ಅಧಿಕಾರಿಗಳು, ಸಿಬ್ಬಂದಿಗೆ ಪ್ರೇರಣಾದಾಯಕ ಉಪನ್ಯಾಸ

ರಾಯಚೂರು.25.ಜುಲೈ 25: ಒತ್ತಡ ನಿರ್ವಹಣೆ ಕುರಿತು ಅಂತಾರಾಷ್ಟ್ರೀಯ ಪ್ರೇರಣಾದಾಯಕ ಭಾಷಣಕಾರರಾದ ಡಾ.ಇ.ವಿ.ಸ್ವಾಮಿನಾಥನ್ ಅವರಿಂದ ಪ್ರೇರಣಾದಾಯಕ ಉಪನ್ಯಾಸ ಕಾರ್ಯಕ್ರಮವನ್ನು ನಗರದ ಪಂಡಿತ್ ಜಂಬಲದಿನ್ನಿ ರಂಗಮoದಿರದಲ್ಲಿ ಜುಲೈ 28ರ ಮಧ್ಯಾಹ್ನ 3ಕ್ಕೆ ಏರ್ಪಡಿಸಲಾಗಿದ್ದು, ಜಿಲ್ಲೆಯ ಸರಕಾರಿ ಇಲಾಖೆಯ ಎಲ್ಲಾ ಮುಖ್ಯಸ್ಥರು, ಸಾರ್ವಜನಿಕರು ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿಗಳು ಕೋರಿದ್ದಾರೆ.

ರಾಯಚೂರಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಶಾಖೆಯವರು ಡಾ.ಇ.ವಿ. ಸ್ವಾಮಿನಾಥನ್ ಅವರ ಪ್ರೇರಣಾದಾಯಕ ಉಪನ್ಯಾಸವನ್ನು ರಾಯಚೂರು ಜಿಲ್ಲೆಯ ಸಮಸ್ತ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಏರ್ಪಡಿಸಲು ವಿನಂತಿಸಲಾಗಿದ್ದು, ಅದರಂತೆ ಜಿಲ್ಲೆಯ ಸಮಸ್ತ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಯು ಒತ್ತಡ ನಿರ್ವಹಣೆ ಕುರಿತಾದ ಉಪನ್ಯಾಸದಲ್ಲಿ ಭಾಗಿಯಾದಲ್ಲಿ ಜೀವನದಲ್ಲಿ ವೈಯಕ್ತಿಕ ಅಭಿವೃದ್ಧಿ, ಮನೋಸ್ಥೆರ್ಯ ಹಾಗೂ ಸಾರ್ವಜನಿಕ ಸೇವೆಯಲ್ಲಿನ ಪರಿಣಾಮಕಾರಿ ನಾಯಕತ್ವವನ್ನು ಉತ್ತೇಜಿಸಲು ಸಹಕಾರಿ ಆಗಲಿದೆ ಎಂದು ಆಶಿಸಲಾಗಿದ್ದು, ಜಿಲ್ಲೆಯ ಎಲ್ಲಾ ಸರಕಾರಿ ಇಲಾಖೆಯ ಮುಖ್ಯಸ್ಥರು ಸಾರ್ವಜನಿಕರ ಸೇವೆಯಲ್ಲಿ ಯಾವುದೇ ತೊಂದರೆಯಾಗದoತೆ ಅವಶ್ಯ ಕ್ರಮಗಳನ್ನು ಕೈಗೊಂಡು ಈ ಕಾರ್ಯಾಕ್ರಮದಲ್ಲಿ ತಾವು ಮತ್ತು ತಮ್ಮ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಪಾಲ್ಗೊಳ್ಳುವಂತೆ ಜಿಲ್ಲೆಯ ಸರಕಾರಿ ಇಲಾಖೆಯ ಎಲ್ಲಾ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

prajaprabhat

Recent Posts

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

3 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

7 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

13 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

14 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

14 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

14 hours ago