|

ಅತಿಥಿ ಶಿಕ್ಷಕ ಉಪನ್ಯಾಸಕರುಗಳ ನೇಮಕಾತಿಗಾಗಿ
ಸಾಮಾನ್ಯ ಪ್ರವೇಶ ಪರೀಕ್ಷೆ ಜೂನ್.1ಕ್ಕೆ

ಬೀದರ.29.ಮೇ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಕಾಲೇಜು ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ-ಕಾಲೇಜು ಹಾಗೂ ಮೌಲನಾ ಆಜಾದ ಮಾದರಿ ಶಾಲೆಗಳಲ್ಲಿ 2025-26ನೇ ಸಾಲಿನಲ್ಲಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕ-ಉಪನ್ಯಾಸಕರುಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ದಿನಾಂಕ:01-06-2025ರಂದು ಬೆಳಗ್ಗೆ 11:00 ಗಂಟೆಯಿಂದ ಮದ್ಯಾಹ್ನ 1:00 ಗಂಟೆಯವರೆಗೆ ಸರಕಾರಿ ಪದವಿ ಪೂರ್ವ ಕನ್ಯಾ ಕಾಲೇಜು ಚಿತ್ತಾಖಾನಾ ಬೀದರ, ಸಿದ್ದಾರ್ಥ ಸಂಯುಕ್ತ ಪದವಿ ಪೂರ್ವ ಶಿಕ್ಷಣ ಸಂಸ್ಥೆ ಜನವಾಡ ರಸ್ತೆ ಬೀದರ ಹಾಗೂ ವಿದ್ಯಾರಣ್ಯ ಪ್ರೌಢಶಾಲೆ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ ಜನವಾಡ ರಸ್ತೆ ಶಾಲೆಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದೆ ಎಂದು ಬೀದರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಜಿಲ್ಲಾ ಕಛೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಬೀದರ ಇಲ್ಲಿ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *