03/08/2025 1:10 AM

Translate Language

Home » ಲೈವ್ ನ್ಯೂಸ್ » ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

Facebook
X
WhatsApp
Telegram

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹತೆಗಳು:- ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ಹಾಗೂ ಪಿ.ಹೆಚ್.ಡಿ. ನಲ್ಲಿ ವ್ಯಾಸಂಗ ಮಾಡುವ ಆರ್ಯವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1,00,000 ಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ವರ್ಷಮೇಲ್ಪಟ್ಟು 35 ವರ್ಷದೊಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000 ಗಳ ಮಿತಿಯೊಳಗಿರಬೇಕು.

ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಹಾಗೂ ತಮ್ಮ ಬ್ಯಾಂಕ ಖಾತೆಗೆ ಆಧಾರ ಸಂಖ್ಯೆಯನ್ನು ರ್ಸಂಖ್ಯೆಯನ್ನು ಸೀಡ್ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33% ಹಾಗೂ ವಿಕಲಚೇತನರಿಗೆ ಶೇ.5% ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಅರ್ಹರು ಅನ್‌ಲೈನ್ http://kacdc.karnataka.gov.in  ರ ಮೂಲಕ ದಿನಾಂಕ: 31-10-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ 94484 51111 ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!