Home » ಲೈವ್ ನ್ಯೂಸ್ » ಅತಿಥಿ ಉಪನ್ಯಾಸಕ ಆಯ್ಕೆ ಪ್ರಕ್ರಿಯೆಯಲ್ಲಿ ಕೆಲವು ಮಹತ್ವದ ಬದಲಾವಣೆಗಳು.

ಅತಿಥಿ ಉಪನ್ಯಾಸಕ ಆಯ್ಕೆ ಪ್ರಕ್ರಿಯೆಯಲ್ಲಿ ಕೆಲವು ಮಹತ್ವದ ಬದಲಾವಣೆಗಳು.

Facebook
X
WhatsApp
Telegram

ಕರ್ನಾಟಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.ಕರ್ನಾಟಕ ಉನ್ನತ ಶಿಕ್ಷಣ ಇಲಾಖೆಯು ಅತಿಥಿ ಉಪನ್ಯಾಸಕರ ನೇಮಕಾತಿ ಮತ್ತು ಆಯ್ಕೆ ಪ್ರಕ್ರಿಯೆಯಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಮಾಡಿದೆ. ಹೆಚ್ಚುವರಿ ಕಾರ್ಯಭಾರದ ಅನುಗುಣವಾಗಿ ಮಾತ್ರ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಈಗಾಗಲೇ ಕೆಲಸ ಮಾಡುತ್ತಿರುವವರ ವಿವರ ತಿದ್ದುಪಡಿ ಹಾಗೂ ಹೊಸ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ಮೂಲಕ ಕಾಲೇಜು ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ.

ಆಯ್ಕೆ ಪ್ರಕ್ರಿಯೆಯ ಪ್ರಮುಖ ಬದಲಾವಣೆಗಳು:    

ಆನ್‌ಲೈನ್ ಕೌನ್ಸೆಲಿಂಗ್: ಅಭ್ಯರ್ಥಿಗಳಿಗೆ ಮೆರಿಟ್ ಆಧಾರದ ಮೇಲೆ ಆನ್‌ಲೈನ್ ಮೂಲಕವೇ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಹಿಂದಿನ ಸೇವೆ ಪರಿಗಣನೆ: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಾತ್ರ ಸಲ್ಲಿಸಿದ ಸೇವೆಯನ್ನು ಪರಿಗಣಿಸಲಾಗುತ್ತದೆ. ಖಾಸಗಿ ಕಾಲೇಜು ಅಥವಾ ವಿಶ್ವವಿದ್ಯಾಲಯಗಳಲ್ಲಿ ಮಾಡಿದ ಸೇವೆಯನ್ನು ಪರಿಗಣಿಸುವುದಿಲ್ಲ.

ಅರ್ಜಿ ತಿದ್ದುಪಡಿ: ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಮಾಹಿತಿಯನ್ನು ತಿದ್ದುಪಡಿ (Edit) ಮಾಡಲು ಅವಕಾಶ ನೀಡಲಾಗುತ್ತದೆ.

ಹೆಚ್ಚುವರಿ ಸೌಲಭ್ಯಗಳು: ಆಯ್ಕೆಯಾಗಿ ಕರ್ತವ್ಯಕ್ಕೆ ಹಾಜರಾದ ನಂತರ ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ವೇತನ ಸಹಿತ ಮಾತೃತ್ವ ರಜೆ (ಪ್ರಸೂತಿ ರಜೆ) ಸೌಲಭ್ಯವನ್ನು ನೀಡಲಾಗುತ್ತದೆ.

ಮಹತ್ವದ ಬದಲಾವಣೆಗಳು:

ಪ್ರತಿವರ್ಷ ಸ್ನಾತಕೋತ್ತರ ಪದವಿ, NET/KSET ಮತ್ತು ಸಂಶೋಧನೆ (Ph.D) ತಾವು ಯಾವ ವರ್ಷ ಮತ್ತು ಯಾವ ವಿಶ್ವವಿದ್ಯಾಲಯದಿಂದ ಪಡೆದಿದೆರಾ ಸಂಪೂರ್ಣ ಮಾಹಿತಿ ಅರ್ಜಿ ತುಂಬುವಾಗಾ ವಿವರಣೆ ನೀಡಬೇಕಾಗಿದೆ. 

