ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮ: ಸಮನ್ವಯ ಸಮಿತಿ ಸಭೆ

ಅಧಿಕಾರಿಗಳು ಸಮನ್ವಯತೆ ಸಾಧಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ: ನಲಿನ್ ಅತುಲ್

ಕೊಪ್ಪಳ.18.ಜೂನ್.25:- ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಮನ್ವಯತೆ ಸಾಧಿಸಿ 5 ವರ್ಷದೊಳಗಿನ ಮಕ್ಕಳಲ್ಲಿ ಕಂಡು ಬರುವ ಅತಿಸಾರ ಭೇದಿ ನಿಯಂತ್ರಣ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲು ಸಹಕರಿಸುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸೂಚಿಸಿದರು.


ಜೂನ್ 13 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮದ ಕುರಿತ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಆರೋಗ್ಯ ಇಲಾಖೆಯ ಎಲ್ಲಾ ತಾಲೂಕಾ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಆರ್‌ಎಸ್ ಕಾರ್ನರ್ ಪ್ರಾರಂಭಿಸಿ ಚಿಕಿತ್ಸೆ ನೀಡಬೇಕು ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ 5 ವರ್ಷದೊಳಗಿನ ಮಕ್ಕಳಿರುವ ಮನೆಗಳಿಗೆ ಒಆರ್‌ಎಸ್ ಪ್ಯಾಕೆಟ್ ಮತ್ತು ಝಿಂಕ್ ಮಾತ್ರೆಯನ್ನು ವಿತರಣೆ ಮಾಡಬೇಕು. ಅಂಗನವಾಡಿ ಕೇಂದ್ರ ಮತ್ತು ಶಾಲೆಗಳಲ್ಲಿ ಮಕ್ಕಳಿಗೆ ಅತಿಸಾರ ಭೇದಿ ಉಂಟಾಗದAತೆ ಕೈತೊಳೆಯುವ ವಿಧಾನಗಳ ಬಗ್ಗೆ ಹಾಗೂ ವೈಯಕ್ತಿಕ ಸ್ವಚ್ಛತೆ ಬಗ್ಗೆ ಆರೋಗ್ಯ ಶಿಕ್ಷಣ ನೀಡಬೇಕು. ಅತಿಸಾರ ಭೇದಿ ನಿಯಂತ್ರಿಸಲು ವಿವಿಧ ಇಲಾಖೆಗಳಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕರಿಗೆ ಇದರ ಬಗ್ಗೆ ಮಾಹಿತಿ ನೀಡುವಂತೆ ಹಾಗೂ ಮಕ್ಕಳಿಗೆ ಕೈತೊಳೆಯುವ ವಿಧಾನಗಳ ಬಗ್ಗೆ ಅರಿವು ಮೂಡಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.


ಅದೇ ರೀತಿ ಶಿಕ್ಷಣ ಇಲಾಖೆಯಿಂದ ಎಲ್ಲಾ ಶಾಲೆಗಳಲ್ಲಿ ಪ್ರಾರ್ಥನಾ ಸಮಯದಲ್ಲಿ ಕೈತೊಳೆಯುವ ವಿಧಾನಗಳ ಬಗ್ಗೆ ಘೋಷಣೆ ಕೂಗುವಂತೆ ಕ್ರಮ ಕೈಗೊಳ್ಳಬೇಕು. ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮದ ಎಲ್ಲಾ ಕುಡಿಯುವ ನೀರಿನ ಟ್ಯಾಂಕ್‌ಗಳನ್ನು ಸ್ವಚ್ಛವಾಗಿ ತೊಳೆದು ಶುದ್ಧೀಕರಣ ಮಾಡಿಸಬೇಕು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಈ ಕಾರ್ಯಕ್ರಮದ ಬಗ್ಗೆ ಹೆಚ್ಚು ಹೆಚ್ಚು ಪ್ರಚಾರ ಮಾಡಿಸಬೇಕು ಎಂದು ತಿಳಿಸಿದ ಅವರು, ಈ ರೀತಿಯಾಗಿ ವಿವಿಧ ಇಲಾಖೆಗಳು ಸಮನ್ವಯ ಸಾಧಿಸಿ 0-5 ವರ್ಷದ ಮಕ್ಕಳಿಗೆ ಅತಿಸಾರ ಭೇದಿ ಉಂಟಾಗದAತೆ ಕ್ರಮವಹಿಸಲು ಸೂಚಿಸಿದರು.


ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೇಯ ಅವರು ಮಾತನಾಡಿ, ಎಲ್ಲ ಇಲಾಖೆಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೂಚಿಸಿದರು.


ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ|| ಪ್ರಕಾಶ ವಿ. ಇವರು ಮಾತನಾಡಿ, ಅತಿಸಾರ ಭೇದಿಯಿಂದ 5 ವರ್ಷದೊಳಗಿನ ಮಕ್ಕಳ ಮರಣವನ್ನು ನಿಯಂತ್ರಿಸಲು ಪ್ರತಿ ವರ್ಷ ಈ ಕಾರ್ಯಕ್ರಮವನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಚರಿಸಲಾಗುತ್ತದೆ ಎಂದು ಸಭೆಗೆ ವಿವರಿಸಿದರು.


ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ|| ಲಿಂಗರಾಜು ಟಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ|| ರವೀಂದ್ರನಾಥ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ|| ನಂದಕುಮಾರ, ಜಿಲ್ಲಾ ಕ್ಷಯರೋಗ ನಿರ್ಮೂಲನ ಅಧಿಕಾರಿಗಳಾದ ಡಾ|| ಶಶಿಧರ್, ಜಿಲ್ಲಾ ಕುಷ್ಠರೋಗ ನಿರ್ಮೂಲನ ಅಧಿಕಾರಿಗಳಾದ ಡಾ|| ಪ್ರಾಕಾಶ ಹೆಚ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳಾದ ಡಾ|| ಕುಮಾರಸ್ವಾಮಿ, ತಾಲೂಕಾ ಆರೋಗ್ಯಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕೊಪ್ಪಳ ವೈದ್ಯಕೀಯ ಮಹಾ ವಿದ್ಯಾಲಯದ ಹಿರಿಯ ತಜ್ಞ ವೈದ್ಯರು, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ತಾಲೂಕ ಮಟ್ಟದ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಗಳು ಹಾಜರಿದ್ದರು.

prajaprabhat

Recent Posts

ಸಕ್ರಿಯ ರಾಜಕಾರಣಕ್ಕೆ ಬಂದು ನನ್ನ ವಿರುದ್ಧ ಆರೋಪ ಮಾಡಿ : ಡಾ.ಎಂ.ಸಿ.ಸುಧಾಕರ್ ಕಿಡಿ

ಸ್ಟೀಸ್ ಗೋಪಾಲಗೌಡರು ಈ ತಲೆಮಾರಿನವರಲ್ಲ. ಹಿಂದಿನ ತಲೆ ಮಾರಿನವರು. ಅವರು ಹಿರಿಯರಿದ್ದಾರೆ.ಸುಪ್ರಿಂಕೋರ್ಟಿನ ವಿಶ್ರಾಂತ ನ್ಯಾಯಾಧೀಶರಿದ್ದಾರೆ.ಬಹಳ ಗೌರದಿಂದಲೇ ಹೇಳುತ್ತಿದ್ದೇನೆ.ರಾಜಕಾರಣ ಮಾಡುವಂತಿದ್ದರೆ ನೇರವಾಗಿ…

29 minutes ago

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ಸಂದರ್ಶನ

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆ. 16 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು, ವಿವಿಧ ವಿಭಾಗಗಳಲ್ಲಿ…

46 minutes ago

ನಾಳೆಯಿಂದ ಮುಂಗಾರು ಅಧಿವೇಶನ ಆರಂಭ; ಆಡಳಿತ-ಪ್ರತಿಪಕ್ಷಗಳ ನಡುವೆ ವಾಗ್ಯುದ್ದಕ್ಕೆ ವೇದಿಕೆ ಸಜ್ಜು

ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…

8 hours ago

KSRTC ಬಸ್, ಕಾರು ಡಿಕ್ಕಿ 2 ಮೃತೀವ್

ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾ‌ರ್ ನಲ್ಲಿದ್ದ ತಂದೆ ಮಗ…

8 hours ago

ಬೆಂಗಳೂರಿನ 44 ಎಕರೆಯಲ್ಲಿ ಕೆಂಪೇಗೌಡ ಒಕ್ಕಲಿಗ ವಿ.ವಿ: ಎಚ್‌.ಎನ್‌.ಅಶೋಕ್

ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…

10 hours ago

ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಶಿಕ್ಷಣ ಇಲಾಖೆಯಿಂದ ಬಿಡುಗಡೆ.

ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…

10 hours ago