ದಾವಣಗೆರೆ.03.ಮೇ.25:- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಅತಿಥಿ ಉಪನ್ಯಾಸನೋರ್ವನಿಗೆ ವಿದ್ಯಾರ್ಥಿಗಳೆಲ್ಲ ಸೇರಿ ಚಳಿ ಬಿಡಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.ಅಶ್ಲೀಲ ಸಂದೇಶ ಕಳುಹಿಸಿದ ಉಪನ್ಯಾಸಕನನ್ನು ಕೂಡಿಹಾಕಿ ಥಳಿಸಿದ ವಿದ್ಯಾರ್ಥಿಗಳು!
ಚನ್ನಗಿರಿ ತಾಲ್ಲೂಕಿನ ಲಿಂಗೇಶ್ವರಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕನಾಗಿರುವ ಮುರುಳಿ ಎಂಬಾತ ಬಿಎಸ್ಸಿ ವಿಭಾಗದ ವಿದ್ಯಾರ್ಥಿನಿಗೆ ಕಾಲ್ ಹಾಗೂ ಮೆಸೇಜ್ ಮಾಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಉಪನ್ಯಾಸಕನನ್ನು ಕೂಡಿಹಾಕಿ ಥಳಿಸಿದ ವಿದ್ಯಾರ್ಥಿಗಳು ಆರೋಪಿ ಮುರುಳಿಯು ವಿದ್ಯಾರ್ಥಿನಿಗೆ ಐ ಲವ್ ಯು ಎಂದು ಮೆಸ್ಸೇಜ್ ಮಾಡಿದ್ದಲ್ಲದೆ, ವಿದ್ಯಾರ್ಥಿನಿ ನನಗೆ ಮಾಡುವೆ ಫಿಕ್ಸ್ ಆಗಿದೆ ಎಂದು ಹೇಳಿದರೂ ಕೂಡ ಅವನನ್ನು ಮದುವೆಯಾಗು ನನ್ನ ಜೊತೆ ಡೇಟಿಂಗ್ ಮಾಡು ಎಂದು ಪೀಡಿಸಿದ್ದಾನೆ. ಜೊತೆಗೆ ಅಲ್ಲದೆ ಅಶ್ಲೀಲವಾದ ಪೋಟೋ ಕಳುಹಿಸಿ ಟಾರ್ಚರ್ ನೀಡಿದ್ದಾನೆ.ಉಪನ್ಯಾಸಕ ವಿದ್ಯಾರ್ಥಿನಿಯರಿಗೆ ಪ್ರೀತಿ ಮಾಡುವಂತೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ.
ಈ ಬಗ್ಗೆ ಮಾಹಿತಿ ಪಡೆದ ವಿದ್ಯಾರ್ಥಿಗಳು ಶುಕ್ರವಾರ ಕಾಲೇಜ್ ಪ್ರಾರಂಭವಾಗುತ್ತಿದ್ದಂತೆ ಆಗಮಿಸಿದ ಉಪನ್ಯಾಸಕನನ್ನು ಪ್ರಶ್ನಿಸಿದ್ದಾರೆ. ಬಳಿಕ ಆತನಿಂದ ಮೊಬೈಲ್ ಪಡೆದು ಸಂದೇಶಗಳನ್ನು ನೋಡಿದ್ದಾರೆ.ವಿದ್ಯಾರ್ಥಿಗಳು ಪ್ರಶ್ನಿಸಿದಾಗ ಸರಿಯಾಗಿ ಉತ್ತರ ನೀಡದೆ ಹರಿಹಾಯ್ದ ಉಪನ್ಯಾಸಕನನ್ನು ವಿದ್ಯಾರ್ಥಿಗಳು ಕೊಠಡಿಯಲ್ಲಿ ಥಳಿಸಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಶಿಸ್ತು ಕ್ರಮಕ್ಕೆ ಒತ್ತಾಯಿಸಿ ಉಪನ್ಯಾಸಕನನ್ನು ಚನ್ನಗಿರಿ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಶಿಕ್ಷಕನ ವರ್ತನೆಯಿಂದ ಮುಜುಗರಗೊಂಡ ವಿದ್ಯಾರ್ಥಿನಿ ಮೆಸ್ಸೇಜ್ ಗೆ ರಿಪ್ಲೇ ಮಾಡದೇ ಸುಮ್ಮನಿದ್ದಿದ್ದಕ್ಕೆ ಮೆಸ್ಸೇಜ್ ಮಾಡಲ್ಲ ಅಂದೆ ಅಲ್ವಾ ಬಿಡು ಎಂದು ಮಾನಸಿಕ ಹಿಂಸೆ ನೀಡಿದ್ದಾನೆ, ಅಲ್ಲದೇ ಡೇಟಿಂಗ್ ಅಂದ್ರೆ ಏನು ಕೇಳಿದ್ದಕ್ಕೆ ಮದುವೆ ಆಗ್ತಿಯಾ ಅಲ್ವಾ ನಿನಗೆ ಗೊತ್ತಾಗುತ್ತೆ ಎಂದು ಅಸಭ್ಯವಾಗಿ ಮೆಸ್ಸೇಜ್ ಮಾಡಿದ್ದಾನೆ.
ಸದ್ಯ ಶಿಕ್ಷಕನ ಈ ವರ್ತನೆಯಿಂದ ಬೇಸತ್ತ ವಿದ್ಯಾರ್ಥಿಗಳು ಅತಿಥಿ ಉಪನ್ಯಾಸಕನ ವಿರುದ್ದ ಪ್ರತಿಭಟನೆಗೆ ಇಳಿದಿದ್ದು, ಚನ್ನಗಿರಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿ ಕ್ರಮಕ್ಕೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ಉಪನ್ಯಾಸಕ ವಿದ್ಯಾರ್ಥಿನಿಯರಿಗೆ ಪ್ರೀತಿ ಮಾಡುವಂತೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ವಿದ್ಯಾರ್ಥಿಗಳು ಶುಕ್ರವಾರ ಕಾಲೇಜ್ ಪ್ರಾರಂಭವಾಗುತ್ತಿದ್ದಂತೆ ಆಗಮಿಸಿದ ಉಪನ್ಯಾಸಕನನ್ನು ಪ್ರಶ್ನಿಸಿದ್ದಾರೆ. ಬಳಿಕ ಆತನಿಂದ ಮೊಬೈಲ್ ಪಡೆದು ಸಂದೇಶಗಳನ್ನು ನೋಡಿದ್ದಾರೆ. ವಿದ್ಯಾರ್ಥಿಗಳು ಪ್ರಶ್ನಿಸಿದಾಗ ಸರಿಯಾಗಿ ಉತ್ತರ ನೀಡದೆ ಹರಿಹಾಯ್ದ ಉಪನ್ಯಾಸಕನನ್ನು ವಿದ್ಯಾರ್ಥಿಗಳು ಕೊಠಡಿಯಲ್ಲಿ ಥಳಿಸಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಶಿಸ್ತು ಕ್ರಮಕ್ಕೆ ಒತ್ತಾಯಿಸಿ ಉಪನ್ಯಾಸಕನನ್ನು ಚನ್ನಗಿರಿ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…
ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…