ಬೆಂಗಳೂರು.30.ಜನೆವರಿ.25:- ರಾಜ್ಯದಲ್ಲಿ ಕಾಂಗ್ರೆಸ್ಸ್ ಸರಕಾರ ಚುನಾವಣಾ ಸಮಯದಲ್ಲಿ ಸೇವಾ ಭದ್ರತೆ ಭರವಸೆ ನೀಡಿದರು.
ರಾಜ್ಯದಲ್ಲಿ ಖಾಲಿಯಿರುವ ಇರುವ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕರ ಹುದ್ದೆಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿ ಕಾರ್ಯ ಶಾಲೆಯ ನಡೆಸ್ತಿದ್ದಾರೆ.
ರಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಸೇವಾಭದ್ರತೆ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ಬುಧವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ನೇತೃತ್ವದಲ್ಲಿ ಧರಣಿ ನಡೆಸಲಾಯಿತು.
ಪ್ರತಿ ವರ್ಷ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಮೆರಿಟ್ ಪದ್ಧತಿ ಬಿಟ್ಟು ಮೊದಲು ಕಾರ್ಯನಿರ್ವಹಿಸಿದವರಿಗೆ ಆದ್ಯತೆ ನೀಡಬೇಕು. ಸರಕಾರಿ ಶಿಕ್ಷಕರಂತೆ ಬೇಸಿಗೆ ರಜೆಯನ್ನು ಸೇರಿ 12 ತಿಂಗಳು ವೇತನವನ್ನು ನೀಡುವುದರ ಜತೆಗೆ ಸೇವೆಯಲ್ಲಿ ಮುಂದುವರಿಸಿ, ನೇಮಕಾತಿಯಲ್ಲಿ ಪ್ರತಿ ವರ್ಷ ಶೇ.5ರಷ್ಟು ಕೃಪಾಂಕ ನೀಡಬೇಕು ಎಂದು ಧರಣಿನಿರತರು ಆಗ್ರಹಿಸಿದರು.
ಸುಪ್ರೀಂ ಕೋರ್ಟ್ ಆದೇಶದಂತೆ ವೇತನ ಹೆಚ್ಚಿಸಿ, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಬೇಕು. ಸರಕಾರಿ ಶಿಕ್ಷಕರಿಗೆ ಸಿಗುವ ಎಲ್ಲ ಸೌಲಭ್ಯಗಳನ್ನು ಅತಿಥಿ ಶಿಕ್ಷಕರಿಗೂ ನೀಡಬೇಕು. ಪ್ರತಿವರ್ಷ ಸೇವಾ ಪ್ರಮಾಣ ಪತ್ರ ನೀಡಬೇಕು.
ಅತಿಥಿ ಶಿಕ್ಷಕ ಪದವನ್ನು ತೆಗೆದುಹಾಕಿ, ಗೌರವ ಅಥವಾ ಅರೆಕಾಲಿಕ ಶಿಕ್ಷಕ ಎಂದು ಕರೆಯಬೇಕು ಎಂದು ಒತ್ತಾಯಿಸಿದರು.
ಖಾಯಂ ಶಿಕ್ಷಕರಿಗೆ ನೀಡುವ ಸ್ಥಾನಮಾನದ ಜತೆಗೆ ತರಬೇತಿಯನ್ನು ನೀಡಬೇಕು. ಶಿಕ್ಷಕರ ಹಾಜರಾತಿ ಪುಸ್ತಕದಲ್ಲಿ ಅತಿಥಿ ಶಿಕ್ಷಕರನ್ನು ಸೇರಿಸಿ, ಜೀವ ವಿಮೆಯನ್ನು ನೀಡಬೇಕು ಎಂದು ಆಗ್ರಹಿಸಿದರು.
ಧರಣಿಯಲ್ಲಿ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ಹನುಮಂತ ಎಚ್.ಎಸ್., ಗೌರವಾಧ್ಯಕ್ಷ ಅನಂತನಾಯ್ಕ.ಎನ್, ಉಪಾಧ್ಯಕ್ಷೆ ಲೋಲಾಕ್ಷಿ, ಪ್ರದಾನ ಕಾರ್ಯದರ್ಶಿ ಬಸವರಾಜ ಕರಡಿಗುಡ್ಡ, ಖಜಾಂಚಿ ಸೌಮ್ಯ ಎಚ್.ಎಸ್ ಮತ್ತಿತರರು ಹಾಜರಿದ್ದರು.
ರಾಜ್ಯದಲ್ಲಿ ಅತಿಥಿ ಶಿಕ್ಷಕರನ್ನು ಸೇವಾ ಭದ್ರತೆ ಒದಗಿಸುವ ಭರವಸೆ ರಾಜ್ಯ ಸರಕಾರ ನೀಡಿತು.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…