ಬೀದರ:09.ಜನವರಿ.25 ಬೀದರ:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ಆಯ್ಕೆ ಸಮಿತಿಗೆ ಒಬ್ಬರು 02 ವರ್ಷಗಳ ಅವಧಿಗೆ ಅಧಿಕಾರೇತರ ಸದಸ್ಯರನ್ನಾಗಿ ಆಯ್ಕೆ ಮಾಡಲು ವಿಶ್ವಕರ್ಮ ಸಮುದಾಯಗಳ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹತೆಗಳು: ನಾಮನಿರ್ದೇಶನ ಬಯಸುವ ವ್ಯಕ್ತಿಯು ಅದೇ ಜಿಲ್ಲೆಯವರಾಗಿದ್ದು ವಿಶ್ವಕರ್ಮ ಸಮುದಾಯಕ್ಕೆ ಸೇರಿದವರಾಗಿರಬೇಕು. ಅದೇ ಜಿಲ್ಲೆಯಲ್ಲಿ ಕನಿಷ್ಠ 15 ವರ್ಷಗಳು ವಾಸವಿರಬೇಕು. ಕನಿಷ್ಠ 35 ವರ್ಷದಿಂದ ಗರಿಷ್ಠ 65 ವಯೋಮಿತಿಯಲ್ಲಿರಬೇಕು. ಕನಿಷ್ಠ ಎಸ.ಎಸ.ಎಲ.ಸಿ. ವರೆಗೆ ವಿದ್ಯಾಭ್ಯಾಸ ಮಾಡಿರಬೇಕು.
ಸಂಬAಧಿಸಿದ ಜಿಲ್ಲೆಯ ಸಮಗ್ರ ಮಾಹಿತಿ ಹಾಗೂ ವಿಶ್ವಕರ್ಮ ಜನಾಂಗದವರು ವಾಸಿಸುವ ಸ್ಥಳ ಕೈಗೊಳ್ಳುತ್ತಿರುವ ಉದ್ಯೋಗ ಇತ್ಯಾದಿ ಅಂಕಿಅAಶಗಳ ಮಾಹಿತಿ ತಿಳಿದಿರಬೇಕು.ಆಯ್ಕೆ ಆಗುವ ವ್ಯಕ್ತಿಯು ನಿಗಮದಲ್ಲಿ ಅನುಷ್ಠಾನಗೊಳ್ಳುತ್ತಿರುವ ಪಂಚವೃತ್ತಿ ಯೋಜನೆಗಳ ಪರಂಪರಗಾತವಾಗಿ ಸ್ವಂತ ನಿರ್ವಹಿಸುವ ಅನುಭವ ಹೊಂದಿರಬೇಕು.
ಆಯ್ಕೆ ಆಗುವ ವ್ಯಕ್ತಿಯು ಯಾವುದೇ ರೀತಿಯ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರಬಾರದು ಹಾಗೂ ದಂಡ/ಜುಲ್ಮಾನೆ/ಶಿಕ್ಷೆ ಅನುಭವಿಸರಬಾರದು.
ಆಯ್ಕೆ ಸಮಿತಿಯು ಜಿಲ್ಲಾ ಮಟ್ಟದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಮಿತಿ ಆಗಿದ್ದು ಅಂತಹ ಸಮಿತಿಗಳಿಗೆ ಸರಳ ಸಜ್ಜನಿಕೆ ಹಾಗೂ ಇತರರೊಂದಿಗೆ ಗೌರವನ್ವಿತವಾಗಿ ವರ್ತಿಸುವಂತಹ ವಿವೇಕಯುಳ್ಳ ಪ್ರಜ್ಞಾವಂತರನ್ನು ಗುರುತ್ತಿಸಿ ಆಯ್ಕೆ ಮಾಡುವುದು.
ಈ ಆಯ್ಕೆಯು ನೇಮಕಗೊಂಡAದಿನಿAದ 2 ವರ್ಷಗಳ ಕಾಲಾವಧಿ ಇರುತ್ತದೆ. ಈ ಅವಧಿಯಲ್ಲಿ ಸತತ ಮೂರು ಸಭೆಗಳಿಗೆ ಗೈರು ಹಾಜರಾದ್ದಲ್ಲಿ ಮತ್ತು ಆಯ್ಕೆ ಸಮಿತಿಯ ಅಧ್ಯಕ್ಷರು/ಸದಸ್ಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲಿ ವಜಾ ಮಾಡಬಹುದು.
ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ:31-01-2025 ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ, ನಂ. 9-8-175/5ಬಿ, ಬಿವ್ಹಿಬಿ ಕಾಲೇಜ ರಸ್ತೆ, ಮೈಲೂರ ಕ್ರಾಸ್, ಬಸವನಗರ-585403 ಇವರಿಗೆ ಅರ್ಜಿ ಸಲ್ಲಿಸಬೇಕು.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…