ಬೀದರ.11.ಜೂನ್.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಶಾಲೆಗಳಲ್ಲಿ ಅತಿಥಿ ಶಿಕ್ಷಕರು/ಉಪನ್ಯಾಸಕರುಗಳ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಫಲಿತಾಂಶವನ್ನು ಜಿಲ್ಲಾ ಕಛೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಆಭ್ಯರ್ಥಿಗಳನ್ನು 1:2 ರಂತೆ ಮಾದರಿ ಪಾಠದ/ಡೆಮೋ ಮೂಲಕ ಆಯ್ಕೆ ಮಾಡಲಾಗುತ್ತದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಾಠದ ಡೆಮೋ ನಡೆಯುವ ವಿಷಯ, ದಿನಾಂಕ ಹಾಗೂ ಸ್ಥಳದ ವಿವರ: ಜೂನ್.11 ರಂದು ಬೆಳಿಗ್ಗೆ 10:30 ರಿಂದ 4:30 ರವರೆಗೆ ಅತಿಥಿ ಉಪನ್ಯಾಸಕರಿಗೆ (ಕನ್ನಡ, ಉರ್ದು, ಇಂಗ್ಲೀಷ್, ಭೌತಶಾಸ್ತç, ಗಣಿತಶಾಸ್ತç, ಇತಿಹಾಸಶಾಸ್ತç, ಲೆಕ್ಕಶಾಸ್ತç, ವ್ಯವಹಾರ ಅಧ್ಯಯನ, ಅರ್ಥಶಾಸ್ತç) ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಬಾಲಕಿಯರ ವಸತಿ ಕಾಲೇಜು ಮೀರಾಗಂಜ್ ಬೀದರದಲ್ಲಿ ನಡೆಯಲಿದೆ.
ಜೂನ್. 12 ರಂದು ಬೆಳಿಗ್ಗೆ 10:30 ರಿಂದ 4:30 ರವರೆಗೆ ಅತಿಥಿ ಶಿಕ್ಷಕರಿಗೆ (ಕನ್ನಡ, ಇಂಗ್ಲೀಷ್, ಉರ್ದು, ಹಿಂದಿ) ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆ ಕಪಲಾಪೂರ (ಎ) ತಾ:ಜಿ:ಬೀದರದಲ್ಲಿ ಹಾಗೂ ಜೂನ್.13 ರಂದು ಬೆಳಿಗ್ಗೆ 10:30 ರಿಂದ 4:30 ರವರೆಗೆ (ಸಮಾಜ ವಿಜ್ಞಾನ, ಸಾಮಾನ್ಯ ವಿಜ್ಞಾನ, ಗಣಿತ, ದೈಹಿಕ ಶಿಕ್ಷಣ) ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಕಪಲಾಪುರ (ಎ) ತಾ:ಜಿ:ಬೀದರದಲ್ಲಿ ನಡೆಯಲಿವೆ.
ಕಾರಣ ಆಯ್ಕೆಯಾದ ಆಭ್ಯರ್ಥಿಗಳು ವಿಷಯವಾರು ಪಾಠದ ಡೆಮೋ ಗೆ ತಪ್ಪದೇ ಹಾಜರಾಗಬೇಕು. ತಪ್ಪಿದಲ್ಲಿ ಗೈರು ಹಾಜರೆಂದು ಪರಿಗಣಿಸಿ ಆಯ್ಕೆ ಪ್ರಕ್ರಿಯೆಯಿಂದ ಕೈಬಿಡಲಾಗುವುದಾಗಿ ಅವರು ತಿಳಿಸಿದ್ದಾರೆ.
ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…
ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…