ಮುಖ್ಯಮಂತ್ರಿ, ಕಂದಾಯ ಇಲಾಖೆಗೆ ಧನ್ಯವಾದ ಅರ್ಪಿಸಿದ ಈಶ್ವರ ಖಂಡ್ರೆ
ಬೀದರ.21. ಜೂನ್.25:-ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪದ 742 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಇಲಾಖೆಗೆ ಧನ್ಯವಾದ ಅರ್ಪಿಸಿದ್ದಾರೆ.
ಭೂ ವಿವಾದದಿಂದಾಗಿ ಅನುಭವ ಮಂಟಪಕ್ಕೆ ಆರಂಭದಲ್ಲಿ ನಿರ್ಧರಿಸಲಾಗಿದ್ದ ಸ್ಥಳದಲ್ಲಿ ಕಾಮಗಾರಿ ನಡೆಸಲಾಗದೆ, ಬೇರೆ ಸ್ಥಳದಲ್ಲಿ ಕಾಮಗಾರಿ ಮಾಡಬೇಕಾಗಿ ಬಂದ ಹಿನ್ನೆಲೆಯಲ್ಲಿ ಹಾಗೂ ಜಿಎಸ್ಟಿ ಶೇ.18ಕ್ಕೆ ಏರಿಕೆ ಆದ ಕಾರಣ ಯೋಜನಾ ವೆಚ್ಚ 612 ಕೋಟಿ ರೂ. ಬದಲಾಗಿ 742 ಕೋಟಿ ರೂ.ಗೆ ಹೆಚ್ಚಳವಾಗಿದ್ದು, ಇದಕ್ಕೆ ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಪರಿಷ್ಕೃತ ಅಂದಾಜು ವೆಚ್ಚದಂತೆ 132 ಕೋಟಿ ರೂ. ಹೆಚ್ಚಳವಾಗಿದ್ದು, ಇದಕ್ಕೆ ಅನುಮೋದನೆ ನೀಡಿದ ಸಚಿವ ಸಂಪುಟದ ಎಲ್ಲ ಸಚಿವರಿಗೆ ಮತ್ತು ಭೂಮಿ ನೀಡಿದ ಕಂದಾಯ ಇಲಾಖೆಗೆ ಈಶ್ವರ ಖಂಡ್ರೆ ಧನ್ಯವಾದ ಅರ್ಪಿಸಿದ್ದಾರೆ.
2026ರ ವರ್ಷಾಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ ಮುಖ್ಯಮಂತ್ರಿಗಳ ಅಮೃತ ಹಸ್ತದಿಂದ ಉದ್ಘಾಟನೆ ಮಾಡಿಸಲು ಕಾಮಗಾರಿಗೆ ವೇಗ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…