ಪ್ರಮುಖ ದಿನಾಂಕಗಳು:


* ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಲು ಕೊನೆಯ ದಿನ: ಜುಲೈ 18, 2025


*ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಣೆ: ಜುಲೈ 19


*ಅರ್ಜಿ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ: ಜುಲೈ 19 ರಿಂದ 22 ರವರೆಗೆ

*ತಾತ್ಕಾಲಿಕ ವರ್ಕ್‌ಲೋಡ್ (Workload) ಪಟ್ಟಿ ಪ್ರಕಟಣೆ: ಜುಲೈ 25


*ಕೌನ್ಸಿಲಿಂಗ್ ಮೆರಿಟ್ ಪಟ್ಟಿ ಪ್ರಕಟಣೆ: ಜುಲೈ 26


*ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಣೆ: ಜುಲೈ 28
ಅರ್ಹತೆಗಳೇನಿರಬೇಕು?


*ಸ್ನಾತಕೋತ್ತರ ಪದವಿಯಲ್ಲಿ (PG) ಕನಿಷ್ಠ 55% ಅಂಕಗಳನ್ನು ಹೊಂದಿರಬೇಕು (ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ 50% ಅಂಕಗಳು ಕಡ್ಡಾಯ).


*NET/K-SET/SLET ಅಥವಾ PhD ವಿದ್ಯಾರ್ಹತೆಯನ್ನು ಕಡ್ಡಾಯವಾಗಿ ಹೊಂದಿರಬೇಕು.


*ಕಳೆದ ವರ್ಷ (2025-26) ಅರ್ಜಿ ಸಲ್ಲಿಸಿದವರೂ ಸಹ ಈ ಬಾರಿ ಹೊಸದಾಗಿ ಅರ್ಜಿ ಸಲ್ಲಿಸುವುದು ಕಡ್ಡಾಯ


ಆಯ್ಕೆ ಪ್ರಕ್ರಿಯೆ ಮತ್ತು ಮೆರಿಟ್ ಲೆಕ್ಕಾಚಾರ:


ಒಟ್ಟು 100 ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. PhD ಹೊಂದಿದ್ದರೆ 12 ಅಂಕ, NET/K-SET/SLET ಇದ್ದರೆ 9 ಅಂಕ ಹಾಗೂ M.Phil ಹೊಂದಿದ್ದರೆ 6 ಅಂಕಗಳನ್ನು ನೀಡಲಾಗುತ್ತದೆ. ಸರ್ಕಾರಿ ಕಾಲೇಜುಗಳಲ್ಲಿ ಕೆಲಸ ಮಾಡಿದ ಅನುಭವವಿದ್ದರೆ ಪ್ರತಿ ವರ್ಷಕ್ಕೆ 3 ಅಂಕಗಳಂತೆ ಗರಿಷ್ಠ 48 ಅಂಕಗಳನ್ನು ನೀಡಲಾಗುತ್ತದೆ.

(ಖಾಸಗಿ ಕಾಲೇಜು ಅಥವಾ ವಿಶ್ವವಿದ್ಯಾಲಯದ ಸೇವಾನುಭವವನ್ನು ಪರಿಗಣಿಸಲಾಗುವುದಿಲ್ಲ). ವಿಕಲಚೇತನ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ 10 ಅಂಕಗಳನ್ನು ನೀಡಲಾಗುತ್ತದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ  2026-27ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕ ಉದ್ದೆಗೆ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಅತಿಥಿ ಗ್ರಂಥಪಾಲಕರು ಹಾಗೂ ಅತಿಥಿ ದೈಹಿಕ ಶಿಕ್ಷಣ ನಿರ್ದೇಶಕರು ಒಳಗೊಂಡಂತೆ) ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ನಿಗದಿತ ವೇಳಾಪಟ್ಟಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು / ತಿದ್ದುಪಡಿ ಮಾಡಲು ಜುಲೈ 18 ಕೊನೆಯ ದಿನವಾಗಿದೆ. ಜುಲೈ 19 ರಂದು ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸುವ ದಿನ, ಜುಲೈ 19 ರಿಂದ 22 ರ ವರೆಗೆ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಿದ ನಂತರ ಅರ್ಜಿಯನ್ನು ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಜುಲೈ 25 ರಂದು ತಾತ್ಕಾಲಿಕ ಕಾರ್ಯಭಾರ ಪ್ರಕಟಿಸುವ ದಿನವಾಗಿದ್ದು, ಜುಲೈ 26 ರಂದು ಕೌನ್ಸಿಲಿಂಗ್ ಮೆರಿಟ್ ಪಟ್ಟಿ ಹಾಗೂ ಕಾರ್ಯಭಾರ ಪ್ರಕಟಿಸುವ ದಿನ ಮತ್ತು ಜುಲೈ 28 ರಂದು ಮೆರಿಟ್ ಪಟ್ಟಿಯನ್ವಯ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು.

ವಿದ್ಯಾರ್ಹತೆ ಮತ್ತು ಆಯ್ಕೆ ಮಾನದಂಡಗಳು

ಯುಜಿಸಿ 2018ರ ಮಾರ್ಗಸೂಚಿಗಳನ್ವಯ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಶೇ.55 ಅಂಕಗಳನ್ನು (ಎಸ್ಸಿ/ಎಸ್ ಟಿ/ಓಬಿಸಿ/ವಿಶೇಷ ಚೇತನರಿಗೆ ಶೇ.50) ಹೊಂದಿರಬೇಕು. ಇದರೊಂದಿಗೆ ಎನ್‌ಇಟಿ / ಎಸ್‌ಎಲ್‌ಇಟಿ / ಕೆ.ಸೆಟ್ / ಪಿಹೆಚ್.ಡಿ ವಿದ್ಯಾರ್ಹತೆ ಹೊಂದಿರುವುದು ಕಡ್ಡಾಯ.

ಮೆರಿಟ್ ಅಂಕಗಳ ಹಂಚಿಕೆ (ಒಟ್ಟು 100 ಅಂಕಗಳು):

ಸ್ನಾತಕೋತ್ತರ ಪದವಿ ಅಂಕಗಳು: ಅಭ್ಯರ್ಥಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಶೇ. 25 ಭಾಗವನ್ನು ಪರಿಗಣಿಸಲಾಗುವುದು (ಗರಿಷ್ಠ 25 ಅಂಕಗಳು).

ಹೆಚ್ಚುವರಿ ವಿದ್ಯಾರ್ಹತೆ: ಪಿಹೆಚ್.ಡಿ ಹೊಂದಿದ್ದಲ್ಲಿ 12 ಅಂಕಗಳು; ಎನ್‌ಇಟಿ/ಕೆ-ಸೆಟ್/ಎಸ್‌ಎಲ್‌ಇಟಿ ಹೊಂದಿದ್ದಲ್ಲಿ 09 ಅಂಕಗಳು; ಎಂ.ಫಿಲ್ ಹೊಂದಿದ್ದಲ್ಲಿ 06 ಅಂಕಗಳು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ ಗರಿಷ್ಠ 48 ಅಂಕಗಳನ್ನು (ಮಿತಿ 16 ವರ್ಷಗಳು) ನೀಡಲಾಗುವುದು. ಅರ್ಹ ವಿಕಲಚೇತನ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ 10 ಅಂಕಗಳನ್ನು ನೀಡಲಾಗುವುದು.

ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆಗಳು:

2025-26 ನೇ ಸಾಲಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆದರೆ, ತಮ್ಮ ಅರ್ಜಿಯಲ್ಲಿನ ಮಾಹಿತಿಯನ್ನು ತಿದ್ದುಪಡಿ ಮಾಡಲು ಅವಕಾಶವಿರುತ್ತದೆ.

ಕರ್ನಾಟಕ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸಲ್ಲಿಸಿದ ಸೇವೆಯನ್ನು ಮಾತ್ರ ಪರಿಗಣಿಸಲಾಗುವುದು. ಖಾಸಗಿ ಕಾಲೇಜು ಅಥವಾ ವಿಶ್ವವಿದ್ಯಾಲಯಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸುವುದಿಲ್ಲ.

ಸಾಮಾನ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು-

https://emis.karnataka.gov.in/application.aspx ಮತ್ತು ಸರ್ಕಾರಿ ಚಿತ್ರಕಲಾ / ಸಂಸ್ಕøತ ಕಾಲೇಜುಗಳು – https://emis.karnataka.gov.in/AppSFC.aspx ಲಿಂಕ್ ಗಳ ಮೂಲಕ ಅನ್ ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿಯಲ್ಲಿ ತಪ್ಪು ಮಾಹಿತಿ ನೀಡಿದ್ದಲ್ಲಿ ಅಭ್ಯರ್ಥಿತನವನ್ನು ತಿರಸ್ಕರಿಸಲಾಗುವುದು. ಒಂದು ವೇಳೆ ಹಾಜರುಪಡಿಸಿದ ದಾಖಲೆಗಳು ನಕಲಿ ಎಂದು ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.

ಆಯ್ಕೆಯಾಗಿ ಕರ್ತವ್ಯಕ್ಕೆ ಹಾಜರಾದ ನಂತರ ಪ್ರಸೂತಿ ರಜೆ ಮೇಲೆ ತೆರಳುವ ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ವೇತನ ಸಹಿತ ಮಾತೃತ್ವ ರಜೆಯ ಸೌಲಭ್ಯವನ್ನು ನೀಡಲಾಗುತ್ತದೆ.

ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ಅಧಿಕೃತ ವೆಬ್ಸೈಟ್ https://dce.karnataka.gov.in ಅನ್ನು ಪ್ರತಿ ನಿತ್ಯ ಗಮನಿಸುವಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology