ಬೆಂಗಳೂರು.27.ಮೇ.25:- ಸಮಾಜಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿಚನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ್, ಇಂದಿರಾಗಾಂಧಿ, ಅಟಲ ಬಿಹಾರಿ ವಾಜಪೇಯಿ, ಸಂಗೊಳ್ಳಿ ರಾಯಣ್ಣ ವಸತಿ ಶಾಲೆ/ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರ/ಉಪನ್ಯಾಸಕರ ಹುದ್ದೆಗಳಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೊನೆಯ ದಿನಾಂಕ: 30ಜೂನ್ 2025:
ಆಸಕ್ತ ಅಭ್ಯರ್ಥಿಗಳು ನಿಗದಿತ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆಗಳೊಂದಿಗೆ ಸ್ವ-ವಿವರವನ್ನು (ಬಯೋಡೇಟಾ) ಜೂನ್ 30, 2025 ರ ವರೆಗೆ ಸಮಾಜಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿ, ನೆಹರು ನಗರ ಬೆಳಗಾವಿ (ರಾಮದೇವ ಹೋಟೇಲ್ ಹತ್ತಿರ ) ಇಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಜಿಲ್ಲೆಯ ವಸತಿ ಶಾಲೆಗಳಲ್ಲಿ ಕನ್ನಡ, ಆಂಗ್ಲ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಕಂಪ್ಯೂಟರ್, ದೈಹಿಕ ಶಿಕ್ಷಣ
ಒಟ್ಟು ಹೂದೆಗಳು 107 :
ವಿಷಯವಾರು ಅತಿಥಿ ಶಿಕ್ಷಕರ ಹುದ್ದೆಗೆ ಹಾಗೂ ಕಾಲೇಜುಗಳಲ್ಲಿ ಕನ್ನಡ ಭಾಷೆ, ಆಂಗ್ಲ ಭಾಷೆ, ಭೌತ ಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಶಾಸ್ತ್ರ, ಜೀವ ಶಾಸ್ತ್ರ, ಗಣಕ ಶಾಸ್ತ್ರ,
ಅತಿಥಿ ಉಪನ್ಯಾಸಕರ ಒಟ್ಟು ಹುದ್ದೆಗಳು 17 :
ಅತಿಥಿ ಉಪನ್ಯಾಸಕರ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ: 8095303828, 9731168497 ಗೆ ಸಂಪರ್ಕಿಸಬಹುದು.
ಬೆಳಗಾವಿ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…
ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…