ.25:- ರಾಜ್ಯದಲ್ಲಿ ವಿವಿಧ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ಸಮಸ್ಯೆ ಕುರಿತು ಪ್ರತಿಭಟನೆ.

ಹಾಸನ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಹಾಸನ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರೊಬ್ಬರು ಆರೋಪಿಸಿದ್ದು, ಈ ಆರೋಪ ಹಿಂಪಡೆಯುವಂತೆ ಆಗ್ರಹಿಸಿ ನಗರದ ಹೊರವಲಯ ಹೇಮಗಂಗೋತ್ರಿ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಮುಂದೆ ಅತಿಥಿ ಉಪನ್ಯಾಸಕರು ಬುಧವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಉಪನ್ಯಾಸಕರು, ವಿಶ್ವವಿದ್ಯಾಲಯದ ನಾಮನಿರ್ದೇಶಕ ಸಿಂಡಿಕೇಟ್ ಸದಸ್ಯರೊಬ್ಬರೂ ಕೆಲ ದಿನಗಳ ಹಿಂದೆ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದು, ಹಾಸನ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಕುಲಪತಿ ಮತ್ತು ಕುಲಸಚಿವರು ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ ಎಂದರು.

ಟೆಂಡರ್ ಪ್ರಕ್ರಿಯೆಯಲ್ಲಿಯೂ ಭ್ರಷ್ಠಾಚಾರ ನಡೆಯುತ್ತಿದೆ ಎಂದು ಸುಳ್ಳು ಮಾಹಿತಿ ನೀಡಿ, ವಿಶ್ವವಿದ್ಯಾಲಯದ ಗೌರವಕ್ಕೆ ಧಕ್ಕೆ ತಂದಿದ್ದು, ಅತಿಥಿ ಉಪನ್ಯಾಸಕರ ಗೌರವಕ್ಕೂ ಚ್ಯುತಿ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾವು ಯಾವುದೇ ಸಿಂಡಿಕೇಟ್ ಸದಸ್ಯರು, ವಿಶ್ವವಿದ್ಯಾಲಯ, ಕುಲಪತಿ ಹಾಗೂ ಕುಲಸಚಿವರ ವಿರುದ್ಧ ಪ್ರತಿಭಟನೆ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಸಿಂಡಿಕೇಟ್ ಸದಸ್ಯರ ನೇಮಕವಾದಾಗ ನಮಗೆ ಹೆಚ್ಚು ಸಂತೋಷವಾಗಿತ್ತು. ಅವರಿಂದ ಉದ್ಯೋಗದ ಭದ್ರತೆ, ವೇತನ ಹೆಚ್ಚಳ ಆಗಲಿದೆ ಎನ್ನುವ ಆಶಾಭಾವದಲ್ಲಿ ನಾವು ಇದ್ದೇವು. ಆದರೆ ಅವರೇ ಈ ರೀತಿ ಹೇಳಿಕೆ ಕೊಟ್ಟಿರುವುದು ಆಶ್ಚರ್ಯವನ್ನು ಉಂಟು ಮಾಡಿದೆ. ವಿದ್ಯಾವಂತರಾಗಿ ಇಂತಹ ಹೇಳಿಕೆ ಕೊಡಬಾರದಿತ್ತು ಎಂದು ದೂರಿದರು.

ನಮ್ಮ ನೇಮಕಾತಿ ಮಾಡುವ ವೇಳೆ ಅಧಿಸೂಚನೆ ಹೊರಡಿಸಿ, ಕಾನೂನು ವ್ಯಾಪ್ತಿಯಲ್ಲಿ ಸಂದರ್ಶನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಆಯ್ಕೆ ಸಮಿತಿಯಿಂದಲೇ ನೇಮಕಾತಿ ಮಾಡಿಕೊಳ್ಳಲಾಗಿದೆ. ಈ ಎಲ್ಲ ದಾಖಲೆ ಪರಿಶೀಲಿಸಿ ಕೂಡಲೇ ತಮ್ಮ ಹೇಳಿಕೆ ವಾಪಸ್ ಪಡೆಯಬೇಕು. ಇಲ್ಲವಾದರೆ ನಮ್ಮ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದರು.

ಪುಷ್ಪಾವತಿ, ಎಸ್.ಜೆ. ಮಹೇಶ್, ಅಶೋಕ್, ಮಹೇಶ್, ಪುಟ್ಟರಾಜಪ್ಪ, ಷಣ್ಮುಗ, ಪ್ರೇಮಕುಮಾರ್, ಅಮರ್ ಇತರರು ಭಾಗವಹಿಸಿದ್ದರು.

prajaprabhat

Recent Posts

ಜನಸಂಖ್ಯಾ ಸ್ಪೋಟದಿಂದ ದೇಶಕ್ಕೆ ಆಘಾತಕಾರಿ ಸಮಸ್ಯೆ: ಡಾ.ದಂಡಪ್ಪ ಬಿರಾದಾರ ಕಳವಳ

ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…

2 hours ago

ಜಿಲ್ಲೆಯ ಬೆಳೆಗಳ ಬೆಳವಣಿಗೆ ಮತ್ತು ರಸಗೊಬ್ಬರದ ದಾಸ್ತಾನು ವಿವರವನ್ನು

ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…

2 hours ago

ಸಾರ್ವಜನಿಕರ ಪ್ರಾಯಾಣಕ್ಕೆ ತೊಂದರೆಯಾಗದಿರಲಿ- ಜಿಲ್ಲಾಧಿಕಾರಿ ಸುರೇಶ ಇಟ್ನಾಳ

ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ…

2 hours ago

ಜವಾಹರ ನವೋದಯ ವಿದ್ಯಾಲಯದಲ್ಲಿ ಪಿಯುಸಿಗೆ ಪ್ರವೇಶ ಆರಂಭ

ರಾಯಚೂರು.03.ಆಗಸ್ಟ್.25: ಪ್ರಸ್ತುತ ಶೈಕ್ಷಣಿಕ ವರ್ಷ 2025-26 ನೇ ಸಾಲಿಗೆ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ವಿಷಯದ ತರಗತಿಗೆ ಪ್ರವೇಶ ಪ್ರಕ್ರಿಯೆ…

2 hours ago

ಒಪೆಕ್ ಆಸ್ಪತ್ರೆಯಲ್ಲಿನ ಹೊರಗುತ್ತಿಗೆ ನೇಮಕಾತಿ ಪ್ರಕ್ರಿಯೆ ನ್ಯಾಯಾಲಯ ಆದೇಶದಂತೆ ಮುಂದೂಡಿಕೆ

ರಾಯಚೂರು.03.ಆಗಸ್ಟ್.25: ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಧೀನದ ರಾಜೀವ್ ಗಾಂಧಿ ಸೂಪರ್‌ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಯಲ್ಲಿ ಬೋಧಕೇತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ…

2 hours ago

ಆಗಸ್ಟ್ 7ರಂದು ಗೌರಿ ಗಣೇಶ ಹಬ್ಬದ ಪೂರ್ವಭಾವಿ ಸಭೆ

ರಾಯಚೂರು.03.ಆಗಸ್ಟ.25: ಆಗಸ್ಟ್ 27ರಂದು ಆಚರಿಸುವ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಪೂರ್ವಭಾವಿ ಸಭೆಯು ಆಗಸ್ಟ್ 7ರ…

2 hours ago