13/08/2025 1:06 AM

Translate Language

Home » ಲೈವ್ ನ್ಯೂಸ್ » ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು

Facebook
X
WhatsApp
Telegram

ಬೆಂಗಳೂರು.12.ಆಗಸ್ಟ್.25: ರಾಜ್ಯಾದ್ಯಂತ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ “ಅರಣ್ಯ ವೀಕ್ಷಕ” ಹುದ್ದೆಗಳ ಶೀಘ್ರ ನೇಮಕ ಮಾಡಲಾಗುವುದೆಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

ಮಂಗಳೂರು ಅರಣ್ಯ ವಿಭಾಗದಲ್ಲಿ ಮಾನವ- ಆನೆ ಸಂಘರ್ಷ ತಡೆಯುವಲ್ಲಿ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಅವರು ನಿಯಮ 72 ರಡಿ ಕೇಳಲಾದ ಗಮನ‌ ಸೆಳೆಯುವ ಸೂಚನೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಉತ್ತರಿಸಿದ್ದಾರೆ.

ಗಸ್ತು ಅರಣ್ಯ ಪಾಲಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ ವಹಿಸಲಾಗಿದೆ. ಅದರಲ್ಲಿ ಮಂಗಳೂರು ವಿಭಾಗಕ್ಕೆ 21 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

ಇನ್ನು ಅರಣ್ಯ ವೀಕ್ಷಕ ವೃಂದದಲ್ಲಿ ಖಾಲಿ‌ ಇರುವ ಹುದ್ದೆಗಳನ್ನು ನೇರ ನೇಮಕಾತಿಯಡಿ ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಬಸವ ಕಲ್ಯಾಣದ ಸಮಗ್ರ ಅಭಿವೃದ್ಧಿ ಕ್ರಮ

ಬಸವ ಕಲ್ಯಾಣದ ಸಮಗ್ರ ಅಭಿವೃದ್ಧಿಗೆ ಕ್ರಮವಹಿಸಲಾಗುವುದೆಂದು ಸಚಿವ ಈಶ್ವರ್ ಖಂಡ್ರೆವಿಧಾನ ಪರಿಷತ್ ನಲ್ಲಿ ತಿಳಿಸಿದರು.

ವಿಧಾನ ಪರಿಷತ್ ಸದಸ್ಯರಾದ ಡಾ‌. ಎಂ.ಜಿ.ಮುಳೆ ಅವರು ನಿಯಮ 72 ರ ಗಮನ ಸೆಳೆಯುವ ಸೂಚನೆಯಡಿ ಬಸವ ಕಲ್ಯಾಣ ಅಭಿವೃಧ್ದಿಗೆ ಅನುದಾನ‌ ಕೊರತೆ ಕುರಿತಂತೆ ಕೇಳಲಾದ ಪ್ರಶ್ನೆಗೆ ಕಂದಾಯ ಸಚಿವರ ಪರವಾಗಿ ಉತ್ತರಿಸಿದ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ, ಬಸವ ಕಲ್ಯಾಣದ ಸಮಗ್ರ ಅಭಿವೃದ್ಧಿಗಾಗಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ರಚನೆಯಾಗಿದ್ದು, ಇಲ್ಲಿಯವರೆಗೆ 17 ಸ್ಮಾರಕಗಳನ್ನು ಅಭಿವೃದ್ದಿ ಪಡಿಸಲಾಗಿದ್ದು, ಉಳಿದ ಸ್ಮಾರಕಗಳ ಅಭಿವೃದ್ಧಿಯನ್ನು ಅನುದಾನದ ಲಭ್ಯತೆಗೆ ಅನುಗುಣವಾಗಿ ಅಭಿವೃದ್ಧಿ ಮಾಡಲಾಗುತ್ತಿದೆ.

26-06-2025 ರಲ್ಲಿ ನೂತನ ಅನುಭವ ಮಂಟಪ ನಿರ್ಮಾಣ ಯೋಜನೆ ಪರಿಷ್ಕೃತ ಗೊಂಡಿದ್ದು, 742 ಕೋಟಿಗಳಿಗೆ ಅನುಮೋದನೆ ನೀಡಲಾಗಿದ್ದು, ಸರ್ಕಾರ ಇದುವರೆಗೆ 325 ಕೋಟಿ ಬಿಡುಗಡೆ ಮಾಡಿದ್ದು ಕಾಮಗಾರಿ ಪ್ರಗತಿಯಲ್ಲಿದೆ ಎಂದರು ಶರಣರ ವಚನಗಳ ಸಂಗ್ರಹ ಕಾರ್ಯ ಪೂರ್ಣಗೊಂಡಿದ್ದು, ಅದನ್ನು ಧ್ವನಿ ಮತ್ತು ದೃಶ್ಯ ಮಾಧ್ಯಮಗಳ ಮೂಲಕ ನೂತನ ಅನುಭವ ಮಂಟಪದ ಒಳಾಂಗಣದಲ್ಲಿ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ.

ಬಸವ ವನ ಉದ್ಯಾನವನದ ಸುತ್ತ ತಡೆಗೋಡೆಯನ್ನು ಸಹ ನಿರ್ಮಿಸಲಾಗಿದೆ ಎಂದು ಹೇಳಿದರು.

ನೇಮಕ ಮಾಡಲಾಗುವುದೆಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

ಮಂಗಳೂರು ಅರಣ್ಯ ವಿಭಾಗದಲ್ಲಿ ಮಾನವ- ಆನೆ ಸಂಘರ್ಷ ತಡೆಯುವಲ್ಲಿ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಅವರು ನಿಯಮ 72 ರಡಿ ಕೇಳಲಾದ ಗಮನ‌ ಸೆಳೆಯುವ ಸೂಚನೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಉತ್ತರಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾನವ- ಆನೆ ಸಂಘರ್ಷ ನಿಯಂತ್ರಿಸುವ ಸಲುವಾಗಿ ಸರ್ಕಾರ ಆನೆ ನಿರೋಧಕ ಕಂದಕ‌ ನಿರ್ಮಾಣ, ನಿರಂತರ ಗಸ್ತು ತಿರುಗುವುದು, ಆನೆಗಳನ್ನು ಮತ್ತೆ ಅರಣ್ಯ ಪ್ರದೇಶಕ್ಕೆ ಓಡಿಸುವುದು, ಕಾಡಾನೆ ಹಾವಳಿ ಇರುವ ಗ್ರಾಮಗಳಲ್ಲಿ ವಾಟ್ಸಪ್ ಗುಂಪು ರಚಿಸಿ ಆನೆ ಹಾವಳಿ ಕುರಿತು ಸಂದೇಶ ನೀಡುವುದು, ಆನೆ ಸಂಚರಿಸುವ ಪ್ರದೇಶಗಳಲ್ಲಿ ಸೂಚನಾ ಫಲಕ‌ ಅಳವಡಿಸುವಂತಹ ಕಾರ್ಯಗಳನ್ನು‌ ಇಲಾಖೆ ಕೈಗೊಂಡಿದೆ.

ಸಂಘರ್ಷದ ಸಂದರ್ಭದಲ್ಲಿ ಕಾಡಾನೆಗಳನ್ನು ಸೆರೆಹಿಡಿಯುವ ಸಲುವಾಗಿ ಮೂರು ತಂಡಗಳನ್ನು‌ ರಚಿಸಿದ್ದು ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಸೆರೆಹಿಡಿಯುವ ಕಾರ್ಯಾಚರಣೆ‌ ನಡೆದಲ್ಲಿ ಈ ತಂಡವನ್ನು ನಿಯೋಜಿಸಲಾಗುತ್ತಿದೆ.

ಗಸ್ತು ಅರಣ್ಯ ಪಾಲಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ ವಹಿಸಲಾಗಿದೆ. ಅದರಲ್ಲಿ ಮಂಗಳೂರು ವಿಭಾಗಕ್ಕೆ 21 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

ಇನ್ನು ಅರಣ್ಯ ವೀಕ್ಷಕ ವೃಂದದಲ್ಲಿ ಖಾಲಿ‌ ಇರುವ ಹುದ್ದೆಗಳನ್ನು ನೇರ ನೇಮಕಾತಿಯಡಿ ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಬಸವ ಕಲ್ಯಾಣದ ಸಮಗ್ರ ಅಭಿವೃದ್ಧಿ ಕ್ರಮ

ಬಸವ ಕಲ್ಯಾಣದ ಸಮಗ್ರ ಅಭಿವೃದ್ಧಿಗೆ ಕ್ರಮವಹಿಸಲಾಗುವುದೆಂದು ಸಚಿವ ಈಶ್ವರ್ ಖಂಡ್ರೆವಿಧಾನ ಪರಿಷತ್ ನಲ್ಲಿ ತಿಳಿಸಿದರು.

ವಿಧಾನ ಪರಿಷತ್ ಸದಸ್ಯರಾದ ಡಾ‌. ಎಂ.ಜಿ.ಮುಳೆ ಅವರು ನಿಯಮ 72 ರ ಗಮನ ಸೆಳೆಯುವ ಸೂಚನೆಯಡಿ ಬಸವ ಕಲ್ಯಾಣ ಅಭಿವೃಧ್ದಿಗೆ ಅನುದಾನ‌ ಕೊರತೆ ಕುರಿತಂತೆ ಕೇಳಲಾದ ಪ್ರಶ್ನೆಗೆ ಕಂದಾಯ ಸಚಿವರ ಪರವಾಗಿ ಉತ್ತರಿಸಿದ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ, ಬಸವ ಕಲ್ಯಾಣದ ಸಮಗ್ರ ಅಭಿವೃದ್ಧಿಗಾಗಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ರಚನೆಯಾಗಿದ್ದು, ಇಲ್ಲಿಯವರೆಗೆ 17 ಸ್ಮಾರಕಗಳನ್ನು ಅಭಿವೃದ್ದಿ ಪಡಿಸಲಾಗಿದ್ದು, ಉಳಿದ ಸ್ಮಾರಕಗಳ ಅಭಿವೃದ್ಧಿಯನ್ನು ಅನುದಾನದ ಲಭ್ಯತೆಗೆ ಅನುಗುಣವಾಗಿ ಅಭಿವೃದ್ಧಿ ಮಾಡಲಾಗುತ್ತಿದೆ.

26-06-2025 ರಲ್ಲಿ ನೂತನ ಅನುಭವ ಮಂಟಪ ನಿರ್ಮಾಣ ಯೋಜನೆ ಪರಿಷ್ಕೃತ ಗೊಂಡಿದ್ದು, 742 ಕೋಟಿಗಳಿಗೆ ಅನುಮೋದನೆ ನೀಡಲಾಗಿದ್ದು, ಸರ್ಕಾರ ಇದುವರೆಗೆ 325 ಕೋಟಿ ಬಿಡುಗಡೆ ಮಾಡಿದ್ದು ಕಾಮಗಾರಿ ಪ್ರಗತಿಯಲ್ಲಿದೆ ಎಂದರು ಶರಣರ ವಚನಗಳ ಸಂಗ್ರಹ ಕಾರ್ಯ ಪೂರ್ಣಗೊಂಡಿದ್ದು, ಅದನ್ನು ಧ್ವನಿ ಮತ್ತು ದೃಶ್ಯ ಮಾಧ್ಯಮಗಳ ಮೂಲಕ ನೂತನ ಅನುಭವ ಮಂಟಪದ ಒಳಾಂಗಣದಲ್ಲಿ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ.

ಬಸವ ವನ ಉದ್ಯಾನವನದ ಸುತ್ತ ತಡೆಗೋಡೆಯನ್ನು ಸಹ ನಿರ್ಮಿಸಲಾಗಿದೆ ಎಂದು ಹೇಳಿದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD