ಅನ್ಯಭಾಷಿಕರಿಗೆ ಕನ್ನಡ ಕಲಿಕಾ ತರಬೇತಿಗೆ : ಅರ್ಜಿ ಆಹ್ವಾನ

ಉಡುಪಿ, 04.ಜೂ.25: ಜಿಲ್ಲೆಯಲ್ಲಿ ಅನ್ಯಭಾಷಿಕರಿಗೆ ಕನ್ನಡ ಕಲಿಸುವ ತರಬೇತಿ  ಕುರಿತು ಜಿಲ್ಲೆಯಲ್ಲಿರುವ ಕೇಂದ್ರೋದ್ಯಮಗಳು, ಬ್ಯಾಂಕ್‌ಗಳು, ಕೇಂದ್ರ ಸರ್ಕಾರಿ ಕಚೇರಿಗಳು ಹಾಗೂ ವಸತಿ ಸಮುಚ್ಚಯ ಗಳಲ್ಲಿರುವ ಕನ್ನಡೇತರರು, ಅನ್ಯಭಾಷಿಕರಿಗೆ ಕನ್ನಡ ಕಲಿಸುವ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸಿ ಕೊಳ್ಳಬಹುದು.

ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಕನ್ನಡೇತರರಿಗೆ ಕನ್ನಡ ಕಲಿಸುವ ಪ್ರಯತ್ನವನ್ನು ಹಲವು ವರ್ಷಗಳಿಂದ ನಿರಂತರವಾಗಿ ಕೈಗೊಳ್ಳಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಇನ್ನಷ್ಟು ವ್ಯಾಪಕಗೊಳಿಸಲು ಪ್ರಾಧಿಕಾರವು ವೈಜ್ಞಾನಿಕ ಪಠ್ಯಕ್ರಮವನ್ನು ರೂಪಿಸಿ, ತರಬೇತಿ ಹೊಂದಿದ ಶಿಕ್ಷಕರನ್ನು ಆಯೋಜಿಸುವ ಮೂಲಕ ವೃತ್ತಿಪರತೆಯನ್ನು ಒದಗಿಸಲಿದೆ.

ಕನ್ನಡ ಕಲಿಸುವ ತರಬೇತಿಯನ್ನು 3 ತಿಂಗಳ ಅವಧಿಯಲ್ಲಿ ವಾರಕ್ಕೆ 3 ದಿನದಂತೆ ಪ್ರತಿದಿನ 01 ಗಂಟೆ ತರಬೇತಿಯನ್ನು ನೀಡಲಾಗುವುದು. ಆಸಕ್ತ ಕನ್ನಡೇತರರು ತಮ್ಮ ಸ್ವ-ವಿವರದೊಂದಿಗೆ ಜೂನ್ 7ರ ಒಳಗೆ ಅರ್ಜಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ನಿರ್ದೇಶಕರ ಕಛೇರಿ, ಡಾ.ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿ ನಗರ, ಅಲೆವೂರು ಗ್ರಾಮ, ಮಣಿಪಾಲ, ಉಡುಪಿ ಇಲ್ಲಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂಖ್ಯೆ: 0820-2986168, ಮೊ.ನಂ:7026506627 ಅನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

6 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

6 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

6 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

6 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

6 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

7 hours ago