ಬೆಂಗಳೂರು.08.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಪರವಾಗಿ ವಿಶೇಷ ಕಾನೂನು ನಿಯಮಾವಳಿ ರೂಪಿಸಿ ಯುಜಿಸಿ ಮತ್ತು ನಾನ್ ಯುಜಿಸಿ ಎನ್ನದೆ, ಮಾನವೀಯತೆ ದೃಷ್ಟಿಯಿಂದ ಎಲ್ಲ ಅತಿಥಿ ಉಪನ್ಯಾಸಕರ ಒಳಿತಿಗಾಗಿ ಒಂದು ಬಾರಿ ಸೇವಾ ಸಕ್ರಮಾತಿಮಾಡಲು ಕಾನೂನು ಸಚಿವಾರದ ಡಾ.ಎಚ್.ಕೆ.ಪಾಟೀಲ್ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಭೆಯಲ್ಲಿ ಚರ್ಚೆಸಲಾಯಿತು ಎಂದು ರಾಜ್ಯ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಡಾ.ಹಣಮಂತಗೌಡ ಕಲ್ಮನಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನಲ್ಲಿ ರಾಜ್ಯ ಸರ್ಕಾರಿ ಪ್ರಧಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಲು (ಕಾನೂನು ತೊಡಕು ತಿದ್ದುಪಡಿ) ಸೇರಿದಂತೆ ಹಲವಾರು ಸಮಸ್ಯೆಗಳನ್ನು ಇತ್ಯರ್ಥ ಪಡಿಸಲು ಎರ್ಪಡಿಸಿದ್ದ ಸಭೆಯಲ್ಲಿ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು.
ಈ ಸಭೆಯಲ್ಲಿ ಕಾನೂನು ಸಚಿವರಾದ ಡಾ.ಎಚ್.ಕೆ.ಪಾಟೀಲ ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಹಾಗೂ ಅಡ್ವಕೇಟ್ ಜನರಲ್ ಜಾಕ್‌ವೆಲ್ ಜೋತೆಗೆ ಅತಿಥಿ ಉಪನ್ಯಾಸಕರ ಪರವಾಗಿ ಸುಪ್ರೀಂಕೋರ್ಟ್ನ ಹಿರಿಯ ವಕೀಲರಾದ ಎಸ್.ಪಿ.ಕುಲಕರ್ಣಿರವರು, ಅವರು ನೀಡಿದರು.
ಆಯುಕ್ತರಾದ ಕು.ಮಂಜುಶ್ರೀ ಉಪಸ್ಥಿತಿರಿದ್ದರು. ಎಲ್ಲಾ ಅತಿಥಿ ಉಪನ್ಯಾಸಕರಿಗೂ (ಯುಜಿಸಿ ಅಂಡ್ ನಾನ್ ಯುಜಿಸಿ) ಎನ್ನದೆ ಒಂದು ಬಾರಿ ಸೇವಾ ಸಕ್ರಮಾತಿ ಮಾಡಲು ಕಾನೂನು ನುಯಮಾವಳಿಗಳನ್ನು ರೂಪಿಸುವಂತ್ತೆ ಅಡ್ವಕೇಟ್ ಜನರಲ್ ಅವರಿಗೆ ಸಚಿವರು ಸೂಚಿಸಿದ್ದು, 10- 15 ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಮಾನವೀಯ ದೃಷ್ಟಿಯಿಂದ ನ್ಯಾಯ ಒದಗಿಸುವ ಭರವಸೆ 2009ರ ಹಿಂದೆ ಪಡೆದ ಎಂಫಿಲ್ ಪದವಿಯನ್ನು ಪರಿಗಣಿಸಲು ಯುಜಿಸಿಗೆ ಇಲಾಖೆ ಪತ್ರ ಬರೆದಿದ್ದು, ಪತ್ರಬಂದ ನಂತರ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಸಭೆಯಲ್ಲಿ ಮಾತನಾಡುತ್ತ ಎಲ್ಲಾ ಅತಿಥಿ ಉಪನ್ಯಾಸಕರ ಹಿತರಕ್ಷಣೆಗಾಗಿ ಇಲಾಖೆ ಮತ್ತು ಸರ್ಕಾರ ಶ್ರಮಿಸುತ್ತಿದ್ದು ಕಾನೂನು ಸಚಿವರ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೇವಾ ಸಕ್ರಮಾತಿ ಮಾಡಲು ಬದ್ದರಿದ್ದು, ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿನ ಭರವಸೆಯಂತೆ ಅತಿಥಿ ಉಪನ್ಯಾಸಕರ ಸೇವೆಭದ್ರತೆ ಒದಗಿಸಲು ವಿಶೇಷ ನಿಯಮಾವಳಿಗಳನ್ನು ರೂಪಿಸಿಲಾಗುವುದು ಜೊತೆಗೆ ಇಂದಿನ ಸಭೆ ಫಲಪ್ರದಬಾಗಿದೆ ಎಂದು ತಿಳಿಸಿದರು.
ಕೊಪ್ಪಳ.08.ಆಗಸ್ಟ್.25: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ಕಾನೂನು ಪದವಿ ಪಡೆದಿರುವ ಅಭ್ಯರ್ಥಿಗಳಿಗೆ…
ಕೊಪ್ಪಳ.08.ಆಗಸ್ಟ್.25: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಧನಂಜಯ ಮಠದ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ…
ಕೊಪ್ಪಳ.08.ಆಗಸ್ಟ್.25: ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಗಳು ಬೇಕಾಗಿವೆ ಎಂದು ಸಮಾಜ ಕಲ್ಯಾಣ ಇಲಾಖೆಯ…
ಕೊಪ್ಪಳ.08.ಆಗಸ್ಟ್.25: ಕರ್ನಾಟಕ ಮುಕ್ತ ಶಾಲೆ–ಕೆ.ಓ.ಎಸ್ ಪೂರಕ ಪರೀಕ್ಷೆಗಳು ಆಗಸ್ಟ್ 11ರಿಂದ ಕೊಪ್ಪಳದ ಮುನಿರಾಬಾದ್‌ನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ…
ಕೊಪ್ಪಳ.08.ಆಗಸ್ಟ್.25: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅವರು ಆಗಸ್ಟ್ 9 ರಂದು ಶನಿವಾರ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ…
ಹೊಸ ದೆಹಲಿ.08.ಆಗಸ್ಟ್.25:- ದೇಶದಲ್ಲಿ ರಸ್ತೆ ಮತ್ತು ಸಾರಿಗೆ ಮೂಲಸೌಕರ್ಯಗಳು ವಿಶ್ವ ದರ್ಜೆಯ ಮಟ್ಟಕ್ಕೆ ಏರುತ್ತಿವೆ, ಇದರಿಂದಾಗಿ ಪ್ರಯಾಣದ ಸಮಯ ಕಡಿಮೆಯಾಗುತ್ತದೆ…