ಅತಿಥಿ ಶಿಕ್ಷಕ, ಉಪನ್ಯಾಸಕರ ನೇಮಕಾತಿ: ಹೊಸ ನಿಯಮಾವಳಿ.

ಬೆಂಗಳೂರು.08.ಮೇ.25: ಅತಿಥಿ ಉಪನ್ಯಾಸಕರು/ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಜ್ಞಾಪನಾ ಪತ್ರವೊಂದನ್ನು ಹೊರಡಿಸಿದೆ. ನಿರ್ದೇಶಕರ ಕಛೇರಿ ಅಲ್ಪ ಸಂಖ್ಯಾತರ ನಿರ್ದೇಶನಾಲಯ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು ನೇಮಕ ಮಾಡಿಕೊಳ್ಳುವ ಬಗ್ಗೆ ಜ್ಞಾಪನಾ ಪತ್ರವೊಂದನ್ನು ಹೊರಡಿಸಿದೆ.

ನೇಮಕಾತಿ ಸಂದರ್ಭದಲ್ಲಿ ಯಾವ-ಯಾವ ನಿಯಮಗಳನ್ನು ಪಾಲನೆ ಮಾಡಬೇಕು? ಎಂದು ಮಾಹಿತಿ ನೀಡಲಾಗಿದೆ.

ಈ ಜ್ಞಾಪನಾ ಪತ್ರವು 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ಅತಿಥಿ ಉಪನ್ಯಾಸಕರು/ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ 2005-2006ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ/ ಬಡ್ತಿ/ ವರ್ಗಾವಣೆ ಮೂಲಕ ಹುದ್ದೆ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೇಮಕಾತಿ ಅಗತ್ಯವಿದೆ ಎಂದು ಹೇಳಿದೆ.

ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಮತ್ತು ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರು ಹಾಗೂ ಡಾ ಎ. ಪಿ. ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕ ಎದುರಾಗಿ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು/ ಶಿಕ್ಷಕರನ್ನು ಮಾಡಿಕೊಳ್ಳುವುದು ಅವಶ್ಯಕವಿರುತ್ತದೆ.

ಸದರಿ ಅಂಶಗಳ ಹಿನ್ನೆಲೆಯಲ್ಲಿ ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರನ್ನು ಹುದ್ದೆಗಳಿಗೆ ಎದುರಾಗಿ ಕೆಳಕಂಡ ಮಾರ್ಗಸೂಚಿಗಳಂತೆ ಅತಿಥಿ ಶಿಕ್ಷಕರನ್ನು ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರ ಹಂತದಲ್ಲಿ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅನುಮತಿ ನೀಡಿದೆ ಎಂದು ತಿಳಿಸಿದೆ.

ಮಾರ್ಗಸೂಚಿಗಳು

* ಅರ್ಜಿಗಳನ್ನು ಸ್ವೀಕಾರ ಮಾಡುವ ದಿನಾಂಕ ಆರಂಭ 8/5/2025. ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ 19/5/2025. ಅರ್ಜಿಗಳನ್ನು ಸಂಬಂಧಪಟ್ಟ ಜಿಲ್ಲಾ ಕಛೇರಿ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಛೇರಿ, ತಾಲ್ಲೂಕು ಕಛೇರಿ ಹಾಗೂ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬೇಕಿದೆ.

* ಜಿಲ್ಲಾ ಅಧಿಕಾರಿಗಳು ಕೂಡಲೇ ಜಿಲ್ಲೆಯಲ್ಲಿ ವೇಳಾಪಟ್ಟಿಯಂತೆ ಖಾಲಿ ಇರುವ ಅತಿಥಿ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳ ಮಾಹಿತಿ ಮತ್ತು ವಿದ್ಯಾರ್ಹತೆಗಳ ವಿವರದೊಂದಿಗೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳುವುದು. ಖಾಲಿ ಇರುವ ಮಂಜೂರಾದ ಹುದ್ದೆಗಳಿಗೆ ಮಾತ್ರ ಅತಿಥಿ ಉಪನ್ಯಾಸಕರು/ ಶಿಕ್ಷಕರನ್ನು ನೇಮಕಾತಿ ಮಾಡಲು ಕ್ರಮ ವಹಿಸುವುದು.

* ಅತಿಥಿ ಉಪನ್ಯಾಸಕರು ಶಿಕ್ಷಕರನ್ನು ಪ್ರಮುಖವಾಗಿ ಆದ್ಯತೆಯ ಮೇರೆಗೆ ಗ್ರಾಮೀಣ ಪ್ರದೇಶಗಳಲ್ಲಿನ ಖಾಲಿ ಹುದ್ದೆಗಳಿಗೆ ಹಾಗೂ ಶಿಕ್ಷಕರ ರಹಿತ ಶಾಲೆಗಳಿಗೆ/ ಹೆಚ್ಚು, ವಿದ್ಯಾರ್ಥಿಗಳಿರುವ ಶಾಲೆಗೆ ಮೊದಲ ಆದ್ಯತೆ ನೀಡುವುದು.

* ರಾಜ್ಯದಲ್ಲಿರುವ ಡಾ. ಎ. ಪಿ. ಜೆ ಅಬ್ದುಲ್‌ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಶೇಕಡ 100ರಷ್ಟು ಅತಿಥಿ ಉಪನ್ಯಾಸಕರು/ ಶಿಕ್ಷಕರನ್ನು ಆದ್ಯತೆ ಮೇರೆಗೆ ನೇಮಕಾತಿ ಮಾಡುವುದು.

* ನೇಮಕಗೊಂಡ ಅತಿಥಿ ಉಪನ್ಯಾಸಕರು ಕನಿಷ್ಟ ರೂ. 100 ಛಾಪಾ ಕಾಗದದಲ್ಲಿ ಸರ್ಕಾರದ ಅದೇಶಾನುಸಾರ ಕರ್ತವ್ಯ ನಿರ್ವಹಿಸುವ ಬಗ್ಗೆ ಮುಚ್ಚಳಿಕೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸುವುದು.

* ಅತಿಥಿ ಉಪನ್ಯಾಸಕರು/ ಶಿಕ್ಷಕರ ಹಾಜರಾತಿ ವಹಿಯನ್ನು ಪ್ರತ್ಯೇಕವಾಗಿ ನಿರ್ವಹಿಸುವುದು.

* ಅತಿಥಿ ಉಪನ್ಯಾಸಕ/ ಶಿಕ್ಷಕರನ್ನು ನೇಮಕ ಮಾಡಿಕೊಂಡ ಹುದ್ದೆಗೆ ವರ್ಗಾವಣೆ/ ನೇಮಕಾತಿ ಮುಖಾಂತರ ಖಾಯಂ ಉಪನ್ಯಾಸಕರು/ಶಿಕ್ಷಕರ ಸ್ಥಳ ನಿಯುಕ್ತಿಗೊಂಡಲ್ಲಿ ಸದರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಪನ್ಯಾಸಕರು/ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸುವುದು.

* ಅತಿಥಿ ಉಪನ್ಯಾಸಕರು/ ಶಿಕ್ಷಕರನ್ನು ಪ್ರಸ್ತುತ ಸರ್ಕಾರದ ಆದೇಶದಂತೆ ನಿಗದಿಪಡಿಸಿರುವ ಗೌರವ ಸಂಭಾವನೆಯನ್ನು ಪಾವತಿಸುವುದು.

* ಇಲಾಖೆಯ ಪ್ರಸ್ತುತ ಚಾಲ್ತಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳು ಮತ್ತು ಕಾರ್ಯಕಾರಿ, ಆದೇಶಗಳಲ್ಲಿ ವಿಷಯವಾರು ನಮೂದಿಸಿರುವ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು.

prajaprabhat

Recent Posts

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

6 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

11 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

16 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

22 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

22 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

22 hours ago