ಬೀದರ.19.ಜನವರಿ.25:- ಹುಮನಾಬಾದ ಪಟ್ಟಣದ ವಾಂಜ್ರಿ ಕೆರೆಯಲ್ಲಿ ದಿನಾಂಕ: 07-01-2025 ರಂದು ಅಂದಾಜು 35-40 ವರ್ಷ ವಯಸ್ಸಿನ ಒಬ್ಬ ಅಪರಿಚಿತ ಗಂಡು ವ್ಯಕ್ತಿಯ ದೇಹವು ಕಂಡುಬAದಿದ್ದು, ಈವರೆಗೆ ಮೃತನ ವಾರಸುದಾರರು ಯಾರೆಂದು ತಿಳಿದುಬಂದಿರುವುದಿಲ್ಲ ಹುಮನಾಬಾದ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ತಿಳಿಸಿದ್ದಾರೆ.
ಸದರಿ ಅಪರಿಚಿತ ಮೃತ ವ್ಯಕ್ತಿಯು 5 ಫೀಟ್ 2 ಇಂಚ್ ಎತ್ತರ ಇದ್ದು, ಬಿಳಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮೈಮೇಲೆ ತಿಳಿ ಅರಿಶೀನ ಬಣ್ಣದ ಫುಲ ಶರ್ಟ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ನೀರಿನಲ್ಲಿ ಮುಳಗಿ ಮೃತಪಟ್ಟಿದ್ದರಿಂದ ದೇಹವು ಉಬ್ಬಿದ್ದು, ವ್ಯಕ್ತಿಯ ಮುಖವು ನೀರಿನ ಜಲಚರ ಪ್ರಾಣಿಗಳು ತಿಂದತೆ ಕಂಡುಬoದಿರುತ್ತದೆ. ಈ ಚಹರೆವುಳ್ಳ ಮೃತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ/ಸುಳಿವು ಸಿಕ್ಕಲ್ಲಿ ಪೊಲೀಸ್ ಅಧೀಕ್ಷಕರು ಬೀದರ (08482-226701-9480803401), ಪೊಲೀಸ್
ಉಪಾಧೀಕ್ಷಕರು ಹುಮನಾಬಾದ (08483-270028, 270576, 9480803422), ಪೊಲೀಸ್ ವೃತ್ತ ನಿರೀಕ್ಷಕರು ಹುಮನಾಬಾದ (08483-270159, 9480803435), ಪಿ.ಎಸ್.ಐ. ಹುಮನಾಬಾದ ಪೊಲೀಸ್ ಠಾಣೆ (08483-270033, 9480803452), ಜಿಲ್ಲಾ ನಿಸ್ತಂತು ಕೋಠಡಿ ಸಂಖ್ಯೆ (08482-226704) ಗೆ ಸಂಪರ್ಕಿಸುವoತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…