|

ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

09.ಮೇ.2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ (ರಾಜ್ಯ ಪಠ್ಯಕ್ರಮ) ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ಮತ್ತುಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ನೇಮಕ ಮಾಡಿಕೊಳ್ಳಲು 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರು, ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ.19 ಅರ್ಜಿ ಸಲ್ಲಿಸಲು ಕೊನೆಯ ದಿನ.

ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇಮಕ ಮಾಡಲು ಎಂ.ಎ ಬಿ.ಇಡಿ, ಎಂ.ಎಸ್ಸಿ ಬಿ.ಇಡಿ, ಎಂ.ಕಾಂ ಬಿ.ಇಡಿ ಹಾಗೂ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇಮಕ ಮಾಡಲು ಬಿ.ಎ ಬಿ.ಇಡಿ, ಬಿ.ಎಸ್ಸಿ ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು,

ಅರ್ಜಿಗಳು ವೆಬ್‍ಸೈಟ್ https://dom.karnataka.gov.in/  ನಲ್ಲಿ ದೊರೆಯುತ್ತವೆ.

ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸ್ಟೇಡಿಯಂ ರಸ್ತೆ, ಅಂಜನೇಯ ದೇವಸ್ಥಾನ ಎದುರು. ಶ್ರೀರಾಮ ಕಾಂಪ್ಲೆಕ್ಸ್, ಮೊದಲನೇ ಮಹಡಿ, ಚಿತ್ರದುರ್ಗ ಇಲ್ಲಿಗೆ ದಿನಾಂಕ 19-05-2025ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ, ಸಂಬಂಧಪಟ್ಟ ಶಾಲೆ, ಕಾಲೇಜು ಹಾಗೂ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *