ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ 2025-26ನೇ ಸಾಲಿಗೆ ವಿವಿಧ ಹುದ್ದೆಗಳ ಭರ್ತಿಗೆ ಏ.11 ರಂದು ವಾಕ್ ಇನ್ ಇಂಟರ್‌ವ್ಯೂ ಗೆ ಏಕಲವ್ಯ ಮಾದರಿ ವಸತಿ ಶಾಲೆ ಬಳ್ಳಾರಿ ಅರ್ಹ ಮತ್ತು ಅನುಭವವುಳ್ಳ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ.
ಅರ್ಹ 21 ರಿಂದ 60 ವರ್ಷ ವಯೋಮಿತಿಗೊಳಪಟ್ಟ, ನವೋದಯ ಅಥವಾ ಕೇಂದ್ರಿಯ ವಿದ್ಯಾಲಯ ಶಾಲೆಗಳಲ್ಲಿ ಉಪನ್ಯಾಸ ಮಾಡಿದ ಅನುಭವವುಳ್ಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ವಾಕ್ ಇನ್ ಇಂಟರ್‌ವ್ಯೂ ಅಂದು ಬೆಳಿಗ್ಗೆ 9 ಗಂಟೆಗೆ ಕೊಳಗಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಏರ್ಪಡಿಸಲಾಗಿದೆ. ಹುದ್ದೆಗಳು ತಾತ್ಕಾಲಿಕ ಆಗಿರುತ್ತವೆ.
ಸಂದರ್ಶನಕ್ಕೆ ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ಶೈಕ್ಷಣಿಕ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಸಂದರ್ಶನ ಸಮಯದಲ್ಲಿ ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ.
ಹುದ್ದೆಗಳು:
ಕನ್ನಡ ಶಿಕ್ಷಕ: ಹುದ್ದೆ 1, ಜೀವಶಾಸ್ತ್ರ ಶಿಕ್ಷಕ: ಹುದ್ದೆ 1, ಇಂಗ್ಲೀಷ್ ಭಾಷೆಯಲ್ಲಿ ತರಬೇತಿ ಪಡೆದ ಶಿಕ್ಷಕ-1, ಕನ್ನಡದಲ್ಲಿ ತರಬೇತಿ ಪಡೆದ ಪದವೀಧರ ಶಿಕ್ಷಕರು-2, ದೈಹಿಕ ಶಿಕ್ಷಕರು(ಪುರುಷ ಮತ್ತು ಮಹಿಳೆ)-01+01 ಮತ್ತು ಹಾಸ್ಟೆಲ್ ವಾರ್ಡನ್-01.
ವಿದ್ಯಾರ್ಹತೆ ಮತ್ತು ಹೆಚ್ಚಿನ ಮಾಹಿತಿಗಾಗಿ ನಗರದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-242453 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…
ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…