ಶಿವಮೊಗ್ಗ.19.ಮೇ.26: ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 2026-27ನೇ ಸಾಲಿಗೆ ಶಿವಮೊಗ್ಗ ನಗರದಲ್ಲಿ ಹೊಸದಾಗಿ ಅಲ್ಪಸಂಖ್ಯಾತರ ಮಹಿಳೆಯರ ಉನ್ನತ ಶಿಕ್ಷಣಕ್ಕೆ ಮಹಿಳಾ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸಿದ್ದು, ಈ ಕಾಲೇಜುಗಳಿಗೆ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಕ್ಕೆ ಅತಿಥಿ ಉಪನ್ಯಾಸಕರ ಹುದ್ದೆಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ಇಲ್ಲಿಗೆ ತಮ್ಮ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಮೇ 25 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಈ ಕಾರ್ಯಾಲಯ ದೂ.ಸಂ.: 08182-220206 ನ್ನು ಸಂಪರ್ಕಿಸುವುದು.





Any questions related to ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ?