ಬಳ್ಳಾರಿ.18.ಮಾರ್ಚ.25.:- 2024-2025ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿಉಪನ್ಯಾಸಕರ ವೇತನ್ ಬಿಡುಗಡೆಗೆ ಮನವಿ ಸಲ್ಲಿಸಿದರೆ ‘ಸರ್ಕಾರಿ ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ಸಂಘ’ ಆಗ್ರಹಿಸಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆ, ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಒಟ್ಟು 4,689 ಅತಿಥಿ ಉಪನ್ಯಾಸಕರಿದ್ದಾರೆ.
ಜಿಲ್ಲಾವಾರು ಸಂಖ್ಯೆಗೆ ಅನುಗುಣವಾಗಿ ತಲಾ ₹12,000ರಂತೆ ಜನವರಿ ಹಾಗೂ ಫೆಬ್ರುವರಿ ತಿಂಗಳ ಗೌರವ ಸಂಭಾವನೆ ಪಾವತಿಸಲು, ವೇತನವನ್ನು ಬಿಡುಗಡೆ ಮಾಡಲು ಜಿಲ್ಲಾ ಉಪ ನಿರ್ದೇಶಕರಿಗೆ ಸರ್ಕಾರ ಸೂಚಿಸಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಜನವರಿ ತಿಂಗಳ ವೇತನವನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಫೆಬ್ರವರಿ ತಿಂಗಳ ವೇತನ ಬಿಡುಗಡೆ ಮಾಡಿಲ್ಲ’ ಎಂದು ಸಂಘಟನೆ ಹೇಳಿದೆ.
‘ವೇತನ ಬಿಡುಗಡೆಯಾಗದೇ ಇರಲು ಖಜಾನೆಯಲ್ಲಿ ಅನುದಾನ ಇಲ್ಲವೆಂದು ಉತ್ತರ ಕೇಳಿ ಬರುತ್ತಿದೆ. ಸದ್ಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಯುತ್ತಿದೆ. ಇದರ ಬಳಿಕ ಕಾಲೇಜಿನ ಪ್ರಾಂಶುಪಾಲರಿಗೆ ಮೌಲ್ಯಮಾಪನ ಕಾರ್ಯ ಇರುತ್ತದೆ. ಆಗ ಅವರು ಸಹಿಗೆ ಲಭ್ಯವಾಗುವುದೇ ಇಲ್ಲ. ಮಾತ್ರವಲ್ಲದೆ ಮಾರ್ಚ್ ತಿಂಗಳ ಅಂತ್ಯದ ಒಳಗಾಗಿ ಸಂಬಂಧಿಸಿದ ಬಿಲ್ಲನ್ನು ಜಿಲ್ಲಾ ಖಜಾನೆಗೆ ರವಾನಿಸದಿದ್ದರೆ ಸಮಸ್ಯೆ ಮತ್ತಷ್ಟು ಜಟಿಲವಾಗುತ್ತದೆ’ ಎಂದು ಸಂಘಟನೆ ಆತಂಕ ವ್ಯಕ್ತಪಡಿಸಿದೆ.
ಆದ್ದರಿಂದ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಸರ್ಕಾರವನ್ನು ಆಗ್ರಹಿಸಿದೆ.
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…