ಅಧಿಕಾರಿಗಳು ರೈತರ ಹಾಗೂ ಗ್ರಾಹಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲಿ.,ಇಂಧನ ಸಚಿವ ಕೆ.ಜೆ.ಜಾರ್ಜ್.!


ಬೀದರ.23.ಜನವರಿ.25:-ರೈತರ ಟ್ರಾನ್ಸಫಾರ್ಮರ್ ರಿಪೇರಿ, ಸಾಗಾಟ, ವಿದ್ಯುತ್ ತಂತಿ/ಕಂಬ ದುರಸ್ತಿ ಸಂಪರ್ಕ ಸೇರಿದಂತೆ ವಿವಿಧ ವಿದ್ಯುತ್ ಸಮಸ್ಯೆಗಳಿಗೆ ಅಧಿಕಾರಿಗಳು ತತಕ್ಷಣ ಸ್ಪಂಧಿಸಿ ಸಮಸ್ಯೆ ಪರಿಹರಿಸಬೇಕೆಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಜೇಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.


ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಜರುಗಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಳೆದ ವರ್ಷ ಬರಗಾಲವಿದ್ದರೂ ಬೇಸಿಗೆಯಲ್ಲಿ ಸಹ ಯಾವುದೇ ರೀತಿಯ ತೊಂದರೆಯಾಗದಂತೆ ಸಮರ್ಪಕವಾಗಿ ವಿದ್ಯುತ್ ಪೂರೈಸಲಾಗಿದ್ದು, ಈ ಬಾರಿ ಸಹ ಗ್ರಾಹಕರಿಗೆ ವಿದ್ಯುತ್ ಪೂರೈಸಲು ಇಲಾಖೆಯು ಸನ್ನದ್ಧವಾಗಿದೆ.

ವಿದ್ಯುತ್ ಸಂಬಂಧಿಸಿದಂತೆ ಕೆಲ ತಾಂತ್ರಿಕ ದೋಷಗಳು ಆದಾಗ ಕಂಡುಬರುತ್ತಿರುವುದರಿಂದ ಕೆಲವೊಮ್ಮೆ ಸಮಸ್ಯೆಗಳ ನಿವಾರಣೆಗೆ ಸಮಯಬೇಕಾಗುತ್ತದೆ.

ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳನ್ನು ಭೇಟಿಯಾಗಿ ಸಮಸ್ಯೆಗಳನ್ನು ಚರ್ಚಿಸಿ ಪರಿಹರಿಸಬೇಕೆಂದು ತಿಳಿಸಿದರು.
ರಾಜ್ಯದಲ್ಲಿ ಸಧ್ಯ ದಿನಕ್ಕೆ 16 ರಿಂದ 17 ಸಾವಿರ ಮೆಗಾವ್ಯಾಟ್ ವಿದ್ಯುತ್ ಬೇಡಿಕೆಯಿದೆ.

ಈ ವರ್ಷ ಯಾವುದೇ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ. ಬೇಸಿಗೆಯಲ್ಲಿ ಬೇಡಿಕೆ ಹೆಚ್ಚಾದರೆ ವಿದ್ಯುತ್ ಖರೀದಿಗೂ ಸಹ ಸಿದ್ಧವಾಗಿದ್ದೇವೆಂದರು. ಲೈನ್‍ಮೆನ್‍ಗಳ ಕೊರತೆ ನಿಗಿಸಲು ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್‍ಮೆನಗಳನ್ನು ನೇಮಕ ಮಾಡಲಾಗುವುದು ಎಂದರು.


ಅಕ್ರಮ-ಸಕ್ರಮ ಸಮಸ್ಯೆಯನ್ನು ಸಹ ಶೀಘ್ರವೇ ಪರಿಹರಿಸಲಾಗುವುದೆಂದ ಅವರು ಬೀದರ ಜಿಲ್ಲೆಯಲ್ಲಿ ಒಟ್ಟು 1480 ಪ್ರಕರಣಗಳಿದ್ದು ಕ್ಯಾಬಿನೆಟ್‍ನಲ್ಲಿ ರಾಜ್ಯದ ಈ ಸಮಸ್ಯೆ ಚರ್ಚಿಸಲಾಗುವುದೆಂದು ಸಚಿವರು ತಿಳಿಸಿದರು.


ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾತನಾಡಿ, ಜಿಲ್ಲೆಯಲ್ಲಿ ವಿದ್ಯುತ್ ಅವಘಡದಲ್ಲಿ ಮರಣ ಹೊಂದಿದ 9 ಜನರ ಕುಟುಂಬಕ್ಕೆ ಈವರೆಗೂ ಪರಿಹಾರ ನೀಡಿದ ಕುರಿತು ಸಚಿವರಾದ ಕೆ.ಜೆ.ಜಾರ್ಜ್ ಸಮ್ಮುಖದಲ್ಲಿಯೇ ಅಧಿಕಾರಿಗಳನ್ನು ಕೇಳಿದರು. 3 ದಿನದೊಳಗಾಗಿ ಪರಿಹಾರ ತಲುಪಿಸುವಂತೆ ಕೆ.ಜೆ.ಜಾರ್ಜ್ ಅವರು ಅಧಿಕಾರಿಗಳಿಗೆ ಸೂಚಿಸಿದರು.


ಜಿಲ್ಲೆಯಲ್ಲಿ 13 ಉಪ ಕೇಂದ್ರಗಳ ಸ್ಥಾಪನೆಗೆ ಜಾಗದ ಸಮಸ್ಯೆಗಳಿದ್ದಲ್ಲಿ ಸ್ಥಳೀಯ ಶಾಸಕರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಅಧಿಕಾರಿಗಳು ತಕ್ಷಣ ಕಾರ್ಯ ಪ್ರವೃತ್ತರಾಗುವಂತೆ ಈಶ್ವರ ಬಿ.ಖಂಡ್ರೆ ಸೂಚಿಸಿದರು.


ಅಪಾಯಕಾರಿ ವಿದ್ಯುತ್ ತಂತಿ ಹಾಗೂ ಕಂಬಗಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಹಲವಾರು ತಿಂಗಳ ಹಿಂದೆ ಹೇಳಲಾಗಿದೆ. ಅಧಿಕಾರಿಗಳು ನಿರ್ಲಕ್ಷ ತೋರದೆ ಒಟ್ಟು ಅಪಾಯಕಾರಿ ಸ್ಥಿತಿಗತಿ ವರದಿ ನೀಡುವಂತೆ ಹಾಗೂ ತುರ್ತು ಅಗತ್ಯವಿದ್ದಲ್ಲಿ ತಕ್ಷಣವೇ ಕಂಬ/ತಂತಿ ಸರಿಪಡಿಸುವಂತೆ ಸೂಚಿಸಿದರು.


ಗಡಿ ಭಾಗದಲ್ಲಿ ಹಾಗೂ ಇತರೆಡೆ ಅನಧಿಕೃತ ಬಡಾವಣೆಗಳು ನಿರ್ಮಾಣಗೊಂಡಿವೆ. ಅವರಿಗೂ ಸಹ ವಿದ್ಯುತ್ ಸಂಪರ್ಕ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.


ಸಂಸದರಾದ ಸಾಗರ ಈಶ್ವರ ಖಂಡ್ರೆ ಅವರು ಮಾತನಾಡಿ, ಭಾಲ್ಕಿ ಸುತ್ತಲಿನ ಕೆಲ ಗ್ರಾಮಸ್ಥರು ಅಹವಾಲು ಟಿಸಿ ಬದಲಾವಣೆಗೆ ಹಾಗೂ ವಾಹನ ಸಾಗಾಟಕ್ಕೆ ಅಧಿಕಾರಿಗಳು ತೀರ ವಿಳಂಭ ಅನುಸರಿಸುತ್ತಿದ್ದು ಗ್ರಾಮಸ್ಥರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಸ್ಪಂದಿಸಲಿ ಎಂದರು.


ಈ ಸಂದರ್ಭದಲ್ಲಿ ಬಸವಕಲ್ಯಾಣ ಶಾಸಕರಾದ ಶರಣು ಸಲಗರ, ಹುಮನಾಬಾದ ಶಾಸಕರಾದ ಡಾ.ಸಿದ್ದಲಿಂಗಪ್ಪ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ ಪಾಟೀಲ್, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಪಂಕಜಕುಮಾರ ಪಾಂಡೆ, ಜೇಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ರವೀಂದ್ರ ಕರಿಂಗಣ್ಣನವರ, ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ, ಕೆಪಿಟಿಸಿಎಲ್ ಮುಖ್ಯ ಅಭಿಯಂತರಾದ ಪ್ರಕಾಶ ಬಿ., ಜೇಸ್ಕಾಂ ಮುಖ್ಯ ಅಭಿಯಂತತರಾದ ವೆಂಕಟೇಶ ಅಳ್ಳೆ, ಜೇಸ್ಕಾಂ ಅಧೀಕ್ಷಕ ಅಭಿಯಂತರರಾದ ವೀರಭದ್ರ, ಕೆಪಿಟಿಸಿಎಲ್ ಚಂದ್ರಕಾಂತ ಪಾಟೀಲ ಸೇರಿದಂತೆ ಇಲಾಖೆಯ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

prajaprabhat

Recent Posts

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

1 hour ago

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

2 hours ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

2 hours ago

ಸಾರಿಗೆ ನೌಕರರ ರಜೆ ರದ್ದು : ಸಾರಿಗೆ ಇಲಾಖೆ ಆದೇಶ

ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

2 hours ago

5 ಆಗಸ್ಟ್’ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್’ಗೆ ಅರ್ಜಿ.

ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…

3 hours ago

ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಪೋಷಕರಿಗೆ ಭತ್ಯೆ : ಸರ್ಕಾರದ ಆದೇಶ

ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…

3 hours ago