|

ಅತಿಥಿ ಶಿಕ್ಷಕರು, ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

ಜಿಲ್ಲೆಯ ವ್ಯಾಪ್ತಿಯಡಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳು

1) ಪ.ಜಾತಿ, ಪ.ವರ್ಗ, 2) ಹಿಂದುಳಿದ ವರ್ಗಗಳ 22 ವಸತಿ ಶಾಲೆಗಳಲ್ಲಿ ಪ್ರಸಕ್ತ ಸಾಲಿಗೆ 6 ರಿಂದ 10ನೇ ತರಗತಿ(ವಸತಿ ಶಾಲೆ) ಹಾಗೂ 3) ಪದವಿ ಪೂರ್ವ ತರಗತಿಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡಲು ಗೌರವಧನದ ಆಧಾರದ ಮೇಲೆ ಅತಿಥಿ ಶಿಕ್ಷಕರು, ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ ಮತ್ತು ಅರ್ಹತೆ:

ಎಂ.ಎ, ಎಂ.ಎಸ್ಸಿ ವಿದ್ಯಾರ್ಹತೆ ಹೊಂದಿರಬೇಕು.


1) ಕನ್ನಡ, ಇಂಗ್ಲೀಷ್, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಉಪನ್ಯಾಸಕರ ತಲಾ 1 ಹುದ್ದೆಗಳಿಗೆ,

ಅರ್ಹತೆ:

ಶಿಕ್ಷಕರ ಹುದೆಗಳಾದ ಕನ್ನಡ, ಆಂಗ್ಲ, ಹಿಂದಿ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಶಿಕ್ಷಕರು ಸಂಬಂಧಿಸಿದ ವಿಷಯದಲ್ಲಿ ಪದವಿ ಮತ್ತು ಬಿ.ಇಡಿ(ಟಿ.ಇ.ಟಿ ಉತ್ತೀರ್ಣರಾದವರಿಗೆ ಮೊದಲ ಆದ್ಯತೆ), ಗಣಕ ವಿಜ್ಞಾನ ಶಿಕ್ಷಕರು ಪದವಿ ಬಿ.ಎಸ್ಸಿ, ಬಿಸಿಎ, ಬಿ.ಇ, ದೈಹಿಕ ಶಿಕ್ಷಣ ಶಿಕ್ಷಕರು ಬಿ.ಪಿ.ಇಡಿ ವಿದ್ಯಾರ್ಹತೆ ಹೊಂದಿರಬೇಕು.

ಅರ್ಹರು ಅರ್ಜಿ ಹಾಗೂ ದೃಢೀಕರಿಸಿದ ದಾಖಲೆಗಳ ಪ್ರತಿಗಳನ್ನು ಜೂನ್ 18 ರ ಒಳಗಾಗಿ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಜಂಟಿ ನಿರ್ದೇಶಕ ನಾಗರಾಜ.ಕೆ ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *