ಬೆಂಗಳೂರು.30.ಮೇ.25:- ರಾಜ್ಯ ಉನ್ನತ ಶಿಕ್ಷಣ ಇಲಾಖೆ ಅಧಿಂದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸತತ ಎರಡು ದೇಶಕ ದೀಂದ್ ಕಾರ್ಯನಿರ್ವಹಿಸುವ ಅತಿಥಿ ಉಪನ್ಯಾಸಕರು ಕೆಲಸ ಮಾಡಿ 60 ವರ್ಷ ತುಂಬಿದವರಿಗೆ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರ ಕುಟುಂಬಗಳಿಗೆ ₹5 ಲಕ್ಷ ಇಡುಗಂಟು ನೀಡಲು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಸೇವಾ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ 2024ರಲ್ಲಿ ಅತಿಥಿ ಉಪನ್ಯಾಸಕರು ನಡೆಸಿದ್ದ ಧರಣಿ, ಪಾದಯಾತ್ರೆಯ ನಂತರ ಸರ್ಕಾರ ನಡೆಸಿದ ಮಾತುಕತೆಯಲ್ಲಿ ಇಡುಗಂಟು ನೀಡುವ ಭರವಸೆಯೂ ಸೇರಿತ್ತು.
ಅಂದು ನೀಡಿದ್ದ ಭರವಸೆಯಂತೆ ಉನ್ನತ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.
ಇಡುಗಂಟು ಯೋಜನೆ ಜನವರಿ 2024ರಿಂದಲೇ ಪೂರ್ವಾನ್ವಯವಾಗಲಿದ್ದು, ಆ ದಿನಾಂಕಕ್ಕೆ ಹಾಗೂ ನಂತರ 60 ವರ್ಷ ಪೂರೈಸಿದ ಎಲ್ಲರಿಗೂ ಸೌಲಭ್ಯ ಸಿಗಲಿದೆ. 2024ರ ಜನವರಿ 1ಕ್ಕಿಂತ ಹಿಂದಿನ ಐದು ವರ್ಷಗಳಲ್ಲಿ ಕನಿಷ್ಠ ಒಂದು ವರ್ಷ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ದಾಟಿದವರು ಇಟುಗಂಟು ಸೌಲಭ್ಯ ಪಡೆಯಬಹುದು.
ಆಯಾ ಕಾಲೇಜುಗಳ ಪ್ರಾಂಶುಪಾಲರು ಸೇವಾ ದೃಢೀಕರಣ ಪತ್ರ ನೀಡಬೇಕು. ಅತಿಥಿ ಉಪನ್ಯಾಸಕರು ಸಲ್ಲಿಸಿದ ಸೇವಾ ವರ್ಷಗಳ ಆಧಾರದಲ್ಲಿ ಪ್ರತಿ ವರ್ಷಕ್ಕೆ ₹50 ಸಾವಿರದಂತೆ ಗರಿಷ್ಠ 10 ವರ್ಷಗಳ ಸೇವೆಯನ್ನು ಪರಿಗಣಿಸಲಾಗುವುದು.
ಆಯಾ ಶೈಕ್ಷಣಿಕ ವರ್ಷದಲ್ಲಿ 240 ದಿನಗಳು ಕೆಲಸ ಮಾಡಿರಬೇಕು. 8 ತಿಂಗಳಿಗಿಂತ ಕಡಿಮೆ ಅವಧಿ ಕೆಲಸ ಮಾಡಿದ್ದರೆ ಅದನ್ನು ಭಾಗಶಃ ವರ್ಷ ಎಂದು ಲೆಕ್ಕಕ್ಕೆ ತೆಗೆದುಕೊಳ್ಳಲಾಗುವುದು. ಕೆಲಸದ ಅವಧಿಯಲ್ಲೇ ಮರಣ ಹೊಂದಿದರೆ ಅವರ ಕುಟುಂಬಕ್ಕೆ ಮೊತ್ತವನ್ನು ಹಸ್ತಾಂತರಿಸಲಾಗುವುದು ಎಂದು ಆದೇಶದಲ್ಲಿ ವಿವರಿಸಲಾಗಿದೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…