ಬೆಂಗಳೂರು.23.ಮೇ.25:- ರಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಶಿಕ್ಷಕರು ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೂನ್ 13 ರಿಂದ ಶಾಲೆ ತೊರೆದು ಪ್ರತಿಭಟಿನೇ ಮಾಡಲಾಗುವದು ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವ ಅಧ್ಯಕ್ಷ ಎನ್.ಅನಂತನಾಯ್ಕ್, ಅಧ್ಯಕ್ಷ ಹನುಮಂತ ಎಚ್.ಎಸ್., ‘ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಮೆರಿಟ್ ಪದ್ಧತಿಯನ್ನು ಕೈಬಿಟ್ಟು, ಸೇವಾ ಹಿರಿತನವನ್ನು ಪರಿಗಣಿಸಬೇಕು’ ಎಂದು ಒತ್ತಾಯಿಸಿದರು.
‘ಈಗ ವರ್ಷದಲ್ಲಿ ಕೇವಲ 10 ತಿಂಗಳು ಮಾತ್ರ ಕೆಲಸವಿದ್ದು, ತಿಂಗಳಿಗೆ ₹12 ಸಾವಿರ ವೇತನ ನೀಡಲಾಗುತ್ತದೆ. ಇದರಿಂದ, ಜೀವನ ನಿರ್ವಹಣೆ ಕಷ್ಟವಾಗಿದೆ. ಆದ್ದರಿಂದ ಗೌರವಧನದ ಮೊತ್ತವನ್ನು ತಿಂಗಳಿಗೆ ₹25 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ಒತ್ತಾಯಿಸಿದರು.
‘ನೇಮಕಾತಿ ಸಂದರ್ಭದಲ್ಲಿ 5 ಕೃಪಾಂಕಗಳನ್ನು ನೀಡಬೇಕು. ಸುಪ್ರೀಂ ಕೋರ್ಟ್‌ನ ಆದೇಶದಂತೆ ಈ ವರ್ಷದಿಂದ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಬೇಕು. ಅತಿಥಿ ಶಿಕ್ಷಕರ ಸೇವೆಯನ್ನು ಕಾಯಂಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